ಅಡಕೆ ಬೆಳೆಗಾರರು ಆತಂಕಪಡಬೇಕಿಲ್ಲ: ಆರಗ


Team Udayavani, Oct 17, 2020, 7:05 PM IST

sm-tdy-1

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಅಭಯ ನೀಡಿರುವುದರಿಂದ ಅಡಿಕೆ ಬೆಳೆಗಾರರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಅಡಿಕೆ ಕಾರ್ಯಪಡೆ(ಟಾಸ್ಕ್ ಫೋರ್ಸ್‌) ಅಧ್ಯಕ್ಷ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಡಿಕೆ ಆತಂಕದ ಬೆಳೆಯೂ ಕೂಡ. ಇತ್ತೀಚೆಗೆ ಅಡಿಕೆಗೆ ಸಂಬಧಿಸಿದಂತೆ  ವದಂತಿಗಳು ಹಬ್ಬುತ್ತಿವೆ. ಆದರೆ ಬೆಳೆಗಾರರು ಯಾವ ಆತಂಕ ಪಡಬೇಕಾಗಿಲ್ಲ. ಶಾಸಕರಾದ ಎಚ್‌.ಹಾಲಪ್ಪ, ರೇಣುಕಾಚಾರ್ಯ ಮತ್ತು ಅಡಿಕೆ ಸಂಸ್ಥೆಗಳ ಮುಖಂಡರ ಜೊತೆಗೂಡಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೇವೆ. ಅವರು ಅಡಿಕೆ ಬೆಳೆಗಾರರು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ ಎಂದರು.

ವಿವಿ ತಜ್ಞರ ವರದಿ ಬರುವ ತನಕ ನ್ಯಾಯಾಲಯದಲ್ಲಿರುವ ಪ್ರಕರಣವನ್ನು ಮುಂದಕ್ಕೆ ಹಾಕುವಂತೆ ಮನವಿ ಮಾಡಿದ್ದೇವೆ. ಸಮಿತಿ ನೀಡುವ ವರದಿ ಆಧಾರದಲ್ಲಿ ನ್ಯಾಯಾಲಯದಲ್ಲಿ ಕೇಸು ಮುಂದುವರೆಸಿ ಅಡಿಕೆ ಬೆಳೆ ಹಾನಿಕಾರಕ  ಅಲ್ಲ ಎಂಬುದನ್ನು ಸಾಬೀತು ಪಡಿಸಿ ಬೆಳೆಗಾರರಿಗೆ ರಕ್ಷಣೆ ನೀಡುತ್ತೇವೆ. ಯಾವ ವದಂತಿಗಳಿಗೂ ಕಿವಿ ಗೊಡಬಾರದು. ಮುಖ್ಯಮಂತ್ರಿ ಅಡಿಕೆ ಬೆಳೆಗಾರರ ರಕ್ಷಕರಾಗಿದ್ದಾರೆ ಎಂದರು.

ಮಲೆನಾಡು ಭಾಗದಲ್ಲಿ ಕಸ್ತೂರಿ ರಂಗನ್‌ ವರದಿ ಜಾರಿಯಾಗದೇ ಆ ಭಾಗದ ಸುಮಾರು 166 ಗ್ರಾಮಗಳ ಜನರಿಗೆ ಸಂಕಷ್ಟ ಎದುರಾಗಲಿದೆ. ವರದಿಯಲ್ಲಿರುವಂತೆ ಸುಮಾರು 10 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಸೂಕ್ಷ್ಮ ಪ್ರದೇಶವೆಂದು ಕರೆಯಲಾಗುತ್ತದೆ. ಅಲ್ಲಿ ಯಾವ ಅಭಿವೃದ್ಧಿ ಕೆಲಸವೂ ಆಗುವುದಿಲ್ಲ. ಮನೆ ಕಟ್ಟುವ ಹಾಗಿಲ್ಲ. ಗದ್ದೆಗೆ ಔಷಧ ಹೊಡೆಯುವ ಹಾಗಿಲ್ಲ. ಕಲ್ಲು ಮರಳು ತೆಗೆಯುವ ಹಾಗಿಲ್ಲ. ಇದು ರೈತರಿಗೆ ಮರಣ ಶಾಸನವೇ ಆಗಲಿದೆ. ಹಾಗಾಗಿ ಇದನ್ನು ಯಾವಾಗಲೂ ವಿರೋಧಿ ಸುತ್ತಲೇ ಬಂದಿದ್ದೇವೆ ಎಂದರು. ಆದರೆ ಹಸಿರುಪೀಠ ಈ ವರದಿಯನ್ನು ಜಾರಿ ಮಾಡುವಂತೆ ನ್ಯಾಯಾಲಯದಲ್ಲಿ ಒತ್ತಡ ಹಾಕುತ್ತಿದೆ. ಜನರ ಮೇಲೆ ಕಸ್ತೂರಿ ರಂಗನ್‌ ವರದಿ ತೂಗುಕತ್ತಿ ಇದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಕೇಂದ್ರ ಸಚಿವರೊಂದಿಗೆ ಮಾತನಾಡಿದ್ದಾರೆ.

