ಮಸಣ ಕಾರ್ಮಿಕರನ್ನು ನೌಕರರೆಂದು ಪರಿಗಣಿಸಿ


Team Udayavani, Oct 25, 2020, 7:04 PM IST

Ballary-tdy-1

ಬಳ್ಳಾರಿ: ಮಸಣ ಕಾರ್ಮಿಕರನ್ನು ಸ್ಥಳೀಯ ಸಂಸ್ಥೆಗಳಿಂದ ಮಸಣ ನಿರ್ವಾಹಕ ನೌಕರರನ್ನಾಗಿನೇಮಿಸಿಕೊಳ್ಳಬೇಕು. ಪಾರಂಪರಿಕವಾಗಿ  ಕಾರ್ಯನಿರ್ವಹಿಸುವ ಮಸಣ ಕಾರ್ಮಿಕರನ್ನು ಗಣತಿ ಮಾಡಬೇಕು ಎಂದು ಆಗ್ರಹಿಸಿ ನಗರದ ತಾಲೂಕು ಪಂಚಾಯಿತಿ ಕಚೇರಿ ಎದುರು ರಾಜ್ಯ ಮಸಣ ಕಾರ್ಮಿಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.

ಸ್ಮಶಾನದಲ್ಲಿ ಪ್ರತಿ ಮಸಣಕ್ಕೆ ಒಬ್ಬರಂತೆ ಮಸಣ ಕಾರ್ಮಿಕರನ್ನು ನೇಮಿಸಬೇಕು ಪ್ರತಿ ಕುಣಿ ಅಗೆಯುವ ಮತ್ತು ಮುಚ್ಚುವ  ಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳ ಮೂಲಕ ಕನಿಷ್ಟ 2500 ರೂಗಳನ್ನು ಪಾವತಿಸಬೇಕು. ಮಸಣ ಕಾರ್ಮಿಕರಿಗೆ ಮಸಣದಲ್ಲಿ ಕಾರ್ಯನಿರ್ವಹಿಸಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಮತ್ತು ಕುಣಿ ಅಗೆಯುವ ಮತ್ತು ಮುಚ್ಚುವ ಅಗತ್ಯ ಪರಿಕರಗಳನ್ನು ಸ್ಥಳೀಯ ಸಂಸ್ಥೆಗಳ ಮೂಲಕವೇ ಒದಗಿಸಬೇಕು. ನಮ್ಮನ್ನು ಕಟ್ಟಡ ಕಾರ್ಮಿಕರ ಪಟ್ಟಿಗೆ ಸೇರಿಸಿ. ಕಟ್ಟಡ ಕಾರ್ಮಿಕರಿಗಿರುವ ಎಲ್ಲ ಕಲ್ಯಾಣ ಸೌಲಭ್ಯಗಳನ್ನು ದೊರೆಯುವಂತೆ ಕ್ರಮಕೈಗೊಳ್ಳಬೇಕು.  ಇದಕ್ಕಾಗಿ ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರವೇ ಭರಿಸಬೇಕು. ತಕ್ಷಣವೇ ಸ್ಮಾರ್ಟ್‌ ಕಾರ್ಡ್‌ಗಳ ವಿತರಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರಾಜ್ಯದ ಎಲ್ಲ ಸಾರ್ವಜನಿಕ ಮಸಣಗಳ ಪ್ರವೇಶವನ್ನು ಗಣತಿ ಮಾಡಿ ಅವುಗಳ ಸುತ್ತ ತಂತಿ ಬೇಲಿ ಅಳವಡಿಸಬೇಕು ಮತ್ತು ಮಸಣಭೂಮಿ ಒತ್ತುವರಿಯನ್ನು ತೆರವುಗೊಳಿಸಬೇಕು.ರಾಜ್ಯದ ಎಲ್ಲ ಮಸಣಗಳನ್ನು ಜನಸ್ನೇಹಿ  ನಂದನವನಗನ್ನಾಗಿಸಲು ಸೂಕ್ತ ಯೋಜನೆಯನ್ನು ವಿವಿಧ ಇಲಾಖೆಗಳ ನೆರವಿನೊಂದಿಗೆಉದ್ಯೋಗ ಖಾತ್ರಿ ಯೋಜನೆಯನ್ನು ಬಳಸಿಕೊಂಡು ರೂಪಿಸಿ ಜಾರಿಗೊಳಿಸಬೇಕು. ಅದರಲ್ಲಿ ಶವ ಹೂಳಲು ಆಗತ್ಯವಾದ ಕುಣಿಗಳನ್ನು ಅಗೆದು ಮುಚ್ಚಲು ಹಲವಾರು ಕುಣಿಗಳನ್ನು ನಿಗದಿಪಡಿಸಬೇಕು.

