ಚಿತ್ರದುರ್ಗ ಜಿಲ್ಲೆಯಲ್ಲಿ 84 ಜನರಿಗೆ ಕೋವಿಡ್ ಸೋಂಕು ದೃಢ! 111 ಸೋಂಕಿತರು ಗುಣಮುಖ
Team Udayavani, Oct 25, 2020, 7:15 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 84 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,892ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 111 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಭಾನುವಾರ ಒಟ್ಟು 1700 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 84 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 11,892ಕ್ಕೆ ಏರಿಕೆಯಾಗಿದ್ದು, ಇದುವರೆಗೆ 56 ಜನ ಕೋವಿಡ್ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 11,120 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 715 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 90,810 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 1,00,363 ಜನರ ಮಾದರಿ ಸಂಗ್ರಹಿಸಲಾಗಿದ್ದು, 87,179 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 812 ಜನರ ವರದಿ ಬರುವುದು ಬಾಕಿ ಇದೆ. 489 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Renukaswamy case: ದರ್ಶನ್ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.