ಕೆಜಿಎಫ್-2 ಟ್ರೇಲರ್ ಬಿಡಿ..: ಫ್ಯಾನ್ಸ್ ಒತ್ತಾಯ
Team Udayavani, Oct 25, 2020, 9:30 AM IST
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ನಿನ್ನೆ ಅಂದರೆ ಅಕ್ಟೋಬರ್ 23ಕ್ಕೆ “ಕೆಜಿಎಫ್-2′ ಚಿತ್ರವನ್ನು ಪ್ರೇಕ್ಷಕರು ಕಣ್ತುಂಬಿಕೊಳ್ಳಬೇಕಿತ್ತು. ಆದರೆ, ಕೋವಿಡ್ ಹೊಡೆತದಿಂದ ಎಲ್ಲಾ ಲೆಕ್ಕಾಚಾರಗಳು ಬುಡಮೇಲಾಗಿವೆ. ಆದರೆ, ಅಭಿಮಾನಿಗಳು ಮಾತ್ರ ಅಕ್ಟೋಬರ್ 23ರಂದು “ಕೆಜಿಎಫ್-2′ ಸಿನಿಮಾವನ್ನು ಸಿಕ್ಕಾಪಟ್ಟೆ ಮಿಸ್ ಮಾಡಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಸಾಕಷ್ಟು ಟ್ರೋಲ್‌ಗಳಾಗುತ್ತಿವೆ. ಇದರ ಜೊತೆಗೆ ಅಭಿಮಾನಿಗಳು ಚಿತ್ರತಂಡಕ್ಕೆ ಒಂದು ಬೇಡಿಕೆಯನ್ನೂ ಇಟ್ಟಿದ್ದಾರೆ. ಅದು ಟ್ರೇಲರ್ ರಿಲೀಸ್ ಬಿಡುಗಡೆ ಕುರಿತು.
ಹೌದು, ಸಿನಿಮಾ ತಡವಾಗುತ್ತಿರುವುದರಿಂದ “ಕೆಜಿಎಫ್-2′ ಚಿತ್ರದ ಟ್ರೇಲರ್ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಸಿನಿಮಾ ಬಿಡುಗಡೆಯಾಗಲಿಲ್ಲ, ಕೊನೇ ಪಕ್ಷ ಟ್ರೇಲರ್ ನೋಡಿಯಾದರೂ ಸಮಾಧಾನ ಮಾಡಿಕೊಳ್ಳುತ್ತೇವೆ ಎಂಬರ್ಥದಲ್ಲಿ ಬೇಡಿಕೆ ಇಟ್ಟಿದ್ದಾರೆ. ಆದರೆ, ಚಿತ್ರತಂಡದಿಂದ ಇದಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಸದ್ಯ ಚಿತ್ರತಂಡ ಚಿತ್ರೀಕರಣದಲ್ಲಿ ಬಿಝಿಯಾಗಿದ್ದು, ನವೆಂಬರ್‌ನಲ್ಲಿ ಸಂಜಯ್ ದತ್ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಈ ನಡುವೆಯೇ ನಾಯಕಿ ನಟಿ ಶ್ರೀನಿಧಿ ಬರ್ತ್‌ಡೇ ಪ್ರಯುಕ್ತ ಇತ್ತೀಚೆಗೆ ಚಿತ್ರತಂಡಹೊಸ ಪೋಸ್ಟರ್‌ವೊಂದನ್ನು ಬಿಡುಗಡೆಗೊಳಿಸಿದೆ. “ಕೆಜಿಎಫ್’ ಮೊದಲ ಭಾಗದಲ್ಲಿ ಯಶ್‌ಗೆ ಜೋಡಿಯಾಗಿ ರೀನಾ ದೇಸಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಶ್ರೀನಿಧಿ ಶೆಟ್ಟಿ, ಸಿಡುಕಿನ ಮತ್ತು ಅಹಂಕಾರಿ ಹುಡುಗಿಯಾಗಿ ನೋಡುಗರ ಗಮನ ಸೆಳೆದಿದ್ದರು.
