ಕೋವಿಡ್ ಸೇನಾನಿಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲವೆ? ದಿನೇಶ್ ಗುಂಡೂರಾವ್ ಪ್ರಶ್ನೆ
ಉದಯವಾಣಿ ವರದಿ ಉಲ್ಲೇಖಿಸಿ ಸರ್ಕಾರಕ್ಕೆ ಪ್ರಶ್ನಿಸಿದ ದಿನೇಶ್ ಗುಂಡೂರಾವ್
Team Udayavani, Oct 18, 2020, 12:47 PM IST
ಬೆಂಗಳೂರು: ಕೋವಿಡ್-19 ವಿರುದ್ಧ ಹೋರಾಡಿ ಹುತಾತ್ಮರಾದ 500ಕ್ಕೂ ಹೆಚ್ಚು ಕೋವಿಡ್ ವಾರಿಯರ್ಸ್‌ಗಳ ಪೈಕಿ ಕೇವಲ ಒಬ್ಬರಿಗೆ ಮಾತ್ರ ಪರಿಹಾರ ಕೊಟ್ಟಿರುವುದು ಅತ್ಯಂತ ನಾಚಿಕೆಗೇಡಿನ ವಿಚಾರ. ಕೋವಿಡ್-19 ಸೇನಾನಿಗಳ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲವೆ ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
“ಉದಯವಾಣಿ” ಪತ್ರಿಕೆಯಲ್ಲಿ ಇಂದು ಪ್ರಕಟವಾದ “ಹುತಾತ್ಮರು 500+ ಆದರೆ ಪರಿಹಾರ ಸಿಕ್ಕಿದ್ದು ಒಬ್ಬರ ಕುಟುಂಬಕ್ಕೆ ಮಾತ್ರ” ಎಂಬ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಕೋವಿಡ್-19 ಸೇನಾನಿಗಳ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲದೇ ಇರುವಾಗ ವಾರಿಯರ್ಸ್‌ಗಳು ಜೀವದ ಹಂಗು ತೊರೆದು ಸೋಂಕಿನ ವಿರುದ್ಧ ಹೋರಾಡಲು ಹೇಗೆ ಸಾಧ್ಯ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಪ್ರಾಣಾಪಾಯದ ನಡುವೆಯೂ ಸೋಂಕಿನ ವಿರುದ್ಧ ಹೋರಾಡುತ್ತಿರುವ ಕೋವಿಡ್ ವಾರಿಯರ್ಸ್‌ಗಳ ಕರ್ತವ್ಯವನ್ನು ಸರ್ಕಾರ ಗೌರವಿಸಬೇಕು. ಸೋಂಕಿನ ವಿರುದ್ಧ ಹೋರಾಡಿ ಹುತಾತ್ಮರಾಗಿರುವ ಸೇನಾನಿಗಳ ಕುಟುಂಬ ಬೀದಿಗೆ ಬಂದಿದೆ. ಸರ್ಕಾರ ಕೂಡಲೆ ಹುತಾತ್ಮ ಸೇನಾನಿಗಳ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕೊರೋನಾ ವಿರುದ್ಧ ಹೋರಾಡಿ ಹುತಾತ್ಮರಾದ 500+ ಕೊರೋನಾ ವಾರಿಯರ್ಸ್‌ಗಳ ಪೈಕಿ ಕೇವಲ ಒಬ್ಬರಿಗೆ ಮಾತ್ರ ಪರಿಹಾರ ಕೊಟ್ಟಿರುವುದು ಅತ್ಯಂತ ನಾಚಿಕೆಗೇಡಿನ ವಿಚಾರ.
ಕೊರೋನಾ ಸೇನಾನಿಗಳ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲವೆ?
ಹೀಗಿರುವಾಗ ವಾರಿಯರ್ಸ್‌ಗಳು ಜೀವದ ಹಂಗು ತೊರೆದು ಸೋಂಕಿನ ವಿರುದ್ಧ ಹೋರಾಡಲು ಹೇಗೆ ಸಾಧ್ಯ?
@BSYBJP pic.twitter.com/wbzeo2t8w5— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 18, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.