ಜನಸೇವೆಗೆ ಯುವಕರನ್ನು ಸಜ್ಜುಗೊಳಿಸಿ: ಡಿಸಿ


Team Udayavani, Oct 23, 2020, 6:10 PM IST

BG-TDY-1

ಬೆಳಗಾವಿ: ಪ್ರಸಕ್ತ ವರ್ಷ ಕೋವಿಡ್‌-19 ನಿಯಂತ್ರಣ ಹಾಗೂ ಪ್ರವಾಹ ಮತ್ತಿತರ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಸೇವೆಗೆ ಸಿದ್ಧವಾಗಿರುವ ಯುವಕರ ತಂಡವನ್ನು ಸಜ್ಜುಗೊಳಿಸಲು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಸಭಾಂಗಣದಲ್ಲಿ ಗುರುವಾರ ನಡೆದ 2020-21 ನೇ ಸಾಲಿನ ಜಿಲ್ಲಾ ಯುವ ಕಾರ್ಯಕ್ರಮಗಳ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದಅವರು, ಜಿಲ್ಲೆಯಲ್ಲಿ ಕೋವಿಡ್‌ ಮರಣ ಪ್ರಮಾಣ ಕಡಿಮೆಯಾಗಿದ್ದು,ಎಲ್ಲ ಕಡೆಗಳಲ್ಲೂ ಆಕ್ಸಿಜನ್‌ ಹಾಸಿಗೆ ವ್ಯವಸ್ಥೆ ಸಮರ್ಪಕವಾಗಿದೆ. ಆಕ್ಸಿಜನ್‌ ಕೊರತೆಯಿಲ್ಲ ಎಂದರು.

ಸಾರ್ವಜನಿಕರು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಕೋವಿಡ್‌-19 ನಿಯಂತ್ರಣ ಸುಲಭ ಸಾಧ್ಯವಿದೆ. ಆದ್ದರಿಂದ ಕಡ್ಡಾಯವಾಗಿ ಮಾಸ್ಕ್ ಬಳಸಬೇಕು. ಈ ನಿಟ್ಟಿನಲ್ಲಿ ನೆಹರು ಯುವ ಕೇಂದ್ರದ ಪ್ರಸಕ್ತ ಸಾಲಿನ ಎಲ್ಲ ಚಟುವಟಿಕೆ ಮತ್ತುಕಾರ್ಯಕ್ರಮಗಳಲ್ಲೂ ಯೂಥ್‌ ಕ್ಲಬ್‌ಗಳ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಲು ಹೆಚ್ಚು ಪ್ರಚಾರ ಕೈಗೊಳ್ಳಬೇಕು ಎಂದು ಸೂಚಿಸಿದರು.

ಯುವ ಕೇಂದ್ರದಿಂದ ತರಬೇತಿ ಪಡೆದಿರುವ ತಂಡಗಳನ್ನು ಪ್ರವಾಹಮತ್ತಿತರ ತುರ್ತು ಸಂದರ್ಭದಲ್ಲಿ ಜನರ ರಕ್ಷಣೆ ಜೊತೆಗೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಜತೆ ಕೈಜೋಡಿಸಲು ಅನುಕೂಲವಾಗುವಂತೆ ಸದಾ ಸಿದ್ಧವಾಗಿಟ್ಟುಕೊಳ್ಳಬೇಕು. ಪ್ರತಿ ಕಾರ್ಯಕ್ರಮಗಳಲ್ಲಿ ಹೆಚ್ಚು ಹೆಚ್ಚು ಜನರನ್ನು ಒಳಗೊಳ್ಳುವಂತೆ ಯುವ ಕೇಂದ್ರ ಚಟುವಟಿಕೆಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.

