ಹಬ್ಬದ ಸಮಯದಲ್ಲಿ ಕಡ್ಡಾಯವಾಗಿ ಕೋವಿಡ್ ಸುರಕ್ಷತಾ ಕ್ರಮ ಪಾಲಿಸಿ : ಸಚಿವ ಡಾ.ಕೆ.ಸುಧಾಕರ್

ಬೆಂಗಳೂರಿನಲ್ಲಿ ಪರೀಕ್ಷಾ ಸಾಮರ್ಥ್ಯ  ಶೇ.73 ರಷ್ಟು ಹೆಚ್ಚಳ

Team Udayavani, Oct 19, 2020, 9:09 PM IST

.0.

ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಪರೀಕ್ಷಾ ಸಾಮರ್ಥ್ಯವನ್ನು ಶೇ.73 ರಷ್ಟು ಹೆಚ್ಚಿಸಿದ್ದು, ಸಾವಿನ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕೋವಿಡ್ ನಿರ್ವಹಣೆ ಕುರಿತ ಅಧಿಕಾರಿಗಳು ಮತ್ತು ತಜ್ಞರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.19 ರವರೆಗೆ ಬೆಂಗಳೂರಿನಲ್ಲಿ 13.20 ಲಕ್ಷ ಪರೀಕ್ಷೆ ಮಾಡಲಾಗಿದೆ. ಒಂದೇ ತಿಂಗಳಲ್ಲಿ 22.90 ಲಕ್ಷ ಪರೀಕ್ಷೆ ಮಾಡಲಾಗಿದೆ. ಅಂದರೆ, ಪರೀಕ್ಷಾ ಸಾಮರ್ಥ್ಯವನ್ನು ಶೇ.73 ರಷ್ಟು ಹೆಚ್ಚಿಸಲಾಗಿದೆ. ಕಳೆದ ತಿಂಗಳಿಗೆ ಹೋಲಿಸಿದರೆ, 9.70 ಲಕ್ಷದಷ್ಟು ಪರೀಕ್ಷೆ ಹೆಚ್ಚಿಸಲಾಗಿದೆ. ಮುಂಬೈ, ಚೆನ್ನೈ, ಅಹಮದಾಬಾದ್, ದೆಹಲಿ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಪರೀಕ್ಷೆ ಅತಿ ಹೆಚ್ಚಿದೆ. ಬೇರೆ ನಗರಗಳ ಸರಾಸರಿ ಪರೀಕ್ಷಾ ಹೆಚ್ಚಳ ಪ್ರಮಾಣ ಶೇ.49 ರಷ್ಟಿದೆ ಎಂದು ವಿವರಿಸಿದರು.

ಪರೀಕ್ಷೆ ಬೇಗನೆ ಮಾಡಿ ಆರಂಭಿಕ ಹಂತದಲ್ಲೇ ಚಿಕಿತ್ಸೆ ನೀಡಿದರೆ ಸಾವಿನ ಪ್ರಮಾಣ ಕಡಿಮೆಯಾಗುತ್ತದೆ. ರಾಜ್ಯದಲ್ಲಿ ಕೋವಿಡ್ ಮರಣ ಪ್ರಮಾಣ ಶೇ.1.37 ರಷ್ಟಿದೆ. ಇದನ್ನು ಶೇ.1 ಕ್ಕಿಂತ ಕಡಿಮೆ ಮಾಡುವ ಗುರಿ ಹೊಂದಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸಾವಿನ ಪ್ರಮಾಣ ಶೇ.1.14 ರಷ್ಟಿದೆ. ಇದು ನಾವು ಹೊಂದಿರುವ ಗುರಿಗೆ ಅತಿ ಸಮೀಪದಲ್ಲೇ ಇದ್ದು, ಸಾವಿನ ಪ್ರಮಾಣ ನಿಯಂತ್ರಣಕ್ಕೆ ಬಂದಿದೆ. ಸೋಂಕಿತರ ಪ್ರಮಾಣ ಕೂಡ ಕಡಿಮೆಯಾಗುತ್ತಿದೆ ಎಂದು ವಿವರಿಸಿದರು.

