ಕೃಷಿ ಕ್ಷೇತ್ರದಲ್ಲಿ ಪರಿಸರಸ್ನೇಹಿ ಅವಿಷ್ಕಾರಗಳು ನಡೆಯುತ್ತಿರಬೇಕು : ಸಚಿವ ಸದಾನಂದ ಗೌಡ
Team Udayavani, Oct 17, 2020, 9:07 PM IST
ಬೆಂಗಳೂರು: ಕೃಷಿ ಕ್ಷೇತ್ರದಲ್ಲಿ ನಿರಂತರವಾಗಿ ಅವಿಷ್ಕಾರಗಳು ನಡೆಯುತ್ತಿರಬೇಕು. ಆದರೆ ಅವು ಪರಿಸರ ಸ್ನೇಹಿಯಾಗಿರಬೇಕು. ಬೇಸಾಯ ಸುಸ್ಥಿರವಾಗಿರಬೇಕು ಎಂದಾದರೆ ರೈತರು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಿ ಸಾವಯವ ಕೃಷಿಗೆ ಒತ್ತು ನೀಡಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು ಕರೆ ನೀಡಿದ್ದಾರೆ.
ಭಾರತೀಯ ಕೈಗಾರಿಕೆಗಳ ಒಕ್ಕೂಟವು (ಸಿಐಐ) ಆಶ್ರಯದಲ್ಲಿ ಸಂಘಟಿಸಲಾಗಿರುವ “ಸಿಐಐ ಎಗ್ರೋ ಹಾಗೂ ಫೂಡ್ ಟೆಕ್ 2020” ವರ್ಚವಲ್ ಕಾನ್ಫರೆನ್ಸ್ ಉದ್ದೇಶಿಸಿ ಮಾತನಾಡಿದ ಸಚಿವ ಸದಾನಂದ ಗೌಡ ಅವರು ದೀರ್ಘಕಾಲದವರೆಗೆ ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಲು ಸಾವಯವ ಕೃಷಿ ಅನಿವಾರ್ಯ ಎಂದರು.
ರೈತರಿಗೆ ಬೇಸಾಯ ಮಾಡುವಲ್ಲಿ ಬೇಕಾದ ಬೀಜ, ಗೊಬ್ಬರ ನೀರು ಮುಂತಾದ ಮೂಲಸಾಮಗ್ರಿಗಳು ಹಾಗೂ ಬೇಸಾಯವನ್ನು ಸುಲಭಗೊಳಿಸುವ ತಂತ್ರಜ್ಞಾನನ್ನು ಒದಗಿಸುವಲ್ಲಿ ಸರ್ಕಾರದೊಂದಿಗೆ ಖಾಸಗಿ ಕಂಪನಿಗಳು ಸಕ್ರೀಯವಾಗಿ ಕೈಜೋಡಿಸುವುದು ಅವಶ್ಯಕವಾಗಿದೆ. ಕೃಷಿಗೆ ಪೂರಕ ವಾತಾವರಣ ಮೂಡಿಸುವ ಹೊಣೆಗಾರಿಕೆ ಸರ್ಕಾರ ಹಾಗೂ ಖಾಸಗಿ ವಲಯಗಳೆರಡರ ಮೇಲೂ ಇದೆ ಎಂದು ಸಚಿವರು ಅಭಿಪ್ರಾಯಪಟ್ಟರು.
ಇದನ್ನೂ ಓದಿ:ನೆರೆ ಹಾವಳಿಯಿಂದ ಕರ್ನಾಟಕ ನಲುಗಿ ಹೋದರೂ ಸರಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ: ಸಿದ್ದು
ಎಲ್ಲ ಅನಾನುಕೂಲ ವಾತಾವರಣಗಳ ಮಧ್ಯೆಯೂ ಕೃಷಿ ವಲಯಯವು ಉತ್ತಮ ಪ್ರಗತಿ ಸಾಧಿಸುತ್ತಿದೆ. ಈ ಬಾರಿ, ಸಕಾಲದಲ್ಲಿ ಬಂದ ಉತ್ತಮ ಮಳೆಯಿಂದ ಬಿತ್ತನೆ ಪ್ರದೇಶ ಬಹಳಷ್ಟು ಹೆಚ್ಚಾಗಿದೆ. ಹೀಗಾಗಿ ರಸಗೊಬ್ಬರ ಬೇಡಿಕೆಯಲ್ಲೂ ಹೆಚ್ಚಾಗಿದೆ. ಆದರೆ ನಮ್ಮ ಇಲಾಖೆಯು ಉತ್ಪಾದನೆ, ಸಾಗಣೆಗೆ ಸಂಬಂಧಿಸಿದಂತೆ ಸಕಾಲದಲ್ಲಿ ಕೈಗೊಂಡ ಕ್ರಮಗಳಿಂದಾಗಿ ದೇಶಾದ್ಯಂತ ಅತ್ಯಂತ ಸಮರ್ಪಕವಾಗಿ ರಸಗೊಬ್ಬರ ಪೂರೈಕೆ ನಡೆಯಿತು ಎಂದು ಅವರು ತಿಳಿಸಿದರು.