ನೆಹರು ಯುವ ಕೇಂದ್ರಕ್ಕೆ ಕಚೇರಿ ಒದಗಿಸಿಕೊಡುವ ಬಗ್ಗೆ ಮನವಿ ಸಲ್ಲಿಸಿದರೆ ಸರ್ಕಾರಿ ಕಟ್ಟಡವನ್ನು ಒದಗಿಸಲು ಪರಿಶೀಲಿಸುವುದಾಗಿಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ರೋಹಿತ್‌ ಕಲರಾ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಗಳ ಕುರಿತು ವಿವರಿಸಿದರು. ಲೆಕ್ಕಾಧಿಕಾರಿ ಆರ್‌.ಆರ್‌.ಮುತಾಲಿಕ ದೇಸಾಯಿ ಪ್ರಸಕ್ತ ಸಾಲಿನಲ್ಲಿ ಕೋವಿಡ್‌ -19 ಇರುವುದರಿಂದ ಕ್ರಿಯಾ ಯೋಜನೆಯಡಿ ತಾಲೂಕುವಾರು ಕಾರ್ಯಕ್ರಮಗಳನ್ನು ಹಂಚಿಕೆ ಮಾಡಲಾಗಿದೆ. ಏಕ ಭಾರತ ಶ್ರೇಷ್ಠ ಭಾರತ ಮತ್ತು ಆತ್ಮನಿರ್ಭರ್‌ ಭಾರತ ಈ ವರ್ಷದ ಪ್ರಮುಖ ವಿಷಯಗಳಾಗಿದ್ದು, ಇದಕ್ಕೆ ಸಂಬಂಧಪಟ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಇದಲ್ಲದೇ ಕೋವಿಡ್‌-19 ಅರಿವು ಹಾಗೂ ಯುವಕರಿಗೆ ಪ್ರಕೃತಿ ವಿಕೋಪ ನಿರ್ವಹಣೆಯ ಪೂರ್ವಸಿದ್ಧತಾ ತರಬೇತಿ, ಕೌಶಲ ಅಭಿವೃದ್ಧಿ, ಕ್ರೀಡಾಕೂಟ, ಸ್ವತ್ಛಗ್ರಾಮ, ಯುವ ಸಮಾವೇಶ, ಜಲಜಾಗರಣ ಅಭಿಯಾನ ಮತ್ತಿತರ ಕಾರ್ಯಕ್ರಮಗಳಿಗೆ ಕ್ರಿಯಾ ಯೋಜನೆಯಡಿ ಅನುಮೋದನೆ ನೀಡಲಾಗಿದೆ ಎಂದು ಮುತಾಲಿಕ್‌ ದೇಸಾಯಿ ವಿವರಿಸಿದರು.

ನೆಹರು ಯುವ ಕೇಂದ್ರದ 2020-21 ನೇ ಸಾಲಿನ ಕ್ರಿಯಾ ಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಯುವ ಕಾರ್ಯಕ್ರಮಗಳ ಸಲಹಾ ಸಮಿತಿಯಸದಸ್ಯರಾಗಿರುವ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ರಾಹುಲ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಉಪ ನಿರ್ದೇಶಕ ಗುರುನಾಥ ಕಡಬೂರ, ರೆಡ್‌ ಕ್ರಾಸ್‌ ಸಂಸ್ಥೆಯ ಕಾರ್ಯದರ್ಶಿ ಡಾ.ಡಿ.ಎನ್‌.ಮಿಸಾಳೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ನೆಹರು ಯುವ ಕೇಂದ್ರದ ನಿವೃತ್ತ ಸಮನ್ವಯಾಧಿಕಾರಿ ಎಸ್‌. ಯು.ಜಮಾದಾರ, ಕಲಾತಂಡದ ಭರತ ಕಲಾಚಂದ್ರ, ಮಹಿಳಾ ಕಲ್ಯಾಣ ಸಂಸ್ಥೆಯ ವೈಜಯಂತಿ ಚೌಗಲಾ ಸಭೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನುಪ್ರಚುರಗೊಳಿಸುವ “”ಸಂವಿಧಾನ ಪೀಠಿಕೆ ಗೋಡೆ”ಯ ಮೇಲೆ ಜಿಲ್ಲಾಧಿಕಾರಿಗಳು ಹಸ್ತಾಕ್ಷರ ಮಾಡಿದರು.

ಟಾಪ್ ನ್ಯೂಸ್

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.