ಪರೀಕ್ಷೆ ಸಂಖ್ಯೆ ಹೆಚ್ಚಿಸಿರುವುದರಿಂದಲೇ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಕಡಿಮೆ ಸೋಂಕಿತರ ಸಂಖ್ಯೆ ತೋರಿಸಬೇಕೆಂಬ ಕಾರಣಕ್ಕೆ ಪರೀಕ್ಷೆಯನ್ನು ಕಡಿಮೆ ಮಾಡಲು ಸಾಧ್ಯವಿಲ್ಲ. ಸೋಂಕಿತರು ಸಂಖ್ಯೆ ಏರಲು ಪರೀಕ್ಷೆ ಸಂಖ್ಯೆ ಹೆಚ್ಚಿಸಿರುವುದೇ ಕಾರಣ ಎಂಬ ಸೂಕ್ಷ್ಮವನ್ನು ಅರಿಯಬೇಕು ಎಂದರು.

ಮೈಸೂರಿನಲ್ಲಿ ದಸರಾ ಮಹೋತ್ಸವದ ಅಂಗವಾಗಿ ಮಾಡಿರುವ ದೀಪ ಅಲಂಕಾರ ವೀಕ್ಷಿಸಲು ಹೆಚ್ಚಿನ ಸಂಖ್ಯೆಯ ಜನರು ಬರುತ್ತಿದ್ದಾರೆ. ಪರಿಸ್ಥಿತಿ ಮೇಲೆ ನಿಗಾ ಇರಿಸುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದ್ದಾರೆ. ಮುಂದೆ ಒಂದೆರಡು ದಿನ ಇದೇ ಸ್ಥಿತಿ ಮುಂದುವರಿದರೆ ಅಧಿಕಾರಿಗಳು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚಿಸಿ ನಿರ್ಬಂಧ ವಿಧಿಸುವುದು ಅನಿವಾರ್ಯ ಎಂದು ಸಚಿವ ಸುಧಾಕರ್ ಅವರು ಎಚ್ಚರಿಕೆ ನೀಡಿದರು.

ಇಡೀ ದೇಶದಲ್ಲಿ ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ.  ಆರ್ ಟಿಪಿಸಿಆರ್ 80 ಸಾವಿರ, ಆಂಟಿಜೆನ್ ಪರೀಕ್ಷೆ 30-40 ಸಾವಿರದಷ್ಟು ಆಗುತ್ತಿದೆ. ಹಬ್ಬದ ಸಮಯದಲ್ಲಿ ಜನರು ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಮೂರು ತಿಂಗಳು ಚಳಿಗಾಲ ಮತ್ತು ಹಬ್ಬಗಳು ಇವೆ. ಈ ಹಂತದಲ್ಲಿ ಎಚ್ಚರ ತಪ್ಪಬಾರದು ಎಂದರು.

ಜನವರಿಯಲ್ಲಿ ಲಸಿಕೆ ಸಿಗುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಜನರು ಸಹಕಾರ ನೀಡಬೇಕು. ಲಸಿಕೆ ಬಂದ ಬಳಿಕ ಅದನ್ನು ಹೇಗೆ ಮತ್ತು ಮೊದಲು ಯಾರಿಗೆ ವಿತರಿಸಬೇಕು ಎಂದು ತಜ್ಞರ ಜೊತೆ ಸಮಾಲೋಚಿಸಲಾಗುವುದು. ಕೆಲವರು ಪರೀಕ್ಷೆ ವೇಳೆ ತಪ್ಪು ಮಾಹಿತಿ ನೀಡಿ, ವಂಚನೆ ಮಾಡಿಕೊಳ್ಳುತ್ತಿದ್ದಾರೆ. ಅಂತಹವರಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ಕೂಡ ಸಿಗದಂತಾಗುತ್ತದೆ ಎಂದು ಹೇಳಿದರು.

ನಿರ್ದಾಕ್ಷಿಣ್ಯ ಕ್ರಮ : ಕೆಲ ಖಾಸಗಿ ಆಸ್ಪತ್ರೆಗಳು ದಲ್ಲಾಳಿಗಳ ಮೂಲಕ ಹಾಸಿಗೆ ಹಂಚಿಕೆ ಮಾಡುವ ದೂರುಗಳಿವೆ. ಇದು ಗಮನಕ್ಕೆ ಬಂದರೆ ದೂರು ನೀಡಬೇಕು. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಸಚಿವ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.