ಆಯುಧಪೂಜೆ,ವಾಹನ ಪೂಜೆಯ ಸಂಭ್ರಮ
Team Udayavani, Oct 25, 2020, 1:18 PM IST
ಉರ್ವಸ್ಟೋರ್ ಮಹಾಗಣಪತಿ ದೇವಸ್ಥಾನದ ಮುಂಭಾಗ ವಾಹನ ಪೂಜೆ ನೆರವೇರಿತು.
ಮಹಾನಗರ, ಅ. 24: ಮಂಗಳೂರಿನ ವಿವಿಧ ದೇಗುಲಗಳಲ್ಲಿ ಶನಿವಾರ ಆಯುಧ ಪೂಜೆಯ ಸಂಭ್ರಮ. ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಿತು. ಭಕ್ತರು ತಮ್ಮ ವಾಹನಗಳನ್ನು ದೇಗುಲಕ್ಕೆ ಕೊಂಡೊಯ್ದು ಪೂಜೆ ಸಲ್ಲಿಸಿದರು.
ಆಯುಧ ಪೂಜೆಯಂದು ವಾಹನ ಸಹಿತ ಮನೆ, ಇನ್ನಿತರ ಸಂಸ್ಥೆಗಳಲ್ಲಿರುವ ಆಯುಧಗಳಿಗೆ ಪೂಜೆ ಸಲ್ಲಿಸುವುದು ವಾಡಿಕೆ. ದೇಗುಲಗಳ ಮುಂಭಾಗದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಎಲ್ಲೆಡೆ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ಕೊಂಡೇ ಪೂಜೆ ಸಲ್ಲಿಸಲಾಯಿತು. ಈ ಬಾರಿ ರವಿವಾರವೂ ಆಯುಧ ಪೂಜೆ ಸಲ್ಲಿಸಲು ಭಕ್ತರಿಗೆ ಅವಕಾಶವಿದೆ. ಶನಿವಾರ ದುರ್ಗಾಷ್ಟಮಿಯ ಅಂಗವಾಗಿ ವಿವಿಧ ದೇಗುಲಗಳಲ್ಲಿ ವಿಶೇಷ ಅಲಂಕಾರ, ಮಹಾಪೂಜೆ, ವಿವಿಧ ಧಾರ್ಮಿಕ ಸೇವೆಗಳು ಜರಗಿದವು.
ದೇಗುಲಗಳಲ್ಲಿ ಪೂಜೆ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶನಿವಾರ ಚಂಡಿಕಾ ಹೋಮ, ಹಗಲೋತ್ಸವ, ಶ್ರೀ ದೇವಿ ಪುಷ್ಪಾಲಂಕಾರ ಮಹಾಪೂಜೆ (ದುರ್ಗಾ ಷ್ಟಮಿ), ಭಜನೆ ಜರಗಿತು.
ಕುದುರಿದ ಬೇಡಿಕೆ : ಆಯುಧ ಪೂಜೆ ಹಿನ್ನೆಲೆಯಲ್ಲಿ ಸೇವಂತಿಗೆ, ಹಸಿಮೆಣಸು, ಲಿಂಬೆಹಣ್ಣಿನ ಮಾಲೆಗಳಿಗೆ ವಿಶೇಷ ಬೇಡಿಕೆ ಕುದುರಿತು. ತೆಂಗಿನಕಾಯಿ ಕೂಡ ಸಾಕಷ್ಟು ಪ್ರಮಾಣದಲ್ಲಿ ಮಾರಾಟವಾಗಿತ್ತು. ದೇಗುಲಗಳ ಮುಂಭಾಗದಲ್ಲಿಯೇ ಹೆಚ್ಚಿನ ವ್ಯಾಪಾರಿಗಳು ತಾತ್ಕಾಲಿಕ ಮಾರಾಟದಲ್ಲಿ ತೊಡಗಿದ್ದರು.
ಇಂದಿನ ಕಾರ್ಯಕ್ರಮ :
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ರವಿವಾರ ಬೆಳಗ್ಗೆ 10ಕ್ಕೆ ಸರಸ್ವತಿ ದುರ್ಗಾಹೋಮ, 11.30ಕ್ಕೆ ಶತ ಸೀಯಾಳ ಅಭಿಷೇಕ, ಮಧ್ಯಾಹ್ನ 12.30ಕ್ಕೆ ಶಿವಪೂಜೆ (ಮಹಾನವಮಿ), 1.30ಕ್ಕೆ ಅನ್ನಸಂತರ್ಪಣೆ, ಸಂಜೆ 7ಕ್ಕೆ ಭಜನೆ, 9ರಿಂದ ಶ್ರೀ ದೇವಿ ಪುಷ್ಪಾಲಂಕಾರ ಮಹಾಪೂಜೆ, ಉತ್ಸವ ನಡೆಯಲಿದೆ. ಮಹತೋಭಾರ ಶ್ರೀ ಮಂಗಳಾ ದೇವಿ ದೇಗುಲದಲ್ಲಿ ಮಹಾನವಮಿ, ಚಂಡಿಕಾ ಹೋಮ, ರಾತ್ರಿ ದೊಡ್ಡ ರಂಗಪೂಜೆ, ಸಣ್ಣ ರಥೋತ್ಸವ ನಡೆಯಲಿದೆ.
ಉರ್ವ ಶ್ರೀ ಮಾರಿಯಮ್ಮ ದೇಗುಲದಲ್ಲಿ ಬೆಳಗ್ಗೆ 7ಕ್ಕೆ ಪೂಜೆ, ಮಧ್ಯಾಹ್ನ 12.30ಕ್ಕೆ ಸರ್ವಾಲಂಕಾರ ಪೂಜೆ, ಮಹಾಪೂಜೆ, ಸಂಜೆ 7.30ಕ್ಕೆ ಸರ್ವಾಲಂಕಾರ ಪೂಜೆ, ಮಹಾಪೂಜೆ, ರಾತ್ರಿ 8ಕ್ಕೆ ಶ್ರೀ ದೇವಿ ಮಹಾ ರಂಗಪೂಜೆ, 8.30ಕ್ಕೆ ರಥೋತ್ಸವ ನಡೆಯಲಿದೆ.
ಪಡುಪಣಂಬೂರು ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದಲ್ಲಿ ಅ. 25ರಂದು ಬೆಳಗ್ಗೆ 8.30ಕ್ಕೆ ಮಹಾನವಮಿಯ ಪ್ರಯುಕ್ತ ಚಂಡಿಕಾಯಾಗ ಜರಗಲಿದೆ ಎಂದು ಆಡಳಿತ ಮಂಡಳಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.