ಹೈನುಗಾರಿಕೆಯಿಂದ ಲಾಭ: ವೆಂಕಟೇಶ್‌


Team Udayavani, Oct 22, 2020, 2:21 PM IST

mandya-tdy-2

ಭಾರತೀನಗರ: ಹಾಲು ಉತ್ಪಾದಕರುಗುಣಮಟ್ಟದ ಹಾಲು ಸರಬರಾಜು ಮಾಡುತ್ತಿದ್ದಾರೆ. ಸಂಘದ ಸಿಬ್ಬಂದಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಘ ಉತ್ತಮ ಬೆಳವಣಿಗೆ ಕಂಡಿದೆ ಎಂದು ಸಂಘದ ಅಧ್ಯಕ್ಷ ವೆಂಕಟೇಶ್‌ ತಿಳಿಸಿದರು.

ಎಸ್‌.ಐ.ಹೊನ್ನಲಗೆರೆ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆದಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿಮಾತನಾಡಿ, ಹೈನುಗಾರಿಕೆಯು ಒಂದು ಉಪಕಸುಭಾಗಿದೆ. ಹೈನುಗಾರಿಕೆಯಿಂದ ಉತ್ತಮ ಲಾಭಾಂಶವನ್ನು ಕಾಣಬಹುದು.ಆದ್ದರಿಂದ ರೈತರು ಹೆಚ್ಚು ಹೈನುಗಾರಿಕೆಯಲ್ಲಿ ತೊಡಗಬೇಕು ಎಂದರು.

ಜೀವನಕ್ಕೆ ತೊಂದರೆ ಇಲ್ಲ: ಇತ್ತೀಚಿನ ದಿನಗಳಲ್ಲಿ ಕೆಲವರು ಮಾತ್ರ ಹೈನುಗಾರಿಕೆಯಲ್ಲಿ ತೊಡಗಿದ್ದಾರೆ. ಈ ಹಿಂದೆ ಗ್ರಾಮದ ಜನ ಸಂಖ್ಯೆಗಿಂತ ಹೆಚ್ಚು ಹಸು, ಎಮ್ಮೆ, ಕುರಿ, ಮೇಕೆ ಇದ್ದವು. ಆದರೆ, ಇಂದು ಅವುಗಳೆಲ್ಲಾ ಮಾಯ ವಾಗುತ್ತಿವೆ. ಹೆಚ್ಚು ಹೈನುಗಾರಿಕೆಯಲ್ಲಿತೊಡಗಿದರೆ. ತಮ್ಮ ಜೀವನ ನಿರ್ವಹಣೆಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದರು.

ಸಂಘ 1977ರಲ್ಲಿ ಸ್ಥಾಪನೆಗೊಂಡು ಪ್ರಥಮಬಾರಿಗೆ ಎಚ್‌.ಕೆ.ಸುಬ್ಬಯ್ಯ ಅವರು ಅಧ್ಯಕ್ಷರಾಗಿ ಉತ್ತಮ ಆಡಳಿತ ನಡೆಸಿದ್ದರು ಎಂದು ಸಂಘದನಿರ್ದೇಶಕರು ಸ್ಮರಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಎಚ್‌.ಎನ್‌.ಕೆಂಪೇ ಗೌಡ ವಾರ್ಷಿಕ ಮಹಾಸಭೆಯ ನಡವಳಿಕೆಯನ್ನು ಓದಿ ಅಂಗೀಕರಿಸಿದರು.

ಸಂಘದ ಉಪಾಧ್ಯಕ್ಷ ಎಚ್‌.ಎಸ್‌.ಮಹ ದೇವಪ್ಪ, ನಿರ್ದೇಶಕರಾದ ಕೆಂಪರಾಜು, ಮಂಜು, ಎಚ್‌.ಕೆಂಪೇಗೌಡ, ಮರಿಸ್ವಾಮಿ, ಕೆಂಪೇಗೌಡ, ಎಚ್‌.ಸಿ.ಪುಟ್ಟಸ್ವಾಮಿ, ಪುಟ್ಟಮ್ಮ, ತಾಯಮ್ಮ, ಮಾಜಿ ಅಧ್ಯಕ್ಷ ಶಿವಸ್ವಾಮಿ, ಮಾದೇಗೌಡ, ಕೆಂಪರಾಜು, ಪುಟ್ಟಸ್ವಾಮಿ, ಮಹದೇವು, ಪುನೀತ್‌, ನಾಗರಾಜು ಹಾಜರಿದ್ದರು.

