ಸಮಸ್ಯೆಗಳನ್ನು ಜೀವಂತವಾಗಿಟ್ಟು ರಾಜಕೀಯ ಮಾಡುವುದೇ ಕಾಂಗ್ರೆಸ್- ಜೆಡಿಎಸ್ ಚಾಳಿ: ಡಿಸಿಎಂ
Team Udayavani, Oct 20, 2020, 3:30 PM IST
ಬೆಂಗಳೂರು: ಇಷ್ಟು ದಿನ ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರಿಗೆ ಸಮಸ್ಯೆಗಳ ಅರಿವೇ ಇರಲಿಲ್ಲ. ಇನ್ನು ಅವರು ಆ ಸಮಸ್ಯೆಗಳ ಪರಿಹಾರದ ಬಗ್ಗೆ ಮಾತನಾಡುವುದು ಎಲ್ಲಿಂದ ಬಂತು. ಹೀಗಾಗಿ ರಾಜ್ಯ ಸಾಕಷ್ಟು ಬೆಲೆ ತೆತ್ತಿತು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಟೀಕಾಪ್ರಹಾರ ನಡೆಸಿದರು.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿ ನೆಲೆಸಿರುವ ಶಿರಾ ವಿಧಾನಸಭಾ ಕ್ಷೇತ್ರದ ಮತದಾರರ ಸಭೆಯಲ್ಲಿ ಮಾತನಾಡಿದ ಅವರು ಅಭಿವೃದ್ಧಿ, ಜನರ ಕೌಶಲ್ಯ, ಶಿಕ್ಷಣ ಇತ್ಯಾದಿಗಳ ಮಹತ್ವ ಗೊತ್ತಿಲ್ಲದ ನಾಯಕರು ಜನರನ್ನು ಸದಾ ಕತ್ತಲೆಯಲ್ಲೇ ಇಟ್ಟರು. ಸಮಸ್ಯೆಗಳನ್ನು ಯಾವಾಗಲೂ ಜೀವಂತವಾಗಿಟ್ಟುಕೊಂಡು ಜನರ ಕಣ್ಣೀರಿನ ಮೇಲೆ ರಾಜಕೀಯ ಮಾಡುವುದೇ ಕಾಂಗ್ರೆಸ್ ಮತ್ತು ಜೆಡಿಎಸ್ ಚಾಳಿ ಎಂದರು.
ಕೆಲ ನಾಯಕರು ಮತ್ತು ಪಕ್ಷಗಳಿಗೆ ಚುನಾವಣೆ ಎಂದರೆ ಭಾವನಾತ್ಮಕ ವಿಷಯಗಳನ್ನು ಕೆದಕುವುದು ಹಾಗೂ ಜಾತಿಯಂತಹ ಸೂಕ್ಷ್ಮ ವಿಚಾರಗಳನ್ನು ಮುನ್ನೆಲೆಗೆ ತಂದು ಬೇಳೆ ಬೇಯಿಸಿಕೊಳ್ಳುವುದು ಅಭ್ಯಾಸವಾಗಿದೆ. ಈ ಚುನಾವಣೆಯಲ್ಲೂ ಅದೇ ಪುನರಾವರ್ತನೆ ಆಗುತ್ತಿದೆ. ಇದು ನಿಜಕ್ಕೂ ಅಸಹ್ಯದ ಪರಮಾವಧಿ. ಪ್ರಗತಿಯ ವಿಷಯ ಬಿಟ್ಟು ಭಾವನಾತ್ಮಕ ವಿಷಯಗಳ ಮೂಲಕ ರಾಜಕೀಯ ಮಾಡುವ ಶಕ್ತಿಗಳಿಗೆ ಪಾಠ ಕಲಿಸಬೇಕು ಎಂದು ಅವರು ಹೇಳಿದರು.
ಇದನ್ನೂ ಓದಿ :ಚಾಲಕರಿಗೆ ಕಷ್ಟಕಾಲದಲ್ಲಿ ಪರಿಹಾರ ಕೊಡುವ ಬದಲು ದಂಡ ವಸೂಲಿ ಖಂಡನೀಯ : ಕುಮಾರಸ್ವಾಮಿ ಕಿಡಿ
ಜನರ ಮುಂದೆ ಬಂದಾಗ ಪ್ರಗತಿಯ ಬಗ್ಗೆ ಮಾತನಾಡಬೇಕು. ನಮಗೆ ಹಾಗೆ ಮಾತನಾಡಲು ಧೈರ್ಯವಿದೆ. ಕೈಗಾರಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಪೂರಕವಾದ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ಸುಧಾರಣೆ ತಿದ್ದುಪಡಿ ಕಾಯ್ದೆ ಇತ್ಯಾದಿಗಳನ್ನು ಜಾರಿಗೆ ತಂದಿದ್ದೇವೆ. ಕೃಷಿಕರ ಪಕ್ಷ ಎಂದು ಹೇಳಿಕೊಳ್ಳುವ ಪಕ್ಷಗಳ ನಾಯಕರು ರೈತರಿಗಾಗಿ ಏನು ಮಾಡಿದ್ದಾರೆ ಎಂದು ಅವರು ಪ್ರಶ್ನಿಸಿದರು.
