ವಿಟ್ಲ: ದೈವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿ ಬಂಧನ
Team Udayavani, Oct 21, 2020, 12:28 PM IST
ವಿಟ್ಲ: 2019 ರಲ್ಲಿ ಕೊಳ್ನಾಡು ಗ್ರಾಮದ ಮಾಡರಸು ಕುರಿಯಾಡಿತ್ತಾಯ ಐವರು ಬಂಟರು ದೈವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಕಳವು ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಪುತ್ತೂರು ಚೇತನಾ ಆಸ್ಪತ್ರೆಯ ಬಳಿಯ ನಿವಾಸಿ ಮೊಹಮ್ಮದ್ ಸಾದಿಕ್ ಎಂದು ತಿಳಿದು ಬಂದಿದೆ.
ಕೊಳ್ನಾಡು ಗ್ರಾಮದ ಮಾಡರಸು ಕುರಿಯಾಡಿತ್ತಾಯ ಐವರು ಬಂಟರು ದೈವಸ್ಥಾನದ ಕಾಣಿಕೆ ಡಬ್ಬಿಯನ್ನು 2019ರ ಜನವರಿ 02 ರಂದು ರಾತ್ರಿ ಕಳವುಗೈಯಲಾಗಿತ್ತು. 2019 ರಲ್ಲಿ ಈ ಪ್ರಕರಣ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ದೈವಸ್ಥಾನದ ಆಡಳಿತಕ್ಕೆ ಸಂಬಂಧಪಟ್ಟ ರಮೇಶ್ ರಾವ್ ಅವರು ದೂರು ದಾಖಲಿಸಿದ್ದರು.
ಇದೀಗ ಈ ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸ್ ಠಾಣಾಧಿಕಾರಿ ವಿನೋದ್ ರೆಡ್ಡಿ ನೇತೃತ್ವದ ತಂಡ ಬಂಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.