ಮಸಣವನ್ನು ಪಾರ್ಕ್‌ಗಳಂತೆ ಅಭಿವೃದ್ಧಿ ಪಡಿಸಬೇಕು. ಸ್ಥಳಿಯ ಸಂಸ್ಥೆಗಳ ಮೂಲಕ ಮಸಣ ಕಾರ್ಮಿಕರಿಗೆ ಭವಿಷ್ಯನಿಧಿ ಜಾರಿಗೊಳಿಸಬೇಕು. ಈಗಾಗಲೇ ಮಸಣದಲ್ಲಿ ಕಾರ್ಯನಿರ್ವಹಿಸಿದವರಿಗೆ 3 ಸಾವಿರ ರೂ. ಪಿಂಚಣಿ ನೀಡಬೇಕು. ಅಂತ್ಯೋದಯ ರೇಷನ್‌ ಕಾರ್ಡ್‌ ನೀಡಬೇಕು. ಮನೆ ನಿರ್ಮಾಣಕ್ಕೆ 45 ಲಕ್ಷ ರೂ. ನೆರವು, 5 ಎಕರೆ ಭೂಮಿ, ಸಾಲಸೌಲಭ್ಯ ಹಾಗೂ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬಳಿಕ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ. ಬಸಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಎಚ್‌.ನೇಮಕಲ್ಲಪ್ಪ,ಹುಲುಗಣ್ಣ, ಹರಿಜನ ಬಸವರಾಜ್‌, ಬಸಪ್ಪ, ಆಂಜನೇಯ, ದೇವೇಂದ್ರಪ್ಪ, ನಿಂಗಪ್ಪ, ರುದ್ರಪ್ಪ ಹಲವರು ಇದ್ದರು.

ಹಗರಿಬೊಮ್ಮನಹಳ್ಳಿಯಲ್ಲೂ ಪ್ರತಿಭಟನೆ :

ಹಗರಿಬೊಮ್ಮನಹಳ್ಳಿ: ಸಾರ್ವಜನಿಕ ಮಸಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಸಣ ಕಾರ್ಮಿಕರನ್ನು ಗ್ರಾಪಂ ನೌಕರರು ಎಂದು ನೇಮಕ ಮಾಡಬೇಕು ಎಂದು ಆಗ್ರಹಿಸಿ ತಾಲೂಕು ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘದವರು ಒತ್ತಾಯಿಸಿದರು.

ಜಿಲ್ಲಾ ಸಂಚಾಲಕಿ ಬಿ.ಮಾಳಮ್ಮ ಮಾತನಾಡಿ, ಮಸಣದಲ್ಲಿ ಪಾರಂಪರಿಕವಾಗಿ ಕಾರ್ಯನಿರ್ವಹಿಸುತ್ತಿರುವ ಕಾಮಿಕರನ್ನು ಪಂಚಾಯ್ತಿ ನೌಕರರೆಂದು ನೇಮಕ ಮಾಡಿಕೊಳ್ಳಬೇಕು. ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಇಬ್ಬರು ಮಸಣ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಬೇಕು. ಮಸಣದಲ್ಲಿ ಕೆಲಸ ಮಾಡಲುಸುರಕ್ಷಿತ ಕ್ರಮ ಜರುಗಿಸಬೇಕು. ಕುಣಿ ತೆಗೆಯುವ ಮುಚ್ಚುವ ಸಲಕರಣೆಗಳನ್ನು ಸ್ಥಳೀಯ ಸಂಸ್ಥೆಗಳಿಂದ ಕೊಡಬೇಕು. ಮಸಣ ಕಾರ್ಮಿಕರನ್ನು ಕಟ್ಟಡ ಕಾರ್ಮಿಕರು ಎಂದು ಪರಿಗಣಿಸಿ ಕಟ್ಟಡ ಕಾರ್ಮಿಕರಿಗೆ ಇರುವ ಎಲ್ಲ ಸೌಲಭ್ಯಗಳನ್ನು ನೀಡಬೇಕು. ಮಸಣದಲ್ಲಿ ಬೆಳೆದಿರುವ ಮುಳ್ಳುಕಂಟೆಗಳನ್ನು ಸ್ವಚ್ಛಗೊಳಿಸಲು ಎನ್‌ಆರ್‌ಇಜಿ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಬೇಕು. ಪ್ರತಿ ಗ್ರಾಮದಲ್ಲಿ ದಲಿತರರಿಗಾಗಿ ಪ್ರತ್ಯೇಕ ಮಸಣ ನೀಡಬೇಕು. ಕಾಡು ಸೋಸುವಾಗ ಪ್ರತಿ ಕಾರ್ಮಿಕರಿಗೆ 2000ರೂ ಹಣ ನೀಡಬೇಕು ಎಂದು ಒತ್ತಾಯಿಸಿದರು. ದೇವದಾಸಿ ವಿಮೋಚನಾ ಸಂಘದ ಅಧ್ಯಕ್ಷೆ ಮೈಲಮ್ಮ, ಚಾಂದ್‌ಭೀ, ಅಂಜಿನಮ್ಮ, ಎಸ್‌ಎಫ್‌ ಐನ ಗುಳೇದಾಳು ಬಸವರಾಜ ಮಾತನಾಡಿದರು.

ಮಸಣ ಕಾರ್ಮಿಕರ ಸಂಘದ ಅಧ್ಯಕ್ಷ ಹೆಚ್‌ .ನಾಗೇಂದ್ರಪ್ಪ, ಕಾರ್ಯದರ್ಶಿ ಲಿಂಗರಾಜ, ಸಿಐಟಿಯುನ ಎಸ್‌. ಜಗನ್ನಾಥ, ಹನುಮಂತಪ್ಪ, ಹುಲುಗಪ್ಪ, ಬಸವರಾಜಪ್ಪ, ಮರಿಯಪ್ಪ, ರಂಗಪ್ಪ, ಮಾರುತಿ ಇತರರಿದ್ದರು.

ಟಾಪ್ ನ್ಯೂಸ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.