ಅನುಮತಿ ಇಲ್ಲದೆ ಕೊಳವೆಬಾವಿ ಕೊರೆದರೆ ಶಿಕ್ಷೆ

Team Udayavani, Oct 23, 2020, 5:22 PM IST

tk-tdy-1

ಸಾಂದರ್ಭಿಕ ಚಿತ್ರ

ಮಧುಗಿರಿ: ರಾಜ್ಯದಲ್ಲಿ ಅಂತರ್ಜಲ ಪ್ರಮಾಣ ಕುಸಿಯುತ್ತಿರುವ ಹಿನ್ನೆಲೆ ಅಧಿಸೂಚಿತ ಪ್ರದೇಶಗಳಲ್ಲಿ ಹೊಸ ಕೊಳವೆ ಬಾವಿ(ಬೋರ್‌ವೆಲ್‌) ಕೊರೆಯದಂತೆ ಕರ್ನಾಟಕ ಅಂತರ್ಜಲ ಪ್ರಧಿಕಾರ ಅಧಿಸೂಚನೆ ಹೊರಡಿಸಿದೆ. ನಿಯಮ ಉಲ್ಲಂ ಸಿದರೆ ಕ್ರಿಮಿನಲ್‌ ಮೊಕದ್ದಮೆ ಹಾಗೂ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.

ರಾಜ್ಯಾದ್ಯಂತ ಕೊಳವೆಬಾವಿ ಕೊರೆಯಲು ಸರ್ಕಾರದ ಅನುಮತಿ ಅಗತ್ಯವೆಂದು ಸರ್ಕಾರ ಘೋಷಿಸಿ ಆದೇಶಿಸಿದ್ದು, ಜಿಲ್ಲಾವಾರು ತಾಲೂಕುಗಳ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲಿ ಜಿಲ್ಲೆಯ ಮಧುಗಿರಿ ಸೇರಿದ್ದು, ಇನ್ಮುಂದೆ ತಾಲೂಕಿನ ರೈತರು ಹಾಗೂ ಸಾರ್ವಜನಿಕರು ಕೊಳವೆಬಾವಿ ಕೊರೆಸಲು ಜಿಲ್ಲಾಧಿಕಾರಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ರಾಜ್ಯ ಅಂತರ್ಜಲ ಅಧಿನಿಯಮ 2011 ಮತ್ತು ನಿಯಮಾವಳಿ 2012 ರ ಅನುಸಾರ ಅತಿ  ಯಾದ ಅಂತರ್ಜಲ ಬಳಕೆಯಲ್ಲಿ ಜಿಲ್ಲೆಯ ಮಧುಗಿರಿ, ಕೊರಟಗೆರೆ, ಚಿಕ್ಕನಾಯ್ಕನಹಳ್ಳಿ, ತುಮಕೂರು ಹಾಗೂ ತಿಪಟೂರು ತಾಲೂಕು ಮಂಚೂಣಿಯಲ್ಲಿದೆ. ಈ ಕ್ಷೇತ್ರಗಳಿಗೆ ರಾಜ್ಯ ಅಂತರ್ಜಲ ಪ್ರಾಧಿಕಾರದ ಈ ಆದೇಶ ಅನ್ವಯವಾಗಲಿದೆ.

