ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ
Team Udayavani, Oct 23, 2020, 1:17 AM IST
ಸಾಂದರ್ಭಿಕ ಚಿತ್ರ
ಪಟ್ನಾ /ಹೊಸದಿಲ್ಲಿ /ಚೆನ್ನೈ: ಬಿಹಾರ ವಿಧಾನಸಭೆ ಚುನಾವಣೆ ಕಣದಲ್ಲಿ ಕೊರೊನಾ ಲಸಿಕೆ ಭರ್ಜರಿ ಸದ್ದು ಮಾಡುತ್ತಿದೆ. ಗುರುವಾರ ಬಿಜೆಪಿಯು ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಉಚಿತ ಕೊರೊನಾ ಲಸಿಕೆ ಮತ್ತು ಮುಂದಿನ ಐದು ವರ್ಷಗಳಲ್ಲಿ 19 ಲಕ್ಷ ಉದ್ಯೋಗ ಸೃಷ್ಟಿಯ ಭರವಸೆ ನೀಡಿದೆ. ಆದರೆ ಉಚಿತ ಕೊರೊನಾ ಲಸಿಕೆ ವಿಚಾರ ವಿವಾದಕ್ಕೆ ಕಾರಣವಾಗಿದ್ದು, ಬಿಹಾರಕ್ಕಷ್ಟೇ ಉಚಿತವೇ ಎಂದು ವಿಪಕ್ಷಗಳು ಪ್ರಶ್ನಿಸಿವೆ.
ಪಟ್ನಾದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಐಸಿಎಂಆರ್ನಿಂದ ಲಸಿಕೆಗೆ ಒಪ್ಪಿಗೆ ಸಿಕ್ಕ ತತ್ ಕ್ಷಣವೇ ಬಿಹಾರದಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದರು. ಇದಕ್ಕೆ ವಿಪಕ್ಷಗಳು ತೀವ್ರ ಆಕ್ಷೇಪವೆತ್ತಿವೆ.
ತಮಿಳುನಾಡಿನಲ್ಲೂ “ಉಚಿತ’
ಇತ್ತ ತ.ನಾಡಿನಲ್ಲೂ ಲಸಿಕೆ ರಾಜಕೀಯ ಆರಂಭವಾಗಿದೆ. ಸಿಎಂ ಇ. ಪಳನಿಸ್ವಾಮಿ ಅವರು, ರಾಜ್ಯದ ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡುವುದಾಗಿ ಘೋಷಿಸಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು, ಹೀಗಾಗಿ ಉಚಿತ ಲಸಿಕೆ ಬಗ್ಗೆ ಘೋಷಣೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.