ಪ್ರಜಾಪ್ರಭುತ್ವ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಿ
Team Udayavani, Oct 20, 2020, 4:57 PM IST
ಬೀದರ: ವಿಧಾನ ಪರಿಷತ್‌ನಲ್ಲಿ ಪ್ರಜಾಪ್ರಭುತ್ವ ಉಳಿಸಬೇಕಿದೆ. ರೈತರ, ಬಡವರ ಹಿತ ಕಾಪಾಡಲು ಮತದಾರರು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಜನ ವಿರೋಧಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಈಶ್ವರ ಖಂಡ್ರೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರ ಸಮಸ್ಯೆ, ಬೇಡಿಕೆ ಬಗೆಹರಿಸುವಲ್ಲಿ ಶ್ರಮಿಸಿದ ಎಂಎಲ್‌ಸಿ ಶರಣಪ್ಪ ಮಟ್ಟೂರ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ತಮ್ಮ ಅಧಿಕಾರದ ಅವಧಿಯಲ್ಲಿ 6ನೇ ವೇತನ ಅನುಷ್ಠಾನ, ಶಿಕ್ಷಕರಿಗೆ ಶೇ. 30ರಷ್ಟು ವೇತನ ಹೆಚ್ಚಳ, ಮುಂಬಡ್ತಿ ಮತ್ತು ವರ್ಗಾವಣೆ ಸರಳೀಕರಣಕ್ಕೆ ಪ್ರಯತ್ನಿಸಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಹಿಂದಿನ ಪಿಂಚಣಿ ಯೋಜನೆ ಜಾರಿಗೆ ಹೋರಾಟವನ್ನು ಮುಂದುವರಿಸಿದ್ದಾರೆ. ಪ್ರಜ್ಞಾವಂತ ಮತದಾರರು ಅವರಿಗೆ ಮತ್ತೂಮ್ಮೆ ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನೆರೆಯಿಂದ ರಾಜ್ಯದ ರೈತರು, ಜನ ತತ್ತರಿಸಿದ್ದು, ಸರ್ಕಾರಈವರೆಗೆ ನಯಾ ಪೈಸೆ ನೀಡಿಲ್ಲ. ಕಂದಾಯ ಸಚಿವರುನಾಮಕಾವಾಸ್ತೆ ಸಮೀಕ್ಷೆ ಮಾಡಿ ಹೋಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಿಗೆ ಈಗ ಬಸವಕಲ್ಯಾಣ ಮತ್ತು ಅನುಭವ ಮಂಟಪನೆನಪಿಗೆ ಬಂದಿದೆ. ಇದು ಕೇವಲ ಚುನಾವಣೆ ನೆಪ ಮಾತ್ರ. ಜನರಿಗೆ ದಾರಿ ತಪ್ಪಿಸಲು ಬರುತ್ತಿದ್ದಾರೆ. ಬಿಜೆಪಿ ಎಷ್ಟೇ ನಾಟಕ ಮಾಡಿದರೂ ಉಪ ಚುನಾವಣೆ ಮತ್ತು ಎಂಎಲ್‌ಸಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಖಂಡ್ರೆ ವಿಶ್ವಾಸವ್ಯಕ್ತಪಡಿಸಿದರು. ಶಾಸಕರಾದ ರಹೀಮ್ ಖಾನ್, ಅರವಿಂದ ಅರಳಿ, ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ, ಉಪಾಧ್ಯಕ್ಷ ಲಕ್ಷ್ಮಣ ಬುಳ್ಳಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ ಇದ್ದರು.
ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಲಿ : ಈ ಭಾಗಕ್ಕೆ ಹೆಚ್ಚಿನ ಅನುದಾನ, ಯೋಜನೆಗಳನ್ನು ನೀಡಿದರೆ ತಾನಾಗಿಯೇ ಕಲ್ಯಾಣ ಕರ್ನಾಟಕ ಆಗುತ್ತದೆ. ಕೇವಲ ಹೆಸರು ನಾಮಕರಣ ಮಾಡುವುದರಿಂದ ಅಭಿವೃದ್ಧಿ ಆಗಲ್ಲ. ಉಸ್ತುವಾರಿ ಸಚಿವರು ಚುಳಕಿನಾಲಾ ಜಲಾಶಯದಲ್ಲಿ ಬಾಗಿನ ಅರ್ಪಿಸುವುದನ್ನು ಬಿಟ್ಟು ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಲಿ. ವಕೀಲ ವೃತ್ತಿ ಬಿಟ್ಟು ಶಿಕ್ಷಕರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ್ ಪರ ವ್ಯಾಪಕ ಬೆಂಬಲ ಸಿಗುತ್ತಿದೆ. -ರಾಜಶೇಖರ ಪಾಟೀಲ, ಶಾಸಕ, ಹುಮನಾಬಾದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
MUST WATCH
ಹೊಸ ಸೇರ್ಪಡೆ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.