ಮೂರು ವರ್ಷ ಯಡಿಯೂರಪ್ಪರೇ ಸಿಎಂ


Team Udayavani, Oct 27, 2020, 5:16 PM IST

ಮೂರು ವರ್ಷ ಯಡಿಯೂರಪ್ಪರೇ ಸಿಎಂ

ಹೊಳಲ್ಕೆರೆ: ಮುಂದಿನ ಮೂರು ವರ್ಷಗಳ ರಾಜ್ಯ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಆಡಳಿತ ನಡೆಸುವುದು ಸೂರ್ಯ ಚಂದ್ರರಷ್ಟೇ ಸತ್ಯ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಪಟ್ಟಣದ ಪ್ರವಾಸಿಮಂದಿರದಿಂದ ಗಣಪತಿ ವೃತ್ತದವರೆಗೆ ಕಾರ್ಯಕರ್ತರ ರ್ಯಾಲಿ ನಡೆಸಿದ ