ಅರ್ಥಪೂರ್ಣ ಕನ್ನಡ ರಾಜೋತ್ಸವಕ್ಕೆ ನಿರ್ಧಾರ
ಸಿದ್ಧತೆಗೆ ವಿವಿಧ ಸಮಿತಿಗಳ ರಚನೆ , ಪರೇಡ್‌ಗೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಡಾ.ವೆಂಕಟೇಶ್
Team Udayavani, Oct 20, 2020, 3:35 PM IST
ಮಂಡ್ಯ: ಕೋವಿಡ್ ಹಿನ್ನೆಲೆಯಲ್ಲಿ ಮುಂದಿನ ನ.1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅಧಿಕಾರಿಗಳು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕನ್ನಡ ರಾಜೋತ್ಸವ ಆಚರಣೆಕುರಿತ ಪೂರ್ವಭಾವಿ ಸಭೆಯಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಅಂದು ಬೆಳಗ್ಗೆ 9ಕ್ಕೆ ನಗರದ ಸರ್‌ಎಂವಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಕಾರ್ಯಕ್ರಮ ಸಿದ್ಧತೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು,ಸಮಿತಿಯವರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಸಿದ್ಧತೆಗೆ ಸೂಚನೆ: ಹೋಂ ಗಾರ್ಡ್, ಅಬಕಾರಿ, ಅರಣ್ಯ ಹಾಗೂ ಪೊಲೀಸ್ ಇಲಾಖೆಯಿಂದ ಪರೇಡ್‌ಗೆ ಮಾತ್ರ ಅವಕಾಶವಿದ್ದು, ಮೆರವಣಿಗೆ ಇರುವುದಿಲ್ಲ. ಧ್ವಜಾರೋಹಣ ವ್ಯವಸ್ಥೆ ಮಾಡಲು ಪೊಲೀಸ್ ಇಲಾಖೆ, ತಹಶೀಲ್ದಾರ್ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಗೆ ವಹಿಸಲಾಯಿತು. ರಾಷ್ಟ್ರಗೀತೆ,ನಾಡಗೀತೆ ಹಾಗೂ ಕುವೆಂಪು ವಿರಚಿತ ನೇಗಿಲಯೋಗಿ ಗೀತೆಗೆ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಜಿಲ್ಲಾ ಕ್ರೀಡಾಂಗಣದ ಸ್ವತ್ಛತೆ, ಶುದ್ಧ ಕುಡಿಯುವನೀರು,ವೇದಿಕೆ,ವಿದ್ಯುತ್,ಧ್ವನಿವರ್ಧಕ,ಜನರೇಟರ್, ಆಸನಗಳ ವ್ಯವಸ್ಥೆಗಳ ಜೊತೆಗೆ ಪೊಲೀಸ್‌ಬಂದೋಬಸ್ತ ವ್ಯವಸ್ಥೆ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು.
ಕಡ್ಡಾಯವಾಗಿ ಅಧಿಕಾರಿಗಳು ಪಾಲ್ಗೊಳ್ಳಿ:
ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸುವ ಮೂಲಕ ಸಾಮಾಜಿಕಅಂತರ ಕಾಯ್ದುಕೊಳ್ಳಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮ ಯಶಸ್ವಿಗೊಳಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಗೆ ವಹಿಸಿದ ಜವಾಬ್ದಾರಿಗಳನ್ನು ಸಮರ್ಪಕವಾಗಿ ಪಾಲಿಸಬೇಕು. ಶಿಷ್ಟಾಚಾರಕ್ಕೆ ಲೋಪವಾಗದಂತೆ ಧ್ವಜ ಸಂಹಿತೆಗೆ ಯಾವುದೇ ತರಹ ಅಪಚಾರವಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಪಂ ಮುಖ್ಯ ಉಪಕಾರ್ಯದರ್ಶಿ ಪ್ರಕಾಶ್, ಅಪರ ಜಿಲ್ಲಾಧಿಕಾರಿ ವಿ.ಆರ್.ಶೈಲಜಾ,ಮಂಡ್ಯ ಉಪ ವಿಭಾಗಾಧಿಕಾರಿ ನೇಹಾಜೈನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ರಾಜ್ಯೋತ್ಸವವನ್ನು ಯಾವುದೇ ಲೋಪವಿಲ್ಲದಂತೆಯಶಸ್ವಿಗೊಳಿಸಲು ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಿದ್ದು, ಸಮರ್ಪಕವಾಗಿಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. –ಡಾ.ಎಂ.ವಿ.ವೆಂಕಟೇಶ್, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.