ಸಿಗಂದೂರು ವಿವಾದ ಸುಖಾಂತ್ಯ: ನ್ಯಾಯಾಲಯದ ಮಧ್ಯಸ್ತಿಕೆಯಲ್ಲಿ ಆಡಳಿತಮಂಡಳಿ-ಅರ್ಚಕರ ನಡುವೆ ರಾಜಿ
Team Udayavani, Oct 22, 2020, 8:20 AM IST
ಶಿವಮೊಗ್ಗ: ಸಿಗಂದೂರು ಕ್ಷೇತ್ರದಲ್ಲಿ ಅರ್ಚಕರು ಹಾಗೂ ಧರ್ಮದರ್ಶಿಗಳ ನಡುವೆ ಉಂಟಾಗಿದ್ದ ವಿವಾದ ಸ್ಥಳೀಯ ಸಿವಿಲ್ ನ್ಯಾಯಾಲಯದ ಮಧ್ಯಸ್ಥಿಕೆಯಲ್ಲಿ ಇತ್ಯರ್ಥಗೊಂಡಿದ್ದು ಸುಖಾಂತ್ಯಗೊಂಡಿದೆ.
ದೇಗುಲದ ಭಕ್ತರಾದ ಸಂದೀಪ್ ಹಾಗೂ ನವೀನ್ ಜೈನ್ ಎಂಬುವವರು ದೇವಸ್ಥಾನದ ಪೂಜಾ ವಿಧಿವಿಧಾನಗಳಿಗೆ ಆಡಳಿತ ಮಂಡಳಿಯಿಂದ ಯಾವುದೇ ಅಡ್ಡಿಯಾಗದಂತೆ ನಿರ್ಬಂಧಕಾಜ್ಞೆ ನೀಡಬೇಕೆಂದು ಇಲ್ಲಿನ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.
ಕೋವಿಡ್ ಕಾರಣಕ್ಕೆ ನವರಾತ್ರಿ ಸಂದರ್ಭ ಚಂಡಿಕಾಯಾಗ ಮಾಡಲು ಆಡಳಿತ ಮಂಡಳಿ ನಿರಾಕರಿಸಿದ್ದರಿಂದ ಅರ್ಚಕರ ಬೆಂಬಲಿಗರು ದಾವೆ ಹೂಡಿದ್ದರು. ಪ್ರಕರಣದ ವಿಚಾರಣೆ ಮಂಗಳವಾರವೂ ( ಅ. 21) ನಡೆದಿತ್ತು
ಬುಧವಾರ ಮುಂದುವರಿದ ವಿಚಾರಣೆ ಸಂದರ್ಭ ದಾವೆ ಹೂಡಿದ್ದ ಪಕ್ಷಗಾರರು, ಧರ್ಮದರ್ಶಿ ರಾಮಪ್ಪ, ರವಿಕುಮಾರ್ ಹಾಗೂ ಶೇಷಗಿರಿಭಟ್ ಅವರನ್ನು ನ್ಯಾಯಾಲಯಕ್ಕೆ ಕರೆಸಿಕೊಂಡ ನ್ಯಾಯಾಧೀಶರಾದ ಫೆಲಿಕ್ಸ್ ಆಲ್ಫಾನ್ಸೊ ಅಂತೋನಿ ಅವರು ಮಧ್ಯಸ್ಥಗಾರಿಕೆ ಮೂಲಕ ವಿವಾದ ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಿದರು. ಉಭಯ ಪಕ್ಷಗಾರರ ವಕೀಲರು ಹಾಗೂ ನ್ಯಾಯಾಲಯ ನೇಮಿಸಿದ್ದ ಮಧ್ಯಸ್ಥಿಕೆಗಾರರ ಉಪಸ್ಥಿತಿಯಲ್ಲಿ ನಡೆದ ಮಾತುಕತೆಯಲ್ಲಿ ವಿವಾದವನ್ನು ರಾಜೀಮೂಲಕ ಇತ್ಯರ್ಥಪಡಿಸಿಕೊಳ್ಳಲು ತೀರ್ಮಾನಿಸಲಾಯಿತು.
ಇದನ್ನೂ ಓದಿ: CBI ತನಿಖೆಗಿದ್ದ ‘ಸಾಮಾನ್ಯ ಒಪ್ಪಿಗೆ’ಯನ್ನು ಹಿಂಪಡೆದ ಠಾಕ್ರೆ ಸರ್ಕಾರ: ಏನಿದು ಬೆಳವಣಿಗೆ ?
