ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ಹೆಚ್ಚಳ: ಸಾರ್ವಜನಿಕರು ಜಾಗ್ರತೆ ಪಾಲಿಸಲು ಕರೆ
Team Udayavani, Oct 19, 2020, 6:53 PM IST
ಸಾಂದರ್ಭಿಕ ಚಿತ್ರ
ಕಾಸರಗೋಡು: ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ಹೆಚ್ಚಳಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಾಗರೂಕತೆ ಪಾಲಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ಡಾ| ಎ.ವಿ. ರಾಮದಾಸ್ ತಿಳಿಸಿದರು.
ಫೆ. 3ರಂದು ಮೊದಲ ಕೇಸು ವರದಿಯಾದಂದಿನಿಂದ ಜು. 17ರ ವರೆಗೆ ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಒಂದು ಸಾವು ವರದಿಯಾಗಿರಲಿಲ್ಲ. ಆದರೆ ಜು. 17ರಿಂದ ಅ. 15ರ ವರೆಗೆ ಜಿಲ್ಲೆಯಲ್ಲಿ 142 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಬಹುಪಾಲು ಮಂದಿ 60 ವರ್ಷಕ್ಕಿಂತ ಅಧಿಕ ವಯೋಮಾನದವರು, ಇನ್ನಿತರ ಗಂಭೀರ ಸ್ವರೂಪದ ರೋಗಗಳಿಂದ ಬಳಲುತ್ತಿದ್ದವರು. ಈ ಹಿನ್ನೆಲೆಯಲ್ಲಿ ಹಿರಿಯರು ಮತ್ತು ಗಂಭೀರ ರೋಗಗಳಿಂದ ಬಳಲುತ್ತಿರುವವರು ಹೆಚ್ಚುವರಿ ಜಾಗ್ರತೆ ವಹಿಸಬೇಕು. ಇವರ ಕುಟುಂಬದ ಸದಸ್ಯರಿಗೆ ಅಧಿಕ ಎಚ್ಚರಿಕೆ ಬೇಕು. ಈ ಮನೆಗಳ ಮಂದಿ ಹೊರಗಿಳಿಯುವುದನ್ನು ಗರಿಷ್ಠ ಪ್ರಮಾಣದಲ್ಲಿ ಕಡಿಮೆ ಮಾಡಬೇಕು. ಇತರರೊಂದಿಗೆ ಸಂಪರ್ಕವನ್ನು ಬಹಳಷ್ಟು ಪ್ರಮಾಣದಲ್ಲಿ ಕಡಿಮೆ ಮಾಡಬೇಕು.
ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಸಾಬೂನು, ನೀರು ಬಳಸಿ ಶುಚೀಕರಣ, ಮಾಸ್ಕ್ ಧಾರಣೆ ಇತ್ಯಾದಿಗಳನ್ನು ಕಡ್ಡಾಯ ಗೊಳಿಸಬೇಕು. ಸುಲಭದಲ್ಲಿ ಜೀರ್ಣವಾಗುವ ಆಹಾರವನ್ನೇ ಸೇವಿಸಬೇಕು, ಧಾರಾಳ ನೀರು ಕುಡಿಯಬೇಕು, ತರಕಾರಿ-ಹಣ್ಣು ಅಧಿಕವಾಗಿ ಸೇವಿಸಬೇಕು, ತೀರ ಅನಿವಾರ್ಯ ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ತೆರಳಬೇಕು.
ದೂರವಾಣಿ ಮುಖಾಂತರ ಯಾ ಇ-ಸಂಜೀವಿನಿ ಯೋಜನೆಯ ವೆಬ್ http://esanjeevani.in ಬಳಸಿ ವೈದ್ಯರ ಸೇವೆ ಪಡೆಯಬಹುದು. ಜೀವನ ಶೈಲಿ ರೋಗ ಹೊಂದಿರುವವರು ವೈದ್ಯರು ತಿಳಿಸುವ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಂತಿ, ಹಸಿವಿಲ್ಲದಿರುವಿಕೆ, ಹೊಟ್ಟೆಯ ಕೆಳಭಾಗದಲ್ಲಿ ನೋವು ಇತ್ಯಾದಿ ಕಂಡುಬಂದಲ್ಲಿ ತತ್‌ಕ್ಷಣ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.