ಏತನೀರಾವರಿ ಯೋಜನೆಯಿಂದ ರೈತರ ಬದುಕು ಹಸನು


Team Udayavani, Oct 23, 2020, 5:10 PM IST

hasan-tdy-1

ಚನ್ನರಾಯಪಟ್ಟಣ/ಶ್ರವಣಬೆಳಗೊಳ: ತಾಲೂಕಿನ ರೈತರ ಬದುಕು ಹಸನಾಗಲಿ ಎಂಬಉದ್ದೇಶದಿಂದ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಲು ಶ್ರಮಿಸಿದ್ದೇನೆ ಎಂದು ಶಾಸಕ ಸಿ.ಎನ್‌.ಬಾಲಕೃಷ್ಣ ಹೇಳಿದರು.

ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಏತನೀರಾವರಿ ಯೋಜನೆಯಿಂದ ಭರ್ತಿಯಾದ ಹುಳಿಗೆರೆ ಕೆರೆ ಪೂಜೆ ಸಲ್ಲಿಸಿ, ಬಾಗಿನ ಸಮರ್ಪಿಸಿ ಮಾತನಾಡಿದ ಅವರು, ಈ ಭಾಗದ ಜನರಲ್ಲಿ ಇಷ್ಟು ದಿನ ಕೆರೆಗೆ ನೀರು ಬರುತ್ತದೋ, ಇಲ್ಲವೋ ಎಂಬ ಅನುಮಾನವಿತ್ತು. ಆದರೆ, ಈಗಹೋಬಳಿ ವ್ಯಾಪ್ತಿಯ ಹಲವು ಕೆರೆಗಳು  ತುಂಬುತ್ತಿವೆ. ಇದರಿಂದ ರೈತರಲ್ಲಿ ವಿಶ್ವಾಸಬಂದಿದೆ. 20 ವರ್ಷದ ಕನಸು ನನಸಾಗಿದೆ ಎಂದು ತಿಳಿಸಿದರು.

ಪರೋಕ್ಷ ತಿರುಗೇಟು: ಏತನೀರಾವರಿ ಯೋಜ  ನೆಯು ಸಮರ್ಥವಾಗಿ ಸಾಕಾರಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಯಾರ ಬಗ್ಗೆಯೂ ಹಗುರವಾಗಿ ಮಾತನಾಡುವುದಿಲ್ಲ, ಕೆಲವರ ಹೇಳಿಕೆಗಳಿಗೆ ಸಮಯ ಬಂದಾಗ ಉತ್ತರ ಕೊಡುತ್ತೇನೆ ಎಂದು ಕಾಂಗ್ರೆಸ್‌ ಮುಖಂಡರಿಗೆಪರೋಕ್ಷವಾಗಿ ತಿರುಗೇಟು ನೀಡಿದರು. ಇನ್ನು ಒಂದು ವಾರದೊಳಗೆ ಚನ್ನೇನಹಳ್ಳಿ,ಕೆಂಪಿನಕೋಟೆ, ಮರಿಶೆಟ್ಟಿಹಳ್ಳಿ, ಎನ್‌.ಜಿ.  ಕೊಪ್ಪಲು, ಪರಮ, ಹಳೆಬೆಳಗೊಳ, ಬೆಕ್ಕ ಗ್ರಾಮದ ಕೆರೆಗಳು ತುಂಬಲಿವೆ, ಅ.25ರಹೊತ್ತಿಗೆ ಮತಿಘಟ್ಟ ಕೆರೆಗೆ ನೀರು ಹರಿಯಲಿದ್ದು, ನಂತರ ಹಿರೀಸಾವೆ ಭಾಗದ ಕೆರೆಗಳು ತುಂಬಲಿವೆ ಎಂದು ಹೇಳಿದರು.

ಇತರೆ ಕೆರೆಗಳಿಗೂ ನೀರು: ಡಿಸೆಂಬರ್‌31ರವರೆಗೆ ನಾಲೆಯಲ್ಲಿ ನೀರು ಹರಿಯಲಿದ್ದು, ಈ ಭಾಗದ ಬಹುತೇಕ ಕೆರೆಗಳು ತುಂಬಲಿವೆ, ಮುಂದಿನ ಸಾಲಿನಲ್ಲಿ ಸುಂಡಹಳ್ಳಿ, ಕಂಡೇರಿಕಟ್ಟೆ, ಹೊಸಹಳ್ಳಿ, ಚಲ್ಯಾ, ಕುಂಭೇನಹಳ್ಳಿ ಕೆರೆಗಳಿಗೆ ನೀರು ಬರಲಿದೆ ಎಂದು ಭರವಸೆ ನೀಡಿದರು. ಹುಳಿಗೆರೆ ಕೆರೆ 25 ಎಕರೆ ಪ್ರದೇಶವನ್ನು ಹೊಂದಿದೆ. ಈಗ ಕೆರೆ ತುಂಬಿದ್ದರಿಂದ ನಮ್ಮ ಸುತ್ತಮುತ್ತಲಿನ ಜಮೀನಿನ ತೆಂಗಿನ ತೋಟ ಸಮೃದ್ಧಿಗೊಂಡಿದ್ದು, ಅಂತರ್ಜಲ ಹೆಚ್ಚಾಗಿದೆ. ಇದರಿಂದ ರೈತರ ಸಂಕಷ್ಟಗಳು ದೂರವಾಗಲಿವೆ ಎಂದು ಅಭಿಪ್ರಾಯಪಟ್ಟರು.

ಮೆರವಣಿಗೆ: ಬಾಗಿನ ಅರ್ಪಿಸಲು ಆಗಮಿಸಿದ್ದ ಶಾಸಕರನ್ನು ಗ್ರಾಮಸ್ಥರು ಹೂ, ಬಾಳೆಕಂದು ಕಟ್ಟಿ ಅಲಂಕೃತಗೊಳಿಸಿದ್ದ ಎತ್ತಿನಗಾಡಿಯಲ್ಲಿ ಗ್ರಾಮದಿಂದ ಕೆರೆ ವರೆಗೆ ಮೆರವಣಿಗೆ ಮಾಡಿದರು. ಶಾಸ್ತ್ರೋಕ್ತವಾಗಿ ಗಂಗಾಪೂಜೆ ಮಾಡಿದ ಶಾಸಕ ಬಾಲಕೃಷ್ಣ ಕೆರೆಗೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯೆ ಮಮತಾ ರಮೇಶ್‌, ಪೂಮಡಿಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಿ.ಎ.ದೊಡ್ಡೇಗೌಡ, ಗ್ರಾಮದ ರಾಜಮ್ಮ, ಚಿಕ್ಕಮ್ಮ, ನಂಜುಂಡೇಗೌಡ, ನಾಗೇಗೌಡ, ಎಂಜಿನಿಯರ್‌ ಗಜೇಂದ್ರ ಮಂಜಣ್ಣ, ತಾಲೂಕು ಜೆಡಿಎಸ್‌ ಅಧ್ಯಕ್ಷ ದೇವರಾಜೇಗೌಡ, ಟಿಎಪಿಎಂ ಎಸ್‌ ನಿರ್ದೇಶಕ ಕೃಷ್ಣೇಗೌಡ, ತಾಪಂ ಮಾಜಿ ಸದಸ್ಯ ಮಂಜೇಗೌಡ, ರಾಜಣ್ಣ, ಗಂಗಣ್ಣ, ಸುತ್ತ ಮುತ್ತಲ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.