ಕೋವಿಡ್-19 ಇರುವ ಈ ಕಾಲದಲ್ಲಿ ದೇವಸ್ಥಾನದ ಗರ್ಭಗುಡಿಯ ಮುಂಭಾಗದಲ್ಲಿ ಏಕಕಾಲಕ್ಕೆ 40 ಜನರನ್ನು ಮಾತ್ರ ಸೇರಿಸಬೇಕು. ಭಕ್ತರು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂಬ ಅಂಶಕ್ಕೆ ಧರ್ಮದರ್ಶಿ ರಾಮಪ್ಪ, ರವಿಕುಮಾರ್ ಹಾಗೂ ಶೇಷಗಿರಿಭಟ್ ಸಮ್ಮತಿ ಸೂಚಿಸಿದ್ದಾರೆ. ಪೂಜೆಯ ನಂತರ ಮಂಗಳಾರತಿ ತಟ್ಟೆಯನ್ನು ಅರ್ಚಕರು ಭಕ್ತರ ಬಳಿ ಕೊಂಡೊಯ್ಯುವಂತಿಲ್ಲ. ನಿರ್ದಿಷ್ಟ ಜಾಗದಲ್ಲಿ ಇಟ್ಟು ಭಕ್ತರಿಗೆ ನಮಸ್ಕರಿಸಲು ಅವಕಾಶ ನೀಡಬೇಕು. ದಸರಾ ಅಂಗವಾಗಿ ಶೇಷಗಿರಿ ಭಟ್ ಕುಟುಂಬ ಚಂಡಿಕಾಹೋಮವನ್ನು ಧರ್ಮದರ್ಶಿ ರಾಮಪ್ಪ ,ರವಿಕುಮಾರ್ ಕುಟುಂಬದವರ ಉಪಸ್ಥಿತಿಯಲ್ಲಿ ನೆರವೇರಿಸಬೇಕು ಎಂಬ ಅಂಶಕ್ಕೆ ಉಭಯ ಪಕ್ಷಗಾರರು ಒಪ್ಪಿಗೆ ಸೂಚಿಸಿದ್ದಾರೆ.
ದೇವಾಲಯಕ್ಕೆ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ಸರಕಾರದ ಮಾರ್ಗಸೂಚಿಯನ್ವಯ ಅವಕಾಶ ನೀಡಬೇಕು. ಕೋವಿಡ್ ಪಿಡುಗಿನ ನಂತರ ಧರ್ಮದರ್ಶಿ ರಾಮಪ್ಪ, ರವಿಕುಮಾರ್ ಹಾಗೂ ಶೇಷಗಿರಿ ಭಟ್ ಅವರು ಪರಸ್ಪರ ಹೊಂದಾಣಿಕೆ ಮೂಲಕ ಪೂಜೆ ಮತ್ತಿತರ ಚಟುವಟಿಕೆ ಮುಂದುವರಿಸಿಕೊಂಡು ಹೋಗಲು ಮಧ್ಯಸ್ತಿಕೆಗಾರರ ಸಮ್ಮುಖದಲ್ಲಿ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಕೇರಳಕ್ಕೆ ಬರಲು ನೋಂದಣಿ ಅಗತ್ಯ ; ಕಾಸರಗೋಡು ಗಡಿಗಳಲ್ಲಿ ಮತ್ತೆ ತಪಾಸಣೆ
ಈ ಮಾತುಕತೆ ಬಳಿಕ ಉಭಯ ಪಕ್ಷಗಾರರ ಒಪ್ಪಿಗೆಯ ಮೇರೆಗೆ ದಾವೆಯನ್ನು ಹಿಂದೆ ಪಡೆಯಲಾಯಿತು. ದಾವೆದಾರರ ಪರವಾಗಿ ವಕೀಲರಾದ ರವೀಶ್ ಕುಮಾರ್, ಪ್ರತಿವಾದಿಗಳಾದ ರಾಮಪ್ಪ ಮತ್ತು ರವಿಕುಮಾರ್ ಪರವಾಗಿ ಎನ್.ವೆಂಕಟರಾಮ್, ಎಚ್.ಎನ್.ದಿವಾಕರ್, ಬಿ.ನಾಗರಾಜ, ಎಂ.ರಾಘವೇಂದ್ರ, ಕೆ.ಬಿ.ಮಹಾಬಲೇಶ್, ಶೇಷಗಿರಿ ಭಟ್ ಪರವಾಗಿ ಟಿ.ಎಸ್.ರಮಣ ಮಧ್ಯಸ್ಥಿಕೆಗಾರರಾಗಿ ವಕೀಲರಾದ ಮರಿದಾಸ್ ಭಾಗವಹಿಸಿದ್ದರು.
ಇದನ್ನೂ ಓದಿ: ಬ್ಯಾಟ್‌ನೊಂದಿಗೆ ವೆಡ್ಡಿಂಗ್ ಫೋಟೋ ಶೂಟ್: ಬಾಂಗ್ಲಾ ಆಟಗಾರ್ತಿ ಸಂಜಿದಾ ವಿಶಿಷ್ಟ ಹೆಜ್ಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.