ಕೆಲವರಿಗೆ ರಾಜಕೀಯ ಎಂದರೆ ತಾವು, ತಮ್ಮ ಮಕ್ಕಳು ಹಾಗೂ ಮೊಮ್ಮಕ್ಕಳನ್ನು ಬೆಳೆಸಿಕೊಳ್ಳುವುದೇ ಆಗಿದೆ. ನಿರಂತರವಾಗಿ ಜಾತಿ ಹೆಸರು ಹೇಳಿಕೊಂಡೇ ತಮ್ಮ ಕುಟುಂಬಗಳನ್ನು ಬೆಳೆಸಿಕೊಂಡರು, ಮನೆಯಲ್ಲಿ ಇದ್ದವರೆಲ್ಲರನ್ನೂ ನಾಯಕರನ್ನಾಗಿ ಬೆಳೆಸಿಕೊಂಡರು. ಅವರನ್ನು ನಂಬಿದ ಕಾರ್ಯಕರ್ತರು ಬೀದಿ ಪಾಲಾದರು. ಆ ಮಹಾನ್ ನಾಯಕರಿಗೆ ಮತ ಹಾಕಿದರೂ ಕೂಡ ಅತಂತ್ರರಾಗುವ ಪರಿಸ್ಥಿತಿಯನ್ನು ಸೃಷ್ಟಿ ಮಾಡಿದರು. ಇಂತಹ ನಾಯಕರು ಹಾಗೂ ಅವರು ಪ್ರತಿನಿಧಿಸುವ ರಾಜಕೀಯ ಪಕ್ಷಗಳು ನಮಗೆ ಬೇಕೆ ಎಂಬುದನ್ನು ಜನರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಡಿಸಿಎಂ ಟೀಕಾಪ್ರಹಾರ ನಡೆಸಿದರು.
ಇದನ್ನೂ ಓದಿ :ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ದರೆ ನಾವು ಚುನಾವಣೆ ಎದುರಿಸಲು ಸಿದ್ಧ : ಸಿದ್ದರಾಮಯ್ಯ
ಶಿರಾದಲ್ಲಿ ಅಭಿವೃದ್ಧಿ ಶೂನ್ಯ
ಇತ್ತೀಚೆಗೆ ನಮ್ಮ ಅಭ್ಯರ್ಥಿ ನಾಮಪತ್ರ ಸಲ್ಲಿಸಬೇಕಾದರೆ ನಾನು ಕೂಡ ಶಿರಾಗೆ ಹೋಗಿಬಂದೆ. ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆಯೂ ನನ್ನಲ್ಲಿ ಮಾಹಿತಿ ಇದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಈ ಕ್ಷೇತ್ರದಿಂದ ಗೆಲ್ಲಿಸಲಾಗಿದೆ. ಆದರೆ, ನಿರಂತರವಾಗಿ ಅಲ್ಲಿ ರಾಜಕೀಯ ನಡೆದಿದೆಯೇ ಹೊರತು ಕಿಂಚಿತ್ತೂ ಅಭಿವೃದ್ಧಿಯಾಗಿಲ್ಲ. ಹೆದ್ದಾರಿಗೆ ಹೊಂದಿಕೊಂಡಿರುವ ಆ ಪಟ್ಟಣದಲ್ಲಿ ಒಂದು ಕೈಗಾರಿಕೆ ಇಲ್ಲ. ಕೃಷಿಕರಂತೂ ಕಷ್ಟದ ಜೀವನ ನಡೆಸುತ್ತಿದ್ದಾರೆಂದು ಡಾ.ಅಶ್ವತ್ಥನಾರಾಯಣ ದೂರಿದರು.
ಸಭೆಯಲ್ಲಿ ಸಚಿವ ಗೋಪಾಲಯ್ಯ, ಮಾಜಿ ಸಂಸದ ಹಾಗೂ ರಾಜೇಶಗೌಡ ಅವರ ತಂದೆ ಮೂಡಲಗಿರಿಯಪ್ಪ ಸೇರಿದಂತೆ ಬಿಜೆಪಿಯ ಮುಖಂಡರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.