ಅಂತೂ ಇಂತೂ ಜೋಡಿ ರಸ್ತೆಗೆ ಬೀದಿ ದೀಪ ಬಂತು!
ಮೂರುಕಿ.ಮೀ. ದೂರದ ರಸ್ತೆಯಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ವಿದ್ಯುತ್ ದೀಪ ಅಳವಡಿಕೆ
Team Udayavani, Oct 19, 2020, 3:19 PM IST
ಚಾಮರಾಜನಗರ: ಅಂತೂ ಇಂತೂ ದಸರಾ ನೆಪದಲ್ಲಿ ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಬೀದಿ ದೀಪಗಳು ಬೆಳಗಿದವು. ನಗರಸಭೆ ವತಿಯಿಂದ ಅಳವಡಿಸಿರುವ ವಿದ್ಯುತ್ ದೀಪಗಳ ವ್ಯವಸ್ಥೆಗೆ ಶನಿವಾರ ರಾತ್ರಿ ಚಾಲನೆ ನೀಡಲಾಯಿತು.
ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ನಗರದ ಡಿವೈಎಸ್ಪಿ ಕಚೇರಿ ಬಳಿ ನಡೆದ ಸರಳ ಕಾರ್ಯಕ್ರಮದಲ್ಲಿ ಸ್ವಿಚ್ ಒತ್ತುವ ಮೂಲಕ ವಿದ್ಯುತ್ ದೀಪ ಬೆಳಕಿನ ವ್ಯವಸ್ಥೆಯನ್ನು ಉದ್ಘಾಟಿಸಿದರು.
ಶಾಸಕರಾದ ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆರೆಹಳ್ಳಿ ನವೀನ್, ನಗರ ಸಭೆ ಆಯುಕ್ತ ರಾಜಣ್ಣ, ಜಿಲ್ಲಾ ನಗರಾಭಿವೃದ್ಧಿ ಕೋಶದ ನಿರ್ದೇಶಕರಾದ ಕೆ.ಸುರೇಶ್ ಇತರರು ಹಾಜರಿದ್ದರು.
ಬಿ. ರಾಚಯ್ಯ ಜೋಡಿ ರಸ್ತೆ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 35 ಕೋಟಿ ರೂ. ವೆಚ್ಚದಲ್ಲಿ ಎರಡು ವರ್ಷಗಳ ಹಿಂದೆಯೇ ಪೂರ್ಣಗೊಳಿಸಿದೆ. ಆದರೆ ಸುಮಾರು 3 ಕಿ.ಮೀ. ದೂರದ ಈ ರಸ್ತೆಯಲ್ಲಿ ವಿದ್ಯುತ್ ಕಂಬಗಳನ್ನು ಮಾತ್ರ ಅಳವಡಿಸಿದ್ದು ವಿದ್ಯುತ್ ದೀಪ ಅಳವಡಿಸಿರಲಿಲ್ಲ. ಹೀಗಾಗಿ ರಾತ್ರಿ ವೇಳೆ ಕತ್ತಲೆಯಲ್ಲೇ ಜನರು ಈ ರಸ್ತೆಯಲ್ಲಿ ಸಂಚರಿಸಬೇಕಾಗಿತ್ತು. ಈ ಬಗ್ಗೆ ಅನೇಕ ದೂರುಗಳು ಬಂದರೂ ಸರ್ಕಾರ ಗಮನ ಹರಿಸಿರಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ಕುಮಾರ್ ಅವರ ಭೇಟಿ ಸಂದರ್ಭದಲ್ಲಿ ಈ ಬಗ್ಗೆ ನಾಗರಿಕರು ಗಮನ ಸೆಳೆದಿದ್ದರು. ಅವರು ಕ್ರಮ ಕೈಗೊಂಡ ಬಳಿಕ ದೀಪ ಅಳವಡಿಸುವ ಕಾಮಗಾರಿ ನಡೆಯಿತು.
ನಗರಸಭೆಯಿಂದ 10 ಲಕ್ಷ ರೂ. ವೆಚ್ಚದಲ್ಲಿ ಕೇಬಲ್ ಹಾಕಿ ವಿದ್ಯುತ್ ದೀಪ ಅಳವಡಿಸಲಾಯಿತು. ದಸರಾ ಸಂದರ್ಭದಲ್ಲಿ ಜೋಡಿ ರಸ್ತೆಗೆ ಬೆಳಕಿನ ಭಾಗ್ಯ ದೊರೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್ಮ್ಯಾನ್ ನೇಮಕ ಸಂದರ್ಶನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.