ನನ್ನ ಕುಟುಂಬ ನನ್ನ ಜವಾಬ್ದಾರಿ’ ಜಾಗೃತಿ ಸ್ಟಿಕ್ಕರ್ ಅಳವಡಿಕೆ
Team Udayavani, Oct 18, 2020, 12:36 PM IST
ಉಡುಪಿ, ಅ. 17: ಕೋವಿಡ್ – 19 ಕುರಿತು ಪ್ರತೀ ಮನೆ ಮನೆಗೆ ಅರಿವು ಮೂಡಿಸಲು ಜಿಲ್ಲಾಡಳಿತ ರೂಪಿಸಿರುವ “ನನ್ನ ಕುಟುಂಬ ನನ್ನ ಜವಾಬ್ದಾರಿ’ ಅಭಿಯಾನದ ಸ್ಟಿಕ್ಕರ್‌ನ್ನು ನ್ಯಾಯಾಲಯದ ಸಮೀಪವಿರುವ ವಸತಿ ಸಂಕೀರ್ಣದಲ್ಲಿರುವ ಮನೆ ಬಾಗಿಲಿಗೆ ಅಂಟಿಸುವ ಮೂಲಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಮತ್ತು ಜಿಲ್ಲಾಧಿಕಾರಿ ಜಿ.ಜಗದೀಶ್ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು.
ಈ ಸ್ಟಿಕರ್‌ನಲ್ಲಿ ಮನೆಯಲ್ಲಿನ ಪ್ರತೀ ಸದಸ್ಯರು ಕೋವಿಡ್ 19 ನಿಂದ ತಮ್ಮ ಕುಟುಂಬವನ್ನು ರಕ್ಷಿಸಲು ಪಾಲಿಸಬೇಕಾದ ಕೋವಿಡ್-19 ನಿಯಂತ್ರಣಾ ಮುನ್ನೆಚ್ಚರಿಕಾ ಕ್ರಮ ಗಳು ಮತ್ತು ಕುಟುಂಬದ ಹಿರಿಯ ಸದಸ್ಯರನ್ನು ಸೋಂಕಿಗೆ ಒಳಗಾಗದಂತೆ ರಕ್ಷಿಸುತ್ತೇನೆ, ಗರ್ಭಿಣಿ ಮಹಿಳೆಯರನ್ನು ಸೋಂಕಿಗೆ ಒಳಗಾಗದಂತೆ ರಕ್ಷಿಸುತ್ತೇನೆ, ಕುಟುಂಬದ ಸದಸ್ಯರಿಗೆ ರೋಗ ಲಕ್ಷಣಗಳಿದ್ದಲ್ಲಿ ಅವರನ್ನು ಪರೀಕ್ಷೆಗೆ ಒಳಪಡಿಸಲು ಬದ್ಧನಾಗಿದ್ದೇನೆ ಎಂದು ಸ್ವಯಂ ಘೋಷಣಾ ಪ್ರಮಾಣ ಪತ್ರದ ಪ್ರತಿ ಇರುತ್ತದೆ. ಇದನ್ನು ಪ್ರತೀ ಮನೆಯವರು ಮನೆ ಬಾಗಿಲಿಗೆ ಅಂಟಿಸಬೇಕು.
ಜಿಲ್ಲಾ ಪಂಚಾಯತ್ ಸಿಇಓ ಡಾ| ನವೀನ್ ಭಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸುಧೀರ್ ಚಂದ್ರ ಸೂಡ, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ| ಪ್ರಶಾಂತ್ ಭಟ್, ಡಾ| ಪ್ರೇಮಾನಂದ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರೇಮ್ ಸಾಗರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಷನ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.