ರಾಜ್ಯೋತ್ಸವ ಆಚರಣೆಯಲ್ಲಿ ನಿಯಮ ಪಾಲಿಸಿ
Team Udayavani, Oct 23, 2020, 8:11 PM IST
ಮೊಳಕಾಲ್ಮೂರು: ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ನಿಯಾಮಾನುಸಾರ ನಾಡಹಬ್ಬ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲು ಸಹಕಾರ ನೀಡಬೇಕು ಎಂದು ತಹಶೀಲ್ದಾರ್ ಮಲ್ಲಿಕಾರ್ಜುನ ಹೇಳಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊರೊನಾ ಹರಡದಂತೆ ಜಾಗ್ರತೆ ವಹಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್ ಬಳಸಬೇಕು.ಧ್ವಜಾರೋಹಣವನ್ನು ನೆರವೇರಿಸಿ ಸಾಂಕೇತಿಕವಾಗಿ ಮತ್ತು ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದರು.
ರಾಷ್ಟ್ರೀಯ ಹಬ್ಬಗಳು ಹಾಗೂ ಇನ್ನಿತರ ಸಭೆ, ಸಮಾರಂಭಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳು ಗೈರಾಗಿರುತ್ತಿರುವುದು ಗಮನಕ್ಕೆ ಬಂದಿದೆ. ಅಂಥವರಿಗೆ ನೋಟಿಸ್ ಜಾರಿ ಮಾಡಲಾಗುವುದು. ನಾಡು, ನುಡಿ, ಕಲೆ , ಸಾಹಿತ್ಯದಲ್ಲಿ ಸಾಧನೆ ಮಾಡಿದವರ ಸನ್ಮಾನವನ್ನು ಸಾಧಕರ ಸನ್ಮಾನ ಕಾರ್ಯಕ್ರಮವನ್ನು ಈ ಬಾರಿಯ ರಾಜ್ಯೋತ್ಸವದಲ್ಲಿ ಕೈಬಿಡಲಾಗಿದೆ ಎಂದು ತಿಳಿಸಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಡಿ.ಒ. ಮುರಾರ್ಜಿ ಮಾತನಾಡಿ, ಪ್ರತಿ ವರ್ಷ ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ನಾಡು, ನುಡಿ, ಕಲೆ, ಸಾಹಿತ್ಯ, ಸಂಗೀತ , ರಂಗಭೂಮಿ ಇನ್ನಿತರ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುತ್ತಿತ್ತು. ಈ ಸಲ ಬಹಿರಂಗ ಸಮಾರಂಭ ಮಾಡಿದೆ ಸನ್ಮಾನ ಕಾರ್ಯಕ್ರಮ ಮಾಡಬಹುದು. ಬಹುಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಗೀತೆಗಳನ್ನು ಹಾಡಿ ಅವರಿಗೆ ನುಡಿ-ನಮನ ಸಲ್ಲಿಸುವಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದರು.
ಕರವೇ ತಾಲೂಕು ಅಧ್ಯಕ್ಷ ಸೂರಮ್ಮನಹಳ್ಳಿ ನಾಗರಾಜ್ ಮಾತನಾಡಿ, ಕನ್ನಡ ರಾಜ್ಯೋತ್ಸವ ಸೇರಿದಂತೆ ಇನ್ನಿತರ ರಾಷ್ಟ್ರೀಯ ಹಬ್ಬಗಳು ಮತ್ತು ಇನ್ನಿತರ ಮಹಾನ್ ರಾಷ್ಟ್ರ ನಾಯಕರ ಜಯಂತಿಯ ಪೂರ್ವಭಾವಿ ಹಾಗೂ ಸಮಾರಂಭಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳು ಗೈರಾಗುತ್ತಿದ್ದಾರೆ. ಅಧೀನ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸುವ ಬದಲು ಕಡ್ಡಾಯವಾಗಿ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಾಗಲು ಕ್ರಮ ಕೈಗೊಳ್ಳಬೇಕೆಂದು ತಹಶೀಲ್ದಾರಲ್ಲಿ ಕೋರಿದರು.
ಬಿಜೆಪಿ ಜಿಲ್ಲಾ ಯುವ ಮೋರ್ಚಾದಬಿ. ವಿಜಯ್, ಭಾರತ ಕಮ್ಯೂನಿಸ್ಟ್ ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಜಾಫರ್‌ಷರೀಫ್ ಮಾತನಾಡಿದರು. ತಾಲೂಕುಕಸಾಪ ಪ್ರಧಾನ ಕಾರ್ಯದರ್ಶಿ ಕೆ.ಒ. ಶಿವಣ್ಣ, ವಾಲ್ಮೀಕಿ ನಾಯಕ ಸಮಿತಿಯ ಭೀಮಣ್ಣ, ಬೋರನಾಯಕ, ಟೈಲರ್ ತಿಪ್ಪೇಸ್ವಾಮಿ, ತಾಲೂಕು ಕಚೇರಿಯ ಶಿರಸ್ತೇದಾರ ಏಳುಕೋಟಿ, ಶಿಶು ಅಭಿವೃದ್ಧಿ ಯೋಜನಾಕಾರಿ ಎಸ್. ಸವಿತಾ, ತಾಲೂಕು ಆರೋಗ್ಯಾಧಿಕಾರಿ ಡಾ| ಸುಧಾ, ತೋಟಗಾರಿಕೆ ಇಲಾಖೆಯ ಲೋಕೇಶ್, ಶಿಕ್ಷಕ ಓಬಣ್ಣ, ತಾಲೂಕು ಸಮಾಜಕಲ್ಯಾಣ ಇಲಾಖೆಯ ಹಾಲೇಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.