ಅರ್ಥಶಾಸ್ತ್ರದಲ್ಲಿ 4 ಚಿನ್ನದ ಪದಕ ಪಡೆದ ಮಹಿಳಾ ಪೇದೆ
ಮೈಸೂರು ವಿವಿ ಪದವಿ ಅರ್ಥಶಾಸ್ತ್ರ ವಿಷಯದಲ್ಲಿ ಪದಕ: ಶ್ಲಾಘನೆ
Team Udayavani, Oct 23, 2020, 4:30 PM IST
ಚಾಮರಾಜನಗರ: ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಹಿಳಾ ಪೇದೆ ಆಗಿರುವ ಕಾವೇರಿ ಅವರು ಮೈಸೂರು ವಿವಿ ಪದವಿ ಅರ್ಥಶಾಸ್ತ್ರ ವಿಷಯದಲ್ಲಿ 4 ಚಿನ್ನದ ಪದಕ ಹಾಗೂ 7 ನಗದು ಬಹುಮಾನ ಪಡೆದು ಇಲಾಖೆಗೆ ಹೆಮ್ಮೆ ತಂದಿದ್ದಾರೆ.
ಕಾವೇರಿ ಅವರು 2 ತಿಂಗಳ ಹಿಂದಷ್ಟೇ ಜಿಲ್ಲೆಯ ಪೊಲೀಸ್ ಪೇದೆ ಹುದ್ದೆಗೆ ಆಯ್ಕೆಯಾಗಿದ್ದು, ಸಿವಿಲ್ ಪೊಲೀಸ್ ಪೇದೆ ತರಬೇತಿ ಪಡೆಯುತ್ತಿದ್ದಾರೆ. ಎಸ್‌ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಾವೇರಿ ಅವರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೂಡ್ಲಾಪುರ ಗ್ರಾಮದವರು. ಬೆಳ್ಳಶೆಟ್ಟಿ, ಮಲ್ಲಿಗಮ್ಮ ದಂಪತಿ ಪುತ್ರಿ. ಕಾವೇರಿ ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆಕಾಲೇಜಿನ ವಿದ್ಯಾರ್ಥಿನಿಯಾಗಿದ್ದರು.2019ರ ಮೇ ನಲ್ಲಿ ನಡೆದ ಅಂತಿಮ ಬಿಎ ಅರ್ಥಶಾಸ್ತ್ರ ವಿಷಯದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅಲ್ಲದೇ ಅರ್ಥಶಾಸ್ತ್ರ ವಿಷಯದಲ್ಲಿ 1000 ಅಂಕಗಳಿಗೆ 910 ಅಂಕ ಗಳಿಸಿ ಇಡೀ ವಿವಿಗೆ ಮೊದಲಿಗರಾಗಿದ್ದಾರೆ. ಕಳೆದ ಸೋಮವಾರ ನಡೆದ ಮೈಸೂರು ವಿವಿ ಘಟಿಕೋತ್ಸವದಲ್ಲಿ ಅವರಿಗೆ 4 ಚಿನ್ನದ ಪದಕ, 7 ನಗದು ಬಹುಮಾನ ನೀಡಲಾಯಿತು.
ಪ್ರಸ್ತುತ ಕಾವೇರಿ ಅವರು ಚಾ.ನಗರ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಪೇದೆ ಯಾಗಿ ನೇಮಕವಾಗಿದ್ದಾರೆ. ಚಿನ್ನದ ಪದಕ ಪಡೆದು ಕಾವೇರಿ ಅವರನ್ನು ಎಸ್ಪಿ ದಿವ್ಯಾ ಸಾರಾ ಥಾಮಸ್ ತಮ್ಮ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿದರು. ಕಾವೇರಿ ಅವರ ಸಾಧನೆಯನ್ನು ಮುಕ್ತ ಕಂಠದಿಂದಪ್ರಶಂಸಿಸಿದರು.
“ಉದಯವಾಣಿ’ ಯೊಂದಿಗೆ ಮಾತನಾಡಿದ ಕಾವೇರಿ ಅವರು, ನನ್ನ ಆರ್ಥಿಕ ಪರಿಸ್ಥಿತಿಯಲ್ಲಿ ಉದ್ಯೋಗ ಮುಖ್ಯವಾಗಿರುವುದರಿಂದ ಪೊಲೀಸ್ ಹುದ್ದೆಯಲ್ಲೇ ಮುಂದುವರಿಯುತ್ತೇನೆ. ಹುದ್ದೆಯಲ್ಲಿದ್ದು ಕೊಂಡೇ ಇಲಾಖಾ ಪರೀಕ್ಷೆ ಎದುರಿಸಿ ಪಿಎಸ್‌ಐ ಆಗುವ ಗುರಿ ಹೊಂದಿದ್ದೇನೆ ಎಂದರು.
ನಾನು ಕಷ್ಟಪಟ್ಟಿದ್ದಕ್ಕೂ ಉತ್ತಮ ಪ್ರತಿಫಲ ಬಂದಿದೆ. ಪ್ರತಿ ಸೆಮಿಸ್ಟರ್‌ನಲ್ಲಿ ಅತ್ಯಧಿಕ ಅಂಕ ಪಡೆಯುತ್ತಿದ್ದೆ. ನನ್ನ ಆಸಕ್ತಿಯ ವಿಷಯ ಅರ್ಥ ಶಾಸ್ತ್ರ. ಇದರಲ್ಲಿ ವಿವಿಗೇ ಪ್ರಥಮ ಸ್ಥಾನ ಬಂದಿದ್ದು ಸಂತೋಷ ತಂದಿದೆ. ಇದಕ್ಕಾಗಿ ನಮ್ಮ ಇಲಾಖೆ ಉನ್ನತ ಅಧಿಕಾರಿಗಳು ಸನ್ಮಾನಿಸಿರುವುದು ಹೆಮ್ಮೆ ಮೂಡಿಸಿದೆ. – ಕಾವೇರಿ, ಪೊಲೀಸ್ ಪೇದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.