ವೀರಗಲ್ಲು ಧ್ವಂಸ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Team Udayavani, Oct 23, 2020, 5:15 PM IST

HASAN-TDY-2

ಸಕಲೇಶಪುರ: ತಾಲೂಕಿನ ರಾಜೇಂದ್ರಪುರ ಹೊರವಲಯದ ಸರ್ಕಾರಿ ಜಮೀನಿನಲ್ಲಿದ್ದ ಚೋಳರ ಕಾಲದ್ದು ಎನ್ನಲಾದ ಶಾಸನವುಳ್ಳ ಹಾಗೂ ವೀರಗಲ್ಲುಗಳನ್ನು ಧ್ವಂಸಗೊಳಿಸಿದಕಿಡಿಗೇಡಿಗಳನ್ನು ಬಂಧಿಸಬೇಕು ಹಾಗೂ ಪುನರ್‌ ಪ್ರತಿಷ್ಠಾಪಿಸಬೇಕು ಎಂದು ಭಜರಂಗ ದಳ, ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು ತಾಲೂಕಿನ ಬಾಳ್ಳುಪೇಟೆ ವೃತ್ತದಲ್ಲಿ ಪ್ರತಿಭಟಿಸಿದರು.

ಸಕಲೇಶಪುರ, ಮೂಗಲಿ, ಜೆ.ಪಿ.ನಗರ ಹಾಗೂ ರಾಜೇಂದ್ರಪುರದಿಂದ ನಾಲ್ಕು ತಂಡಗಳಾಗಿ ಬಾಳ್ಳುಪೇಟೆ ಗ್ರಾಮಕ್ಕೆ ಬೈಕ್‌ರ್ಯಾಲಿ ನಡೆಸಿದ ಕಾರ್ಯಕರ್ತರು, ಗ್ರಾಮದ ಗುರಪ್ಪವೃತ್ತದಲ್ಲಿ ಭಾರತ ಮಾತಾ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪ್ರತಿಭಟನೆ ನಡೆಸಿದರು. ನಂತರ ನಡೆದ ಬಹಿರಂಗ ಸಭೆಯಲ್ಲಿ ಭಜರಂಗದಳ ಗ್ರಾಮದಲ್ಲಿ ನೆಲೆಸಿರುವ ಇಬ್ಬರು ಅನ್ಯಕೋಮಿನವರು ರಾಜೇಂದ್ರ ಪುರ ಗ್ರಾಮದಲ್ಲಿನ ಸರ್ವೆ ನಂ.20ರಲ್ಲಿನ ಸರ್ಕಾರಿ ಜಮೀನು ಕಬಳಿಸಲು ಮುಂದಾಗಿದ್ದಾರೆಎಂದು ಆರೋಪಿಸಿದರು.

ಸರ್ವೆ ನಂ.20ರಲ್ಲಿನ ಜಮೀನಲ್ಲಿ 800 ವರ್ಷಗಳ ಪುರಾತನ ಬೀರಲಿಂಗೇಶ್ವರ ದೇವಸ್ಥಾನ ಇತ್ತು ಎಂದು ಹೇಳಿದ ರಘು, ಸದ್ಯ ಮಾಸ್ತಿ ಕಲ್ಲುಗಳನ್ನು ಜೆಸಿಬಿ ಯಂತ್ರದ ಮೂಲಕಧ್ವಂಸಗೊಳಿಸಿದ್ದು, ಉದ್ದೇಶ ಪೂರ್ವಕವಾಗಿ ಈ ಕೃತ್ಯ ನಡೆಸಲಾಗಿದೆ ಎಂದು ದೂರಿದರು.