ಪ್ರಧಾನಿಯವರ ಆಶಯದಂತೆ ರಸಗೊಬ್ಬರ ವಲಯದಲ್ಲಿ ಸಂಪೂರ್ಣ ಸ್ವಾಲಂಬನೆ ಗಳಿಸುವಲ್ಲಿ ನಮ್ಮ ರಸಗೊಬ್ಬರ ಇಲಾಖೆಯು ಅನೇಕ ಕ್ರಮಗಳನ್ನು ಕೈಗೊಂಡಿದೆ. ಪೊಟಾಷ್ ಗೊಬ್ಬರಕ್ಕೆ ಸಂಬಂಧಿಸಿದಂತೆ ನಾವು ಬಹುತೇಕ ಆಮದನ್ನೇ ಅವಲಂಬಿಸಿದ್ದೇವೆ. ಆದರೆ ಶೇಕಡಾ ೮೦ರಷ್ಟು ಯೂರಿಯಾ ಸ್ವದೇಶದಲ್ಲಿಯೇ ಉತ್ಪಾದನೆ ಮಾಡುತ್ತಿದ್ದೇವೆ. ಪೊಸ್ಫೆಟಿಕ್ ನಮೂನೆಯ ಗೊಬ್ಬರ ಅರ್ಧದಷ್ಟು ನಮ್ಮಲ್ಲಿಯೇ ಉತ್ಪಾದನೆ ಆಗುತ್ತದೆ. ರಸಗೊಬ್ಬರಕ್ಕೆ ಅಗತ್ಯವಾದ ಕಚ್ಚಾವಸ್ತುಗಳನ್ನು ನೇರ ಆವಕಕ್ಕೆ ಪ್ರಯತ್ನಿಸಲಾಗುತ್ತಿದೆ. ವಿದೇಶೀ ಕಂಪನಿಗಳ ಜೊತೆ ಪಾಲುಗಾರಿಕೆ ಹೊಂದಲು ಭಾರತದ ಖಾಸಗಿ ರಸಗೊಬ್ಬರ ಕಂಪನಿಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಸಚಿವ ಸದಾನಂದ ಗೌಡ ವಿವರಿಸಿದರು.
ಇದನ್ನೂ ಓದಿ: ಬಾಲಿವುಡ್ ನಟಿ ಕಂಗನಾ ಹಾಗೂ ಸಹೋದರಿ ರಂಗೋಲಿ ಚಾಂಡೆಲ್ ವಿರುದ್ಧ FIR ದಾಖಲು
ರಸಗೊಬ್ಬರ ಇಲಾಖೆಯು ದೇಶಾದ್ಯಂತ ರಸಗೊಬ್ಬರ ಪೂರೈಕೆಯನ್ನು ಸಮರ್ಪಕವಾಗಿ ಹಾಗೂ ಕರಾರುವಕ್ಕಾಗಿ ಕೈಗೊಳ್ಳಲು ಉನ್ನತ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದೆ. ರೈತರಿಗೆ ದೊರೆಯುವ ರಿಯಾಯತಿ ಸೋರಿಕೆಯಾಗದಂತೆ ತಡೆಯಲು ನೇರ ನೆರವು ವರ್ಗಾವಣೆ ವ್ಯವಸ್ಥೆಯನ್ನು (ಡಿಬಿಟಿ ಸಿಸ್ಟಮ್) ಅಳವಡಿಸಿಕೊಳ್ಳಲಾಗಿದೆ. ಮೇಲಿಂದಮೇಲೆ ಈ ತಂತ್ರಾಂಶ/ದತ್ತಾಂಶಗಳನ್ನು ಉನ್ನತೀಕರಣಗೊಳಿಸಲಾಗುತ್ತಿದ್ದು “ಗವರ್ನನ್ಸ್ ಡಿಜಿಟಲ್ ಟ್ರಾನ್ಸಫೊರ್ಮೇಶನ್ ಅವಾರ್ಡ್” ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಇಲಾಖೆ ಭಾಜನವಾಗಿದೆ ಎಂದು ಸದಾನಂದ ಗೌಡ ತಿಳಿಸಿದರು.
ಸಿಐಐ ಟೆಕ್ ಮೇಳದ ಅಧ್ಯಕ್ಷ ಶ್ರೀ ಅಜಯ್ ಎಸ್ ಶ್ರೀರಾಮ್, ಸಮ್ಮೇಳನದ ಸಂಚಾಲಕ ಡಾ, ಅರವಿಂದ್ ಕಪೂರ್, ಇಲಾಖಾ ಕಾರ್ಯದರ್ಶಿ ಛಬಿಲೇಂದ್ರ ರೌಲ್ ಮುಂತಾದವರು ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.