ಹಬ್ಬದ ಸಂಭ್ರಮದ ನಡುವೆ…ಸುರಕ್ಷತೆಗೆ ಆದ್ಯತೆ ನೀಡಿ


Team Udayavani, Oct 24, 2020, 6:20 AM IST

ಹಬ್ಬದ ಸಂಭ್ರಮದ ನಡುವೆ…ಸುರಕ್ಷತೆಗೆ ಆದ್ಯತೆ ನೀಡಿ

ಸಾಂದರ್ಭಿ ಚಿತ್ರ

ಕೋವಿಡ್‌-19 ಜನರನ್ನು ದೈಹಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿಯೂ ಹೈರಾಣಾಗಿಸಿದೆ. ಈ ಸಂಕಷ್ಟದ ನಡುವೆಯೇ ಹಬ್ಬದ ಋತುವೂ ಎದುರಾಗಿದೆ. ಕಳೆದ ಎಂಟು ತಿಂಗಳಿಂದ ಕೋವಿಡ್‌ ಕಾರಣಕ್ಕಾಗಿ ಮಾನಸಿಕ ತುಮುಲಕ್ಕೆ ಒಳಗಾಗಿರುವ ಜನರಿಗೆ ಹಬ್ಬಗಳು ನೆಮ್ಮದಿ ತಂದುಕೊಡುತ್ತವೆ, ಅಲ್ಲದೇ ಆರ್ಥಿಕವಾಗಿಯೂ ಮಾರುಕಟ್ಟೆಗೆ ಚೇತರಿಕೆ ನೀಡುತ್ತವೆ ಎನ್ನುವುದರಲ್ಲಿ ಸಂಶಯವಿಲ್ಲ.

ಈ ಬಾರಿ ಜನರು ಹಿಂದೆಂದೂ ಕಾಣದಂಥ ಪಲ್ಲಟವನ್ನು ಎದುರಿಸಿದ್ದಾರೆ. ಹಿಂದೆಲ್ಲ ಆಯುಧ ಪೂಜೆ ಹಾಗೂ ವಿಜಯ ದಶಮಿ ಸಮಯದಲ್ಲಿ ಇಡೀ ರಾಜ್ಯವೇ ಕಳೆಗಟ್ಟುತ್ತಿತ್ತು, ಮಾರುಕಟ್ಟೆಗಳು ನಳನಳಿಸುತ್ತಿದ್ದವು. ಆದರೆ ಈ ಬಾರಿ ಹೂ-ಹಣ್ಣು, ಪೂಜಾ ಸಾಮಗ್ರಿಗಳನ್ನು ಕೊಳ್ಳಲು ಜನ ಸಾಮಾಜಿಕ ಅಂತರ ಮರೆತು ಮುಗಿಬೀಳುತ್ತಾರೆ ಎನ್ನುವ ಕಾರಣಕ್ಕಾಗಿ ಮೈಸೂರು ಸೇರಿದಂತೆ ವಿವಿಧ ಭಾಗಗಳಲ್ಲಿನ ಸ್ಥಳೀಯಾಡಳಿತಗಳು ಮುಂಜಾಗ್ರತಾ ಕ್ರಮ ಕೈಗೊಂಡಿವೆ. ಕೆಲವೆಡೆ ಕಿಕ್ಕಿರಿಯುತ್ತಿದ್ದ ಮಾರುಕಟ್ಟೆಗಳನ್ನು ತಾತ್ಕಾಲಿಕ ಸ್ಥಳಾಂತರಿಸಲಾಗಿದೆ. ಆದರೂ, ಕೋವಿಡ್‌ ಅಪಾಯವನ್ನೂ ಲೆಕ್ಕಿಸದೆ ಜನ ಖರೀದಿಗಾಗಿ ಮುಗಿಬೀಳುತ್ತಿದ್ದಾರೆಂಬ ವರದಿಗಳೂ ಬರುತ್ತಿವೆ.

ಇದು ಅತ್ಯಂತ ನಿರ್ಣಾಯಕ ಸಮಯ. ಏಕೆಂದರೆ ಇತ್ತೀಚೆಗಷ್ಟೇ ಕೇಂದ್ರ ಸರಕಾರವು ಕೋವಿಡ್‌ನ‌ ಮೊದಲ ಅಲೆಯ ಉತ್ತುಂಗ ಮುಗಿದಿದೆ ಎಂದು ಹೇಳಿದೆ. ಅಂದರೆ ಸೆಪ್ಟಂಬರ್‌ ತಿಂಗಳಲ್ಲಿ 97 ಸಾವಿರದ ಗಡಿ ದಾಟಿದ್ದ ನಿತ್ಯ ಪ್ರಕರಣಗಳ ಸಂಖ್ಯೆ ಕಳೆದ ಕೆಲವು ದಿನಗಳಿಂದ ಗಣನೀಯವಾಗಿ ತಗ್ಗಿದೆ. ಅಕ್ಟೋಬರ್‌ 22ರಂದು 55 ಸಾವಿರ ನಿತ್ಯ ಪ್ರಕರಣಗಳು ಪತ್ತೆಯಾಗಿವೆ. ಇದು ಸಮಾಧಾನದ ವಿಷಯವೇ ಆದರೂ ಎಲ್ಲಿ ಅಜಾಗರೂಕತೆಯಿಂದಾಗಿ ನಿತ್ಯ ಪ್ರಕರಣಗಳು ಮತ್ತೆ ಅಧಿಕವಾಗಿಬಿಡುತ್ತವೋ ಎನ್ನುವ ಆತಂಕವೂ ಎದುರಾಗುತ್ತಿದೆ.