ಗ್ರಾಮದ ಸರ್ವೆ.ನಂ.20ಲ್ಲಿ 198 ಎಕರೆ ಸರ್ಕಾರಿ ಜಮೀನಿದೆ. ಇದನ್ನು ಸಕ್ರಮಗೊಳಿಸುವಂತೆ ಹಲವು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಇಬ್ಬರು ಅನ್ಯ ಕೋಮಿನವರು 12 ಎಕರೆ ಕಬಳಿಸಲು ಮುಂದಾಗಿದ್ದಾರೆನ್ನಲಾಗಿದೆ. ಈ ಬಗ್ಗೆ ಗ್ರಾಮಸ್ಥರು ಕಂದಾಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.

ಗ್ರಾಮಸ್ಥ ಪ್ರಕಾಶ್‌ ಮಾತನಾಡಿದರು. ಧ್ವಂಸಗೊಳಿಸಿರುವ ವೀರಗಲ್ಲುಗಳನ್ನು ಪುನರ್‌ ಪ್ರತಿಷ್ಠಾಪಿಸಿ, ಕಬಳಿಕೆ ಮಾಡಿದ್ದಾರೆಎನ್ನಲಾದ ಜಮೀನು ಸರ್ಕಾರ ವಶಕ್ಕೆ ಪಡೆಯಬೇಕು ಎಂದು ಡಿವೈಎಸ್‌ಪಿ ಗೋಪಿ, ಬೆಳಗೋಡು ಹೋಬಳಿ ಸಹಾಯಕ ತಹಶೀಲ್ದಾರ್‌ ನಾಗರಾಜ್‌ಗೆ ಮನವಿ ನೀಡಲಾಯಿತು.

ಸಮಾಜ ಸೇವಕ ಬಾಳ್ಳುಗೋಪಾಲ್, ಬಜರಂಗದಳ ತಾಲೂಕು ಸಂಯೋಜಕ ಶ್ರೀಜಿತ್‌ಗೌಡ, ನಗರ ಘಟಕದ ಸಂಚಾಲಕ ಕಾರ್ತೀಕ್‌, ಬೆಳಗೋಡು ಹೋಬಳಿಯ ಸಂಚಾಲಕ ನಿಖೀಲ್‌, ವಿಶ್ವ ಹಿಂದೂ ಪರಿಷತ್‌ ತಾಲೂಕುಕಾರ್ಯದರ್ಶಿ ಮಂಜು, 12 ಗ್ರಾಮಗಳ ಗ್ರಾಮಸ್ಥರು ಭಾಗವಹಿಸಿದ್ದರು.

ಬಿಗಿ ಪೊಲೀಸ್‌ ಬಂದೋಬಸ್ತ್ ;   ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್‌ ಬೃಹತ್‌ಪ್ರತಿಭಟನೆ ಹಿನ್ನೆಲೆಯಲ್ಲಿ ಬುಧವಾರ ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.ಅಹಿತಕರ ಘಟನೆ ಸಂಭವಿಸದಂತೆ ಡಿವೈಎಸ್‌ಪಿ ಬಿ.ಆರ್‌. ಗೋಪಿ ನೇತೃತ್ವದಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸಕಲೇಶಪುರ ವೃತ್ತ ನಿರೀಕ್ಷಕ ಗಿರೀಶ್‌, ಗ್ರಾಮಾಂತರ ಠಾಣೆ ಪಿಎಸ್‌ಐ ಚಂದ್ರಶೇಖರ್‌, ನಗರ ಠಾಣೆ ಪಿಎಸ್‌ಐ ಮಾಲಾ, ಯಸಳೂರು ಪಿಎಸ್‌ಐ ಸುರೇಶ್‌, ಆಲೂರು ಪಿಎಸ್‌ಐ ಮಂಜುನಾಥ್‌ ನಾಯಕ್‌, ಐವರು ಎಎಸ್‌ಐ,ಸಶಸ್ತ್ರ ಮೀಸಲು ಪಡೆಯ ಎರಡು ವಾಹನ ಹಾಗೂ 60 ಪೊಲೀಸರು ಬಂದೋಬಸ್ತ್ನಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.