ನೀರಿನ ಯೋಜನೆ ಆರಂಭಿಸಲು ಸರ್ವೆ :

ಮದ್ದೂರು: ಮದ್ದೂರಮ್ಮ ಕೆರೆಯಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಯನ್ನುಆರಂಭಿಸಲು ಒತ್ತುವರಿಯಾಗಿದ್ದ ಸರ್ಕಾರಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ಕಾರ್ಯ ನಡೆಸಿ, ತೆರವುಗೊಳಿಸಿದರು.

ತಾಲೂಕಿನ ದೇಶಹಳ್ಳಿ ಗ್ರಾಮದ ಮದ್ದೂರಮ್ಮ ಕೆರೆ ಬದಿಯಲ್ಲಿದ್ದ ಗುಂಡು ತೋಪು ಸರ್ವೆ ನಂ.59ರ 4 ಎಕರೆ 7 ಗುಂಟೆ ಜಮೀನನ್ನು ತಹಶೀಲ್ದಾರ್‌ ವಿಜಯಕುಮಾರ್‌ ಆದೇಶದ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸರ್ವೆ ಕಾರ್ಯ ಕೈಗೊಂಡು ಜಾಗ ಗುರುತಿಸಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಕೈಗೊಳ್ಳಲು ಅವಕಾಶ ಕಲ್ಪಿಸಿದರು.

17ಕ್ಕೂ ಹೆಚ್ಚು ಮಂದಿ ಒತ್ತುವರಿ: ಮದ್ದೂರಮ್ಮ ಕೆರೆ ಬದಿಯಲ್ಲಿದ್ದ ಸರ್ಕಾರಿ ಜಮೀನನ್ನು ದೇಶಹಳ್ಳಿ ಗ್ರಾಮದ17ಕ್ಕೂ ಹೆಚ್ಚು ಮಂದಿ ರೈತರು ಒತ್ತುವರಿ ಮಾಡಿಕೊಂಡಿದ್ದರು. ಕಳೆದ ವಾರದ ಹಿಂದೆ ತಾಲೂಕು ಆಡಳಿತ ನೋಟಿಸ್‌ ಜಾರಿ ಮಾಡಿ, ಜಮೀನನ್ನು ತೆರವುಗೊಳಿಸುವಂತೆ ಆದೇಶ ನೀಡಲಾಯಿತು. ಹೀಗಾಗಿ ಸ್ಥಳಕ್ಕೆ ಕಂದಾಯ, ಪೊಲೀಸ್‌ ಹಾಗೂ ಇನ್ನಿತರೆ ಅಧಿಕಾರಿಗಳು ಭೇಟಿ ನೀಡಿ, ಸರ್ಕಾರಿ ಜಮೀನನ್ನು ವಶಕ್ಕೆ ಪಡೆದರು. ಕೆಲ ರೈತರು ಜಮೀನಿನಲ್ಲಿ ಬೆಳೆ ಬೆಳೆದಿದ್ದು, ಒಂದು ವಾರ ಅವಕಾಶ ನೀಡಲಾಗಿದೆ. ಕಟಾವು ಮುಗಿದ ಬಳಿಕ ಸರ್ಕಾರಿ ವಶಕ್ಕೆ ಪಡೆಯುವುದಾಗಿ ಅಧಿಕಾರಿಗಳು ತಿಳಿಸಿದರು.

ಕಂದಾಯ ರಾಜಸ್ವ ನಿರೀಕ್ಷಕ ವೆಂಕಟೇಶ್‌, ತಾಲೂಕು ಸರ್ವೆ ಅಧಿಕಾರಿಹನುಮೇಗೌಡ, ಗ್ರಾಮಲೆಕ್ಕಿಗಡಿ.ತಿಮ್ಮಯ್ಯಹಾಗೂ ಪೊಲೀಸ್‌ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.