ಜನರ ಆಲಸ್ಯ-ಹಠ ಕೋವಿಡ್ ಹೆಚ್ಚಳಕ್ಕೆ ಕಾರಣ: ರೇಣುಕಾಚಾರ್ಯ
Team Udayavani, Oct 27, 2020, 4:33 PM IST
ಹೊನ್ನಾಳಿ: ರಾಜ್ಯದಲ್ಲಿ ಕೋವಿಡ್ ಹೆಚ್ಚಳಕ್ಕೆ ಜನರಲ್ಲಿನ ಸೋಮಾರಿತನ, ಆಲಸ್ಯ, ಹಠವೇ ಕಾರಣ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಬೇಸರ ವ್ಯಕ್ತಪಡಿಸಿದರು.
ಪಟ್ಟಣದಲ್ಲಿನ ತಮ್ಮ ನಿವಾಸದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ದಿಂದ ರಾಜ್ಯದಲ್ಲಿ ಸಾವು- ನೋವು ಸಂಭವಿಸುತ್ತಿದ್ದರೂ ಜನರಲ್ಲಿ ಇನ್ನೂ ಜಾಗೃತಿ ಮೂಡಿಲ್ಲ. ಇನ್ನು ಮುಂದಾದರೂ ಕೋವಿಡ್ ಬಗ್ಗೆ ಜಾಗರೂಕತೆಯಿಂದ ಇರಬೇಕು ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೋವಿಡ್ ಯಶಸ್ವಿಯಾಗಿ ಗೆಲ್ಲುತ್ತೇನೆಂದು ಸಂಕಲ್ಪ ಮಾಡಿದ್ದಾರೆ. ನಾವು ಕೂಡ ಅವರೊಂದಿಗೆ ಕೈಜೋಡಿಸೋಣ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೊರೊನಾ ಲಸಿಕೆಯನ್ನು ಜನರಿಗೆ ಉಚಿತವಾಗಿ ನೀಡುತ್ತೇವೆಂದು ಹೇಳಿದ್ದಾರೆ. ಆದಿನ ಆದಷ್ಟು ಬೇಗ ಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುವುದಾಗಿ ಹೇಳಿದರು.
ಗುಣಮುಖನಾಗಿರುವೆ: ಕೋವಿಡ್ ಪರೀಕ್ಷೆಯಲ್ಲಿ ಒಂಭತ್ತು ಬಾರಿ ನನಗೆ ನೆಗೆಟಿವ್ ಬಂದಿತ್ತು. ಹತ್ತನೇ ಸಲ ಪರೀಕ್ಷೆಗೆ ಒಳಪಟ್ಟಾಗ ಪಾಸಿಟಿವ್ ಬಂದಾಗ ಸ್ವಲ್ಪ ಗಾಬರಿಯಾದೆ. ಆದರೆ ನನ್ನಲ್ಲಿನ ಆತ್ಮವಿಶ್ವಾಸದಿಂದ ಇದೀಗ ಕೊರೊನಾದಿಂದ ಮುಕ್ತನಾಗಿದ್ದೇನೆ ಎಂದು ರೇಣುಕಾಚಾರ್ಯ ತಿಳಿಸಿದರು.
ನನಗೆ ಕೋವಿಡ್ ಬಂದಾಗ ಸಿಎಂ ಸೇರಿದಂತೆ ಸೇರಿದಂತೆ ಸಚಿವರು, ಸರ್ವ ಮಠಗಳ ಮಠಾಧಿಧೀಶರು ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದರು. ಅಲ್ಲದೆ ಅವಳಿ ತಾಲೂಕಿನ ಜನರು ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ ಮೂಲಕ ನನ್ನ ಚೇತರಿಕೆಗೆ ಪ್ರಾರ್ಥಿಸಿದ್ದರು. ಅವರೆಲ್ಲರ ಶುಭ ಹಾರೈಕೆಯಿಂದ ಇದೀಗ ಗುಣಮುಖನಾಗಿ ಬಂದಿದ್ದೇನೆ ಎಂದರು.
ನ್ಯಾಮತಿ ತಾ.ಪಂ ಅಧ್ಯಕ್ಷ ಎಸ್.ಪಿ.ರವಿಕುಮಾರ್, ಉಪಾಧ್ಯಕ್ಷ ಮರಿಕನ್ನಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್, ಮಾಜಿ ಅಧ್ಯಕ್ಷ ಡಿ.ಜಿ.ರಾಜಪ್ಪ ಇದ್ದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮುಂದಿನ 20 ವರ್ಷಗಳ ಕಾಲ ಕಾಂಗ್ರೆಸ್ ಅನ್ನು ವಿರೋಧ ಪಕ್ಷದಲ್ಲಿ ಕೂರಿಸುತ್ತೇನೆಂದು ಸವಾಲು ಹಾಕಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ 150 ಶಾಸಕರನ್ನು ಗೆಲ್ಲಿಸಬೇಕೆಂದು ಪಣ ತೊಟ್ಟಿದ್ದು, ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. –ಎಂ.ಪಿ. ರೇಣುಕಾಚಾರ್ಯ, ಸಿಎಂ ರಾಜಕೀಯ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.