ಟಗರುಗೆ ಸಲಗ ಸಾಥ್ : ಶಿವರಾಜ್ ಕುಮಾರ್ “ಟಗರು’ ಚಿತ್ರ ಶುಕ್ರವಾರ ರೀ ರಿಲೀಸ್ ಆಗಿರೋದು ಗೊತ್ತೇ ಇದೆ. ಮೊದಲ ಬಿಡುಗಡೆಯಲ್ಲಿ ಸೂಪರ್ ಹಿಟ್ ಆಗಿದ್ದ ಈ ಚಿತ್ರವನ್ನು ಮತ್ತೂಮ್ಮೆ ಕಣ್ತುಂಬಿಕೊಳ್ಳಲು ಈಗ ಮತ್ತೆ ಪ್ರೇಕ್ಷಕರು ಚಿತ್ರಮಂದಿರಕ್ಕೆ ಆಗಮಿಸುತ್ತಿದ್ದಾರೆ. ಈಗ ಈ ಚಿತ್ರಕ್ಕೆ “ಸಲಗ’ ಸಾಥ್ ನೀಡುತ್ತಿದೆ. ಹೀಗೆಂದರೆ ನಿಮಗೆ ಆಶ್ಚರ್ಯವಾಗಬಹುದು. ನಾವುಹೇಳುತ್ತಿರೋದು “ದುನಿಯಾ’ ವಿಜಯ್ ಬಗ್ಗೆ. ಸದ್ಯ “ಸಲಗ’ ಚಿತ್ರದ ನಿರೀಕ್ಷೆಯಲ್ಲಿ ರುವ ವಿಜಯ್, “ಟಗರು’ ಚಿತ್ರವನ್ನು ವೀಕ್ಷಿಸಲು ತಮ್ಮತಂಡದೊಂದಿಗೆ ಚಿತ್ರಮಂದಿರಕ್ಕೆ ಬರುತ್ತಿದ್ದಾರೆ.
ಮೈಸೂರು ರಸ್ತೆಯ ಗೋಪಾಲ್ ಸಿನಿಮಾಸ್‌ನಲ್ಲಿ ಭಾನುವಾರ ಮಧ್ಯಾಹ್ನ 1.15ರ ಪ್ರದರ್ಶನವನ್ನ ಪ್ರೇಕ್ಷಕರೊಂದಿಗೆ ವೀಕ್ಷಿಸಲು ದುನಿಯಾ ವಿಜಯ್, ಟಗರು ನಿರ್ದೇಶಕರಾದ ಸೂರಿ, ಡಾಲಿಧನಂಜಯ, ವಸಿಷ್ಠ ಸಿಂಹ, ಮಾನ್ವಿತಾ ಕಾಮತ್ ಸೇರಿದಂತೆ ಇಡೀ ತಂಡ ಭಾಗಿಯಾಗುತ್ತಿದೆ. ಜೊತೆಗೆ ಗೋಪಾಲನ್ ಸಿನಿಮಾಸ್‌ನಲ್ಲಿ ಮಧ್ಯಾಹ್ನ 3ಗಂಟೆಗೆ ಟಗರು ರೀ ರಿಲೀಸ್ ಸಂಭ್ರಮ ವನ್ನು ಆಯೋಜಿಸಲಾಗಿದೆ. ಕೊರೊನಾ ಲಾಕ್ ಡೌನ್ ಬಳಿಕ ಚಿತ್ರಮಂದಿರಕ್ಕೆ ಬರುತ್ತಿರುವ ಪ್ರೇಕ್ಷಕರನ್ನು ಪ್ರೋತ್ಸಾಹಿಸುವ ಸಲುವಾಗಿ ಚಿತ್ರತಂಡ ಕೂಡಾ ಚಿತ್ರ ಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.