ಲೋಕಸಭೆಗೆ ಬಿಜೆಪಿಯಿಂದ ಟಿಕೆಟ್ ಕೊಟ್ಟರೆ ಸ್ಪರ್ಧಿಸಲು ಸಿದ್ಧ: ‘ಕೈ’ ನಾಯಕ ಪ್ರಕಾಶ ಹುಕ್ಕೇರಿ
ದಿ.ಅಂಗಡಿ ಕುಟುಂಬ ಹೊರತುಪಡಿಸಿ ಕಾಂಗ್ರೆಸ್- ಬಿಜೆಪಿ ಯಾರೇ ಟಿಕೆಟ್ ಕೊಟ್ಟರೂ ಸ್ಪರ್ಧಿಸಲು ಸಿದ್ದ: ಪ್ರಕಾಶ ಹುಕ್ಕೇರಿ
Team Udayavani, Oct 25, 2020, 1:40 PM IST
ಚಿಕ್ಕೋಡಿ: ಕೇಂದ್ರ ಸಚಿವ ದಿ. ಸುರೇಶ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸುರೇಶ ಅಂಗಡಿ ಕುಟುಂಬ ಹೊರತು ಪಡಿಸಿ ಟಿಕೆಟ್ ನೀಡಿದರೆ ಕಾಂಗ್ರೆಸ್ ಅಥವಾ ಬಿಜೆಪಿಯಿಂದ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹೊಸ ಬಾಂಬ್ ಸಿಡಿಸಿದರು.
ಚಿಕ್ಕೋಡಿ ತಾಲೂಕಿನ ಪ್ಯಾಕ್ಟರಿ ಕ್ರಾಸ್ ಬಳಿ ರವಿವಾರ ಪೆಟ್ರೋಲ್ ಬಂಕ್ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರೇಶ ಅಂಗಡಿ ಬಿಜೆಪಿಯಲ್ಲಿ ಇದ್ದಾಗ ನಾನು ಕಾಂಗ್ರೆಸ್ ನಲ್ಲಿ ಇದ್ದೇನೆ. ಆದರೆ ಇಬ್ಬರೂ ನಾವು ಗಳಸ್ಯ ಕಂಟಸ್ಯ ಸ್ನೇಹಿತರು. ಇಂದು ಸ್ನೇಹಿತ ನಮ್ಮ ಜೊತೆ ಇಲ್ಲದೇ ಇರುವುದು ದುಃಖದ ಸಂಗತಿ ಎಂದರು.
ದಿ. ಸುರೇಶ ಅಂಗಡಿ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಿದರೆ ನಾನು ಯಾವ ಪಕ್ಷದಿಂದಲೂ ಟಿಕೆಟ್ ಕೇಳುದಿಲ್ಲ. ಅಂಗಡಿ ಕುಟುಂಬ ಹೊರತು ಪಡಿಸಿ ಟಿಕೆಟ್ ನೀಡಿದರೆ ನಾನು ಸ್ಪರ್ಧಿಸಲು ಸಿದ್ದನಿದ್ದೇನೆ. ಕಾಂಗ್ರೆಸ್ ಅಥವಾ ಬಿಜೆಪಿ ಯಾರೇ ಟಿಕೆಟ್ ಕೊಟ್ಟರೂ ಸ್ಪರ್ಧಿಸಲು ಸೈ ಎಂದರು.
ನಾನು ರಾಜಕೀಯದಿಂದ ನಿವೃತ್ತಿಯಾಗಿಲ್ಲ. ಜನಸೇವೆ ಮಾಡುವ ಶಕ್ತಿಯನ್ನು ಭಗವಂತ ನೀಡಿದ್ದಾನೆ. ಬೆಳಗಾವಿ ಲೋಕಸಭೆ ಕ್ಷೇತ್ರ ನನಗೇನೂ ಹೊಸದೇನಲ್ಲ. ಜಿಲ್ಲಾ ಉಸ್ತುವಾರಿ ಸಚಿವನಾಗಿ, ವಿಧಾನ ಪರಿಷತ್ ಸದಸ್ಯನಾಗಿ ಸಾಕಷ್ಟು ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ ಎಂದರು.
ಬಿಜೆಪಿ ಪಕ್ಷದಿಂದ ದಿ.ಸುರೇಶ ಅಂಗಡಿ ಕುಟುಂಬಕ್ಕೆ ಟಿಕೆಟ್ ನೀಡಿದರೆ ನಾನೇ ಜವಾಬ್ದಾರಿ ಹೊತ್ತುಕೊಂಡು ಗೆಲುವಿಗೆ ಶ್ರಮೀಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.