ಓಲ್ಡ್‌ ಮಾಂಕ್‌ ಬಹುತೇಕ ಪೂರ್ಣ

ಪೋಸ್ಟ್‌ ಪ್ರೊಡಕ್ಷನ್‌ನತ್ತ ಚಿತ್ರತಂಡ

Team Udayavani, Oct 23, 2020, 1:39 PM IST

suchitra-tdy-4

ನಟ ಶ್ರೀನಿ ಅಭಿನಯಿಸಿ, ನಿರ್ದೇಶಿಸುತ್ತಿರುವ “ಓಲ್ಡ್‌ ಮಾಂಕ್‌’ ಚಿತ್ರದ ಎರಡನೇ ಹಂತದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿದೆ. ಕೊರೊನಾ ಲಾಕ್‌ಡೌನ್‌ ಘೋಷಣೆಯಾಗುವ ಮುಂಚೆ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿದ್ದ ಚಿತ್ರತಂಡ, ಲಾಕ್‌ ಡೌನ್‌ ಸಡಿಲವಾದ ಬಳಿಕ ಎರಡನೇ ಹಂತದ ಚಿತ್ರೀಕರಣಕ್ಕೆ ಚಾಲನೆ ನೀಡಿತ್ತು.

ಇದೀಗ “ಓಲ್ಡ್‌ ಮಾಂಕ್‌’ ಚಿತ್ರದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಚಿತ್ರದ 60ರಷ್ಟುಚಿತ್ರೀಕರಣ ಸಂಪೂರ್ಣವಾಗಿದೆ.  ಶ್ರೀನಿ ಅವರೊಂದಿಗೆ ನಾಯಕಿ ಅದಿತಿ, ಬಹುಭಾಷಾ ನಟ ಸುದೇವ್‌ ನಾಯರ್‌, ಹಿರಿಯ ನಟ ಎಸ್‌. ನಾರಾಯಣ್‌, ಸಿಹಿಕಹಿ ಚಂದ್ರು, ಆರ್‌.ಟಿ ರಮಾ, ಪಿ.ಡಿ ಸತೀಶ್‌ ಮೊದಲಾದವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಈ ಬಗ್ಗೆ ಮಾತನಾಡುವ ನಾಯಕ ನಟ ಕಂ ನಿರ್ದೇಶಕ ಶ್ರೀನಿ, “ಸದ್ಯ ನಮ್ಮ ಚಿತ್ರದ ಬಹುತೇಕ ಚಿತ್ರೀಕರಣವನ್ನು ಬೆಂಗಳೂರು ಸುತ್ತಮುತ್ತವೇ ನಡೆಸಲಾಗಿದೆ. ಮೊದಲು ಚಿತ್ರದ ಕೆಲ ಭಾಗಗಳ ಶೂಟಿಂಗ್‌ಗಾಗಿ ಹೊರಗೆ ಹೋಗುವ ಪ್ಲಾನ್‌ ಇತ್ತು. ಆದ್ರೆ ಕೋವಿಡ್‌ ಬಂದ ನಂತರ ನಮ್ಮ ಶೂಟಿಂಗ್‌ ಪ್ಲಾನ್‌ನಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳಲಾಗಿದ್ದು, ಬಹುತೇಕ ಶೂಟಿಂಗ್‌ ಅನ್ನು ಬೆಂಗಳೂರು ಸುತ್ತಮುತ್ತಲೇ ನಡೆಸುತ್ತಿದ್ದೇವೆ. ಈಗಾಗಲೇ ಎರಡನೇ ಹಂತದ ಶೂಟಿಂಗ್‌ ಯಶಸ್ವಿಯಾಗಿ ಮುಗಿದಿದ್ದು, ಇದೇ ಅ. 25 ರಿಂದ ಕೊನೆಗೆ ಹಂತದ ಶೂಟಿಂಗ್‌ ಶುರು ಮಾಡುವ ಯೋಜನೆ ಹಾಕಿಕೊಂಡಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ನಿಧಾನವಾಗಿ ಚಿತ್ರದ ಪ್ರಮೋಶನ್‌ ಚಟುವಟಿಕೆಗಳಿಗೂ ಚಾಲನೆ ನೀಡಿರುವ, ಬೇರೆ ಬೇರೆ ಮಾರ್ಗಗಳ ಮೂಲಕ ಸಿನಿಪ್ರಿಯರನ್ನು ತಲುಪುವ ಕೆಲಸಮಾಡುತ್ತಿದೆ. ಸದ್ಯ ನಡೆಯುತ್ತಿರುವ ಐಪಿಎಲ್‌ ಕ್ರಿಕೆಟ್‌  ಮ್ಯಾಚ್‌ನಲ್ಲಿ, ಚಿತ್ರತಂಡ ಸಿಎಸ್‌ಕೆ ಮಾವ ವರ್ಸಸ್‌ ಆರ್‌ಸಿಬಿ ಅಳಿಯ ಅನ್ನೋ ವಿಡಿಯೋವನ್ನು ಸೋಶಿಯಲ್‌ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದು, ಈ ವಿಡಿಯೋ ಎಲ್ಲ ಕಡೆ ವೈರಲ್‌ ಆಗಿತ್ತು. ಇನ್ನು ದಸರಾ ಹಬ್ಬದ ವಿಶೇಷವಾಗಿ ನಾಯಕ ಶ್ರೀನಿ ಮತ್ತು ನಾಯಕಿ ಅದಿತಿ “ಕಾವ್ಯಾಂಜಲಿ’ ಧಾರಾವಾಹಿಯ ಮೂಲಕ ವಿಶೇಷ ಅತಿಥಿಗಳಾಗಿ ಕಿರುತೆರೆ ಪ್ರೇಕ್ಷಕರ ಮುಂದೆ ಬರಲಿದ್ದಾರೆ.

ಟಾಪ್ ನ್ಯೂಸ್

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.