ಸಂಜನಾ ಜಾಮೀನು ಅರ್ಜಿ ಮುಂದಕ್ಕೆ
Team Udayavani, Oct 22, 2020, 11:37 PM IST
ಬೆಂಗಳೂರು: ಡ್ರಗ್ಸ್ ಮಾರಾಟ ಜಾಲದ ನಂಟು ಹೊಂದಿರುವ ಆರೋಪದಲ್ಲಿ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ಅ. 24ಕ್ಕೆ ಮುಂದೂಡಿದೆ. ಸಂಜನಾ ಜಾಮೀನು ಅರ್ಜಿ ಗುರುವಾರ ನ್ಯಾ| ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಈ ವೇಳೆ ಸಂಜನಾ ಪರ ಹಿರಿಯ ವಕೀಲ ಹಸ್ಮತ್ ಪಾಷಾ ವಾದ ಮಂಡಿಸಿ, ಅರ್ಜಿದಾರರ ವಿರುದ್ಧ ಯಾವುದೇ ಆರೋಪಗಳಿಗೆ ಸಾಕ್ಷ್ಯಾಧಾರಗಳು ಇಲ್ಲ. ಅವರ ವಿರುದ್ಧ ಸುಳ್ಳು ದೂರು ದಾಖಲಿಸಲಾಗಿದೆ. ಸಂಜನಾ ಡ್ರಗ್ಸ್ ಸೇವಿಸಿಲ್ಲ. ಡ್ರಗ್ಸ್ ಮಾರಾಟ ಹಾಗೂ ಪೂರೈಕೆಯಲ್ಲೂ ತೊಡಗಿಸಿಕೊಂಡಿಲ್ಲ. ಅವರ ಮನೆ ಮೇಲೆ ದಾಳಿ ನಡೆಸಿದಾಗ ಒಂದು ಲ್ಯಾಪ್ಟಾಪ್ ಮತ್ತು ನಾಲ್ಕು ಮೊಬೈಲ್ ಫೋನ್ ಸಿಕ್ಕಿವೆ. ಇದರ ಹೊರತು ಯಾವುದೇ ಮಾದಕ ವಸ್ತು ದೊರೆತಿಲ್ಲ. ಆದ್ದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು. ವಾದ ಆಲಿಸಿದ ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.