ಇತ್ತೀಚೆಗಷ್ಟೇ ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್‌ ಅವರು ಓಣಂ ಸಂದರ್ಭದಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕೆ ಕೇರಳ ಈಗ ಬೆಲೆ ತೆರುತ್ತಿದೆ ಎಂದು ಹೇಳಿರುವುದನ್ನು ಎಲ್ಲ ರಾಜ್ಯಗಳೂ ಗಂಭೀರವಾಗಿ ಪರಿಗಣಿಸಬೇಕಿದೆ. ಇನ್ನು ಹಬ್ಬದ ಸಮಯದಲ್ಲಿ ನಾಗರಿಕರು ಎಚ್ಚರಿಕೆ ಕ್ರಮಗಳನ್ನು ಪಾಲಿಸದೇ ಇದ್ದರೆ ದೇಶದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕೊರೊನಾ ನಿಯಂತ್ರಣಕ್ಕಾಗಿ ಸರಕಾರ ರಚಿಸಿದ್ದ ತಜ್ಞರ ಸಮಿತಿಯೂ ಎಚ್ಚರಿಸಿದೆ.

ಐಐಟಿ ಹೈದ್ರಾಬಾದ್‌ನ ಪ್ರಾಧ್ಯಾಪಕ ಎಂ. ವಿದ್ಯಾಸಾಗರ್‌ ನೇತೃತ್ವದ ಈ ಸಮಿತಿ ಈ ಹಬ್ಬದ ಋತುವಿನಲ್ಲಿ ಜನ ಸಾಮಾಜಿಕ ಅಂತರ ಪಾಲನೆ ಮಾಡದಿದ್ದರೆ ಒಂದೇ ತಿಂಗಳಲ್ಲೇ ದೇಶದಲ್ಲಿ 26 ಲಕ್ಷಕ್ಕೂ ಹೆಚ್ಚು ಸಕ್ರಿಯ ಸೋಂಕು ಪ್ರಕರಣಗಳು ದಾಖಲಾಗಬಹುದು ಎಂದು ಎಚ್ಚರಿಸಿದೆ. ನೆನಪಿಡಬೇಕಾದ ಅಂಶವೆಂದರೆ, ಕೋವಿಡ್‌ ಈಗ ನಗರ ಪ್ರದೇಶಗಳಿಗಷ್ಟೇ ಸೀಮಿತವಾಗಿಲ್ಲ. ಅದು ಗ್ರಾಮೀಣ ಪ್ರದೇಶಗಳಲ್ಲೂ ವೇಗವಾಗಿ ಪ್ರಸರಣಗೊಳ್ಳುತ್ತಿದೆ. ಈಗಾಗಲೇ ದೇಶದ ಕೆಲವು ಜಿಲ್ಲೆಗಳಲ್ಲಿ ಕೋವಿಡ್‌ನ‌ ಸಾಮುದಾಯಿಕ ಪ್ರಸರಣ ಆರಂಭವಾಗಿದೆ ಎಂದು ಇತ್ತೀಚೆಗಷ್ಟೇ ಕೇಂದ್ರ ಸರಕಾರ ಹೇಳಿದೆ. ಒಂದು ಪ್ರದೇಶದಲ್ಲಿ ರೋಗ ಸಾಮುದಾಯಿಕ ಪ್ರಸರಣ ಹಂತ ತಲುಪಿತೆಂದರೆ, ತಡೆಯುವುದು ಬಹುದೊಡ್ಡ ಸವಾಲಾಗಿ ಬಿಡುತ್ತದೆ. ಈ ಕಾರಣಕ್ಕಾಗಿಯೇ, ಪ್ರತಿಯೊಬ್ಬರೂ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವಿಕೆ, ಜನಜಂಗುಳಿ ಸೃಷ್ಟಿಯಾಗುವುದನ್ನು ತಪ್ಪಿಸುವುದು ಹಾಗೂ ಕೈಗಳನ್ನು ನಿಯಮಿತವಾಗಿ ಸ್ವತ್ಛಗೊಳಿಸುವಂಥ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸೋಣ. ಸುರಕ್ಷತೆಯಿಂದ ಹಬ್ಬವನ್ನು ಆಚರಿಸೋಣ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.