ನೋ ಪಾರ್ಕಿಂಗ್ ನಲ್ಲಿ ಬೈಕ್ ನಿಲ್ಲಿಸಿದಕ್ಕೆ ಗಲಾಟೆ! ಮಹಿಳೆಯಿಂದ ಪೊಲೀಸ್ ಗೆ ಕಪಾಳ ಮೋಕ್ಷ
Team Udayavani, Oct 20, 2020, 11:03 AM IST
ಸಾಂದರ್ಭಿಕ ಚಿತ್ರಗಳನ್ನು ಬಳಸಲಾಗಿದೆ
ಬಾಗಲಕೋಟೆ: ನೋ ಪಾರ್ಕಿಂಗ್ ನಲ್ಲಿ ಬೈಕ್ ನಿಲ್ಲಿಸಿದ ವಿಷಯಕ್ಕೆ ಪೊಲೀಸರೊಂದಿಗೆ ಗಲಾಟೆ ನಡೆದ ವೇಳೆ ಮಹಿಳೆಯೊಬ್ಬರು ಪೊಲೀಸನಿಗೆ ಕಪಾಳ ಮೋಕ್ಷ ಮಾಡಿದ ಘಟನೆ ಸೋಮವಾರ ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ನವನಗರದ ಗರ್ಭಿಣಿ ತನ್ನ ಮೈದುನನ ಜತೆಗೆ ಬಸವೇಶ್ವರ ವೃತ್ತದ ಬಳಿ ಇರುವ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಬೈಕ್ ನಿಲ್ಲಿಸಿದ್ದರಿಂದ ಸಂಚಾರಿ ಪೊಲೀಸರು ಬೈಕ್‌ನ ಪ್ಲಗ್ ಕಿತ್ತುಕೊಂಡಿದ್ದರು.
ಬೈಕ್ ಪ್ಲಗ್ ಕೊಡಲು ಒತ್ತಾಯಿಸಿದ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆದಿದೆ. ಈ ವೇಳೆ ನನ್ನ ಮೇಲೆ ಪೊಲೀಸ್ ಹಲ್ಲೆ ಮಾಡಿದ್ದಾನೆಂದು ಆರೋಪಿಸಿದ ಮಹಿಳೆ ಪೊಲೀಸ್‌ನಿಗೆ ಕಪಾಳ ಮೋಕ್ಷ ಮಾಡಿದರು. ಘಟನೆಯಿಂದ ಬಸವೇಶ್ವರ ವೃತ್ತದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು. ಸಂಚಾರಿ ಪೊಲೀಸ್ ಪಿಎಸ್‌ಐ ಹಾಗೂ ಮಹಿಳೆ ಕುಟುಂಬದವರ ಮಧ್ಯೆ ಈ ವೇಳೆ ವಾಗ್ವಾದ ನಡೆಯಿತು.
ಬಾಗಲಕೋಟೆ 65 ಮಂದಿ ಗುಣಮುಖ: 94 ಜನರಿಗೆ ಕೊರೊನಾ ಸೋಂಕು
ಬಾಗಲಕೋಟೆ: ಜಿಲ್ಲೆಯಲ್ಲಿ ಸೋಮವಾರ 65 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ಹೊಸದಾಗಿ 94 ಜನರಿಗೆ ಕೊರೊನಾ
ಸೋಂಕು ದೃಢಪಟ್ಟಿವೆ. ಜಿಲ್ಲೆಯಲ್ಲಿ ಈ ವರೆಗೆ 12617 ಕೋವಿಡ್ ದೃಢಪಟ್ಟಿದ್ದು, ಅದರಲ್ಲಿ 11535 ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 38, ಬಾದಾಮಿ 22, ಬೀಳಗಿ 4, ಹುನಗುಂದ 8, ಮುಧೋಳ 10, ಜಮಖಂಡಿ 12 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ. ರಾಜೇಂದ್ರ ತಿಳಿಸಿದ್ದಾರೆ. ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1306 ಸ್ಯಾಂಪಲ್ ವರದಿ ಬರಬೇಕಿದೆ. ಜಿಲ್ಲೆಯಿಂದ ಈ ವರೆಗೆ ಒಟ್ಟು 138665 ಸ್ಯಾಂಪಲ್
ಪರಿಕ್ಷೀಸಲಾಗಿದ್ದು, ಈ ಪೈಕಿ 124231 ನೆಗಟಿವ್, 12617 ಜನರಿಗೆ ಪಾಸಿಟಿವ್ ಬಂದಿವೆ. ಇನ್ನು 956 ಜನ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಸೋಂಕಿನಿಂದ ಈ ವರೆಗೆ 127 ಜನ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.