ಗೌರೇಶ್ವರ, ಪಾರ್ವತಾಂಬೆ ಉತ್ಸವ
Team Udayavani, Oct 27, 2020, 12:49 PM IST
ಯಳಂದೂರು: ತಾಲೂಕಿನಾದ್ಯಂತ ಭಾನುವಾರ ಹಾಗೂ ಸೋಮವಾರ ಆಯುಧಪೂಜೆ ಹಾಗೂ ದಸರಾ ಹಬ್ಬಗಳನ್ನು ಸಂಭ್ರಮ ಸಡಗರಗಳಿಂದ ಆಚರಿಸಲಾಯಿತು.
ಪಟ್ಟಣದ ಗೌರೇಶ್ವರ ದೇಗುಲದಲ್ಲಿ ಪಟ್ಟಕ್ಕೆ ಕೂರಿಸಿದ್ದ ದೇವರಿಗೆ ಆಯುಧ ಪೂಜೆಯ ರಾತ್ರಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳೇಪೇಟೆಯಲ್ಲಿರುವ ಬನ್ನಿಮಂಟಪಕ್ಕೆ ತೆರಳಿ ಅಲ್ಲಿ ಶಮಿವೃಕ್ಷಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಗೌರೇಶ್ವರ ಹಾಗೂ ಪಾರ್ವತಾಂಬೆಯ ಉತ್ಸವಮೂರ್ತಿಗಳನ್ನು ದೇಗುಲದ ಆವರಣದಲ್ಲೇ ಮೆರವಣಿಗೆ ಮಾಡಲಾಯಿತು.
ಭಕ್ತರ ಸಂಖ್ಯೆ ಕಡಿಮೆ ಇದ್ದರೂ ಉತ್ಸವಾದಿ ದೇವತಾ ಕಾರ್ಯಗಳು ಸಾಂಗವಾಗಿ ಜರುಗಿದವು. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸಾರ್ವಜನಿಕರು ದೇವರ ದರ್ಶನ ಪಡೆದರು. ಅರ್ಚಕ ಮಹೇಶ್ ಚಂದ್ರಮೌಳಿ ದೀಕ್ಷಿತ್ ನೇತೃತ್ವದಲ್ಲಿ ಪಾರ್ವತಾಂಬೆ ಹಾಗೂ ಗೌರೇಶ್ವರಸ್ವಾಮಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಲಾಯಿತು.
ಆಯುಧ ಪೂಜೆ ಸಂಭ್ರಮ: ಪಟ್ಟಣದಲ್ಲಿ ಹೂವು ಹಣ್ಣಿನ ದರ ಹೆಚ್ಚಾಗಿದ್ದರೂ ಇದನ್ನು ಖರೀದಿಸಲು ಜನರು ಮುಗಿ ಬಿದ್ದರು. ತಮ್ಮ ವಾಹನಗಳಿಂದ ಕೆಲವರು ವಿಶೇಷ ಅಲಂಕಾರ ಮಾಡುವ ಮೂಲಕಗಮನ ಸೆಳೆದರು. ತಾಲೂಕಿನ ಬಿಳಿಗಿರಿರಂಗನಬೆಟ್ಟದ ರಂಗನಾಥ ಸ್ವಾಮಿ ದೇಗುಲದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಹಬ್ಬದ ನಿಮಿತ್ತ ಹಾಗೂ ಸಾಲು ಸಾಲು ರಜೆಗಳಿಂದ ಇಲ್ಲಿಗೆ ಆಗಮಿಸುವ ಭಕ್ತರ ಸಂಖ್ಯೆ ಏರುಮುಖವಾಗಿತ್ತು.
ಹಳೇ ಅಣಗಳ್ಳಿಯಲ್ಲಿ ವಿಶಿಷ್ಟ ದಸರಾ :
ಕೊಳ್ಳೇಗಾಲ: ಆಯುಧಪೂಜೆ ಮತ್ತು ವಿಜಯದಶಮಿ ಅಂಗವಾಗಿ ಹಳೇ ಅಣಗಳ್ಳಿ ಗ್ರಾಮದಲ್ಲಿ ಮಹಿಷಾಸುರ, ಮೈಸೂರು ಮಹಾರಾಜ ಮತ್ತು ಅಂಬೇಡ್ಕರ್ ಭಾವಚಿತ್ರಗಳನ್ನಿಟ್ಟು ವಿಶಿಷ್ಟ ಮೆರವಣಿಗೆ ನಡೆಸಲಾಯಿತು.
ರೈತ ಮುಖಂಡ ಅಣಗಳ್ಳಿ ಬಸವರಾಜು ನೇತೃತ್ವದಲ್ಲಿ ಗ್ರಾಮಸ್ಥರು ಸೇರಿ ಮೂರು ವಾಹನಗಳನ್ನು ಬಣ್ಣದ ಕಾಗದಗಳಿಂದ ಹಾಗೂ ಹಸಿರು ತೋರಣಗಳಿಂದ ಅಲಂಕರಿಸಿ, ನಂತರ ಮಹಿಷಾಸುರ, ಮೈಸೂರಿನ ಮಹಾರಾಜ ಮತ್ತು ಅಂಬೇಡ್ಕರ್ ಭಾವಚಿತ್ರಗಳನ್ನು ಅಳವಡಿಸಿ ನಂತರ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.
ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನೂರಾರು ಮಹಿಳೆಯರಿಗೆಸೀರೆಗಳನ್ನು ವಿತರಣೆ ಮಾಡಿದ ಬಳಿಕ, ವಾಹನಗಳು ಮತ್ತು ಎತ್ತಿನಗಾಡಿಗಳ ಮೂಲಕ ಊರಿನಲ್ಲಿ ಸಂಭ್ರಮದಿಂದ ಮೆರವಣಿಗೆ ನಡೆಸಲಾಯಿತು. ದಸರಾ ಉತ್ಸವ ಅಂಗವಾಗಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಪಂಚವಾದ್ಯಕ್ಕೆ ಹೆಜ್ಜೆಗಳನ್ನು ಹಾಕಿ ಕುಣಿದ ಕುಪ್ಪಳಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.