ಕೋವಿಡ್ ಪರಿಹಾರ ಮರೀಚಿಕೆ
Team Udayavani, Oct 21, 2020, 7:16 PM IST
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇದುವರೆಗೂ ಆರೋಗ್ಯ ಇಲಾಖೆಯ 3 ಜನ, ಪೊಲೀಸ್ ಇಲಾಖೆಯ ಒಬ್ಬರು ಹಾಗೂ ಶಿಕ್ಷಣ ಇಲಾಖೆಯ 5 ಜನ ಶಿಕ್ಷಕರು ಸೇರಿದಂರೆ 9 ಜನ ಕೋವಿಡ್ ವಾರಿಯರ್ ಮೃತಪಟ್ಟಿದ್ದಾರೆ.
ತರೀಕೆರೆ ತಾಲೂಕು ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಕೋವಿಡ್ ಡ್ಯೂಟಿಗೆ ತೆರಳುವ ಸಂದರ್ಭದಲ್ಲಿರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಡೂರುತಾಲೂಕು ಕುಂಚನಾಡು ಆಸ್ಪತ್ರೆಯ ಹೆಲ್ತ್ ಇನ್ಸ್ ಪೆಕ್ಟರ್ ಮತ್ತು ಕಡೂರು ತಾಲೂಕು ಬಾಣೂರು ಆರೋಗ್ಯ ಕೇಂದ್ರದಲ್ಲಿ “ಡಿ’ ಗ್ರೂಪ್ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣೆಯ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಸಿಬ್ಬಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀರೂರು ಶೈಕ್ಷಣಿಕ ವಿಭಾಗದಲ್ಲಿ ಮೂವರು, ಕಡೂರು ಶೈಕ್ಷಣಿಕ ವಿಭಾಗದಲ್ಲಿ ಒಬ್ಬರು ಹಾಗೂ ತರೀಕೆರೆ ಶೈಕ್ಷಣಿಕ ವಿಭಾಗದಲ್ಲಿ ಒಬ್ಬರು ಸೇರಿದಂತೆ 5 ಮಂದಿ ಶಿಕ್ಷಕರು ಕೋವಿಡ್ ಸೋಂಕು ತಗುಲಿ ಮೃತಪಟ್ಟಿದ್ದಾರೆ. ಆರೋಗ್ಯ, ಪೊಲೀಸ್ ಹಾಗೂ ಶಿಕ್ಷಣ ಇಲಾಖೆಯ ಅನೇಕರಿಗೆ ಸೋಂಕು ತಗುಲಿ ಗುಣಮುಖರಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ದೊರಕಿಲ್ಲ ಪರಿಹಾರ: ಕೋವಿಡ್ ವಾರಿಯರ್ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅದರಲ್ಲೂ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ಸಿಬ್ಬಂದಿಯೂ ಕೊರೊನಾ ಸೋಂಕಿನ ಜೊತೆಗೆ ಪ್ರತಿದಿನ ಸೆಣಸಾಟ ನಡೆಸುತ್ತಾರೆ. ಕೋವಿಡ್ ವಾರಿಯರ್ ಮೃತಪಟ್ಟಲ್ಲಿ 50 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯಸರ್ಕಾರವೇ ಘೋಷಿಸಿದೆ. ಜಿಲ್ಲೆಯಲ್ಲಿ ಇದುವರೆಗೂ 9 ಜನ ಕೋವಿಡ್ ವಾರಿಯರ್ ಮೃತಪಟ್ಟಿದ್ದು, ಕೋವಿಡ್ ಬಾಧೆಯಿಂದ ಮೃತಪಟ್ಟ ಸಿಬ್ಬಂದಿಯ ಕುಟುಂಬಕ್ಕೆ ನಯಾಪೈಸೆ ಪರಿಹಾರ ದಕ್ಕಿಲ್ಲ. ಕೋವಿಡ್ ಸೋಂಕಿನಿಂದ ಮೃತಪಟ್ಟ ಸಿಬ್ಬಂದಿಗೆ ಸರ್ಕಾರ ಪರಿಹಾರ ನೀಡುವಂತೆ ಆಯಾ ಇಲಾಖೆ ಮುಖ್ಯಸ್ಥರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೆ,ಪರಿಹಾರ ಮಾತ್ರ ಆ ಕುಟುಂಬಗಳಿಗೆ ದೊರೆತಿಲ್ಲ.
ಆರೋಗ್ಯ ಇಲಾಖೆಯಲ್ಲಿ ಇದುವರೆಗೂ 3 ಜನ ಸಿಬ್ಬಂದಿ ಮೃತಪಟ್ಟಿದ್ದು, ಇಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, ಮತ್ತೂಬ್ಬಸಿಬ್ಬಂದಿ ಕೋವಿಡ್ ಕರ್ತವ್ಯಕ್ಕೆ ತೆರಳುವ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 3 ಜನ ಸಿಬ್ಬಂದಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. -ಡಾ| ಉಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.