ಕೋವಿಡ್ 19: ಮೈಮರೆಯಬೇಡಿ…ಲಾಕ್ ಡೌನ್ ತೆರವುಗೊಂಡಿದೆ, ವೈರಸ್ ಇನ್ನೂ ಇದೆ: ಮೋದಿ
Team Udayavani, Oct 20, 2020, 6:11 PM IST
ನವದೆಹಲಿ: ಕೋವಿಡ್ 19 ಸೋಂಕಿನಿಂದಾಗಿ ಇಡೀ ವಿಶ್ವವೇ ತಲ್ಲಣಗೊಂಡಿದೆ. ಕೋವಿಡ್ ಕ್ಷಿಪ್ರವಾಗಿ ಹರಡುವುದನ್ನು ತಡೆಗಟ್ಟಲು ಹೇರಲಾಗಿದ್ದ ಲಾಕ್ ಡೌನ್ ತೆರವುಗೊಳಿಸಲಾಗಿದೆ. ಆದರೆ ವೈರಸ್ ಇನ್ನೂ ಹೋಗಿಲ್ಲ. ಈ ನಿಟ್ಟಿನಲ್ಲಿ ಜನರು ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಪ್ರತಿನಿತ್ಯದ ಓಡಾಟದ ಸಂದರ್ಭದಲ್ಲಿ ಮಾಸ್ಕ್ ಧರಿಸಿಕೊಳ್ಳಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಹಾಗೂ ಸ್ಯಾನಿಟೈಸರ್ ಉಪಯೋಗಿಸುತ್ತಿರಿ ಎಂದು ಈ ಸಂದರ್ಭದಲ್ಲಿ ಹೇಳಿದರು.
ಕ್ವಾರಂಟೈನ್ ನಿರ್ಮಾಣ ವಿಚಾರದಿಂದ ಹಿಡಿದು ಪ್ರತಿಯೊಂದು ವಿಚಾರದಲ್ಲಿಯೂ ನಾವು ಜಗತ್ತಿನ ಎಲ್ಲಾ ದೇಶಕ್ಕಿಂತಲೂ ಮುಂದಿದ್ದೇವೆ. ಆದರೆ ಕೋವಿಡ್ ನಿಂದ ನಮಗೇನೂ ಆಗುವುದಿಲ್ಲ ಎಂಬ ಬೇಜವಾಬ್ದಾರಿ ಬೇಡ. ಇದರಿಂದ ಪ್ರಾಣಕ್ಕೆ ಅಪಾಯ ಎಂದು ಪ್ರಧಾನಿ ಎಚ್ಚರಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಬಗ್ಗೆ ಆಂದೋಲನದ ಮೂಲಕ ಸಂದೇಶ ನೀಡಿ. ಕೇಂದ್ರ ಸರ್ಕಾರವೂ ಕೂಡಾ ಪ್ರತಿಯೊಬ್ಬರಿಗೆ ಲಸಿಕೆ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ. ಅಷ್ಟೇ ಅಲ್ಲ ಕೋವಿಡ್ ಗೆ ಭಾರತದಲ್ಲಿಯೇ ಲಸಿಕೆ ಕಂಡುಹಿಡಿಯಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.