ಐಟಿ ರಿಟರ್ನ್ಸ್ ಸಲ್ಲಿಕೆ ಗಡುವು ಡಿ.31ರ ವರೆಗೆ ವಿಸ್ತರಣೆ
Team Udayavani, Oct 25, 2020, 6:30 AM IST
ಹೊಸದಿಲ್ಲಿ: ಆದಾಯ ತೆರಿಗೆ (ಐಟಿ) ರಿಟರ್ನ್ಸ್ ಸಲ್ಲಿಕೆ ಅವಧಿಯನ್ನು ಮತ್ತೆ ವಿಸ್ತರಿಸಲಾಗಿದೆ. ನ. 30ಕ್ಕೆ ಮುಗಿಯಬೇಕಿದ್ದ 2019-20 ಆರ್ಥಿಕ ವರ್ಷದ ರಿಟರ್ನ್ಸ್ ಸಲ್ಲಿಕೆ ಅವಧಿಯನ್ನು ಈಗ ಡಿ.31ರ ವರೆಗೆ ಮುಂದೂಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಮೊದಲಿಗೆ ಮೇಯಲ್ಲಿ ಅವಧಿ ವಿಸ್ತರಣೆ ಮಾಡಿದ್ದ ಸರಕಾರವು ಜು. 31ರ ಗಡುವು ನೀಡಿತ್ತು. ಇದಾದ ಬಳಿಕ ನ. 30ರ ವರೆಗೆ ವಿಸ್ತರಿಸಲಾಗಿತ್ತು. ಈಗ ಡಿ. 31ರ ವರೆಗೆ ವಿಸ್ತರಣೆ ಮಾಡಿರುವುದರಿಂದ ಇನ್ನೂ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡದೇ ಇರುವ ತೆರಿಗೆದಾರರಿಗೆ ನೆಮ್ಮದಿ ಲಭಿಸಿದೆ.
ಇದರ ಜತೆಗೆ ಕೇಂದ್ರ ಸರಕಾರವು 2018-19ನೇ ಆರ್ಥಿಕ ವರ್ಷದ ಜಿಎಸ್‌ಟಿ ವಾರ್ಷಿಕ ರಿಟರ್ನ್ಸ್ ಸಲ್ಲಿಕೆ ಅವಧಿಯನ್ನು ಡಿ. 31ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ವಾರ್ಷಿಕವಾಗಿ 2 ಕೋಟಿ ರೂ.ಗಳಿಗಿಂತ ಅಧಿಕ ಗಳಿಸುತ್ತಿರುವವರು ಮಾತ್ರ ವಾರ್ಷಿಕವಾಗಿ ರಿಟರ್ನ್ಸ್ ಸಲ್ಲಿಕೆ ಮಾಡಬೇಕು. ಈಗ ಇವರಿಗೂ 2 ತಿಂಗಳ ಕಾಲಾವಕಾಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.