ಆ.5, 2020 ರಿಂದ ಜಾರಿಗೆ ಬರುವಂತೆ ಈ ಬಗ್ಗೆಪ್ರಾಧಿಕಾರದ ನಿರ್ದೇಶನಾಲಯ ಹಾಗೂ ಸದಸ್ಯ ಕಾರ್ಯದರ್ಶಿಗಳ ಕಚೇರಿಯಿಂದ ಅಧಿಸೂಚನೆ ಹೊರಡಿಸಲಾಗಿದೆ. ಈ ಕಾನೂನಿನಂತೆ ಮುಂಬರುವ ದಿನಗಳಲ್ಲಿ ಕೊಳವೆಬಾವಿ ಕೊರೆಯಲು ಜಿಲ್ಲಾ ಮಟ್ಟದ ಸಮಿತಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಪ್ರಸ್ತುತ ಬಳಕೆಯಲ್ಲಿರುವ ಬಳಕೆ ದಾರರು ತಮ್ಮ ಹೆಸರನ್ನು ಅಂತರ್ಜಲ ಪ್ರಾಧಿಕಾರದಲ್ಲಿಕಡ್ಡಾಯವಾಗಿ ನೋಂದಾಯಿಸಿ ಕೊಳ್ಳಬೇಕು. ಅನುಮತಿ ಪಡೆಯ ದಿದ್ದರೆ ಯಾವುದೇ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅನರ್ಹರಾಗುತ್ತಾರೆ. ಅನುಮತಿ ಪಡೆಯದೆ ನೂತನವಾಗಿ ಕೊಳವೆಬಾವಿಕೊರೆಯಲು ಮುಂದಾಗುವ ಭೂ ಮಾಲೀಕರು ಹಾಗೂ ಯಂತ್ರದ ಮಾಲೀಕರ ಮೇಲೆ ಅಧಿನಿಯ ಮದ ಪ್ರಕರಣ 32ರಂತೆ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರೈತ ಕತ್ತು ಹಿಸುಕುವ ಆದೇಶಗಳು: ಆನಂದ್‌ :  ಈ ಸರ್ಕಾರದ ಗೊಂದಲದ ಆದೇಶಗಳು ರೈತರಕತ್ತು ಹಿಸುಕುತ್ತಿವೆ. ಅಂತರ್ಜಲ ಅಭಿವೃದ್ಧಿಗೆ ಅಗತ್ಯವಾದ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರುವ ಯೋಗ್ಯತೆಯಿಲ್ಲದೆ ಇಂಥಕೆಲಸಕ್ಕೆ ಕೈ ಹಾಕಬಾರದು. ಅಂತರ್ಜಲ ಬಳಕೆಯಾಗದಿದ್ದರೆ ಬಯಲು ಸೀಮೆಯರೈತರು ಹೇಗೆ ಕೃಷಿ ಮಾಡಬೇಕು. ಈಗಿರುವ ಕಚೇರಿಗಳಿಲ್ಲಿ ರೈತರನ್ನು ಸತಾಯಿಸುತ್ತಿದ್ದು, ಈಗ ಕೊಳವೆಬಾವಿಯ ಅನುಮತಿಗಾಗಿ ರೈತರ ಜೀವ ಹಿಂಡುತ್ತಾರೆ. ಇಂಥ ತಲೆಕೆಟ್ಟ ಆದೇಶಗಳು ರೈತರಿಗೆ ಮಾರಕವೇ ಹೊರತು, ಒಳಿತಲ್ಲ.

ಕೆಲವೊಮ್ಮೆ ತುರ್ತು ಕೊಳವೆಬಾವಿಯ ಅಗತ್ಯವಿದ್ದಲ್ಲಿ ಈ ಆದೇಶ ಮಾನಹಕ್ಕುಗಳ ಉಲ್ಲಂಘನೆಗೂ ಕಾರಣವಾಗಲಿದೆ ಎಂದು ಜಿಲ್ಲಾ ರೈತಸಂಘ ಹಾಗೂ ಹಸಿರುಸೇನೆ ಅಧ್ಯಕ್ಷ ಆನಂದಪಟೇಲ್‌ ಆಕ್ರೋಶ ವ್ಯಕ್ತಪಡಿಸಿದರು.

ಕೊಳವೆಬಾವಿಯ ನೀರುಕುಡಿಯಲು ಯೋಗ್ಯವಲ್ಲ.ಆದಷ್ಟೂ ಇದನ್ನು ಶುದ್ಧೀಕರಿಸಬೇಕು.ಅಲ್ಲದೆ ಅತಿಯಾದ ನೀರು ಬಳಕೆಯಿಂದ ಅಂತರ್ಜಲ ಕುಸಿಯುತ್ತದೆ. ಇದಕ್ಕಾಗಿ ಸರ್ಕಾರ ಈ ಆದೇಶ ಮಾಡಿದ್ದು, ಎಲ್ಲಬಳಕೆದಾರರು ಕಾನೂನಿನಂತೆ ಹೆಸರು ನೋಂದಾಯಿಸಲು ಮುಂದಾಗಬೇಕು. – ರಾಮದಾಸು, ಎಇಇ, ಗ್ರಾಮೀಣ ಕುಡಿಯುವ ನೀರು ಇಲಾಖೆ, ಮಧುಗಿರಿ.

 -ಮಧುಗಿರಿ ಸತೀಶ್‌

ಟಾಪ್ ನ್ಯೂಸ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.