ಯಾವುದಕ್ಕೂ ನಮ್ಮ ಒಪ್ಪಿಗೆ ಇಲ್ಲದೇ ಜಾರಿಗೆ ತರಬಾರದು ಎಂದಿದ್ದಾರೆ ಮತ್ತು ಈ ವಿಷಯ ಕೂಡ ನ್ಯಾಯಾಲಯದಲ್ಲಿ ಇರುವುದರಿಂದ ಇದಕ್ಕೂ ಕೂಡ ವಕೀಲರನ್ನು ನೇಮಕ ಮಾಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದರು. ಆರ್‌.ಎಂ.ಮಂಜುನಾಥ ಗೌಡರ ಅನರ್ಹತೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಚುಟುಕಾಗಿ ಉತ್ತರಿಸಿದ ಅವರು, ನಿಯಮದಂತೆಯೇ ಅವರನ್ನು ಅನರ್ಹಗೊಳಿಸಲಾಗಿದೆ. ರೈತರ ಬ್ಯಾಂಕ್‌ ಸಶಕ್ತವಾಗಿ ಉಳಿಯಬೇಕೆಂಬುದು ನಮ್ಮ ಆಶಯವಷ್ಟೆ ಎಂದರು.

ಕ್ಯಾಂಪ್ಕೋ ಅಧ್ಯಕ್ಷ ಸತೀಶ್‌ಚಂದ್ರ, ಮಾಜಿ ಅಧ್ಯಕ್ಷ ಪದ್ಮನಾಭ್‌, ತುಮ್ಕೋಸ್‌ ಮಾಜಿ ಅಧ್ಯಕ್ಷ ಶಿವಕುಮಾರ್‌, ದಯಾನಂದ್‌ ಇದ್ದರು.

ಅಡಿಕೆಗೆ ಸಂಬಂಧಿ ಸಿದಂತೆ ಸಿಗರೇಟ್‌ ಕಂಪನಿಗಳು ಲಾಬಿ ಮಾಡುತ್ತಿರುವುದು ನಿಜ.ಇದರ ಜೊತೆಗೆ ಹಿಂದಿನ ಕೇಂದ್ರ ಸರ್ಕಾರ ಸುಪ್ರಿಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿಅಡಿಕೆ ಹಾನಿಕರ ಬೆಳೆ ಎಂದು ಹೇಳಿತ್ತು. ಈಗ ಅದು ನ್ಯಾಯಾಲಯದಲ್ಲಿದೆ. ಅದಕ್ಕಾಗಿ ನ್ಯಾಯಾಲಯಕ್ಕೆ ಹೋಗುವುದು ಅನಿವಾರ್ಯವಾಗಿದೆ. ಇದಕ್ಕಾಗಿಯೇ ತಜ್ಞರ ನೆರವು ಪಡೆದಿದ್ದೇವೆ. ರಾಮಯ್ಯ ವಿವಿ ಇದನ್ನು ಕೈಗೆತ್ತಿಕೊಂಡಿದೆ. ಅದಕ್ಕಾಗಿ ಹಣ ಕೂಡ ನೀಡಬೇಕು ಮತ್ತು ವಕೀಲರನ್ನು ನೇಮಕ ಮಾಡಬೇಕಾಗುತ್ತದೆ. ಇದಕ್ಕಾಗಿ 2 ಕೋಟಿ ರೂ. ಹಣ ಬೇಕಾಗಬಹುದು. ಮುಖ್ಯಮಂತ್ರಿಗಳು ನೀಡುವ ಭರವಸೆ ನೀಡಿದ್ದಾರೆ. – ಆರಗ ಜ್ಞಾನೇಂದ್ರ, ಶಾಸಕರು

ಟಾಪ್ ನ್ಯೂಸ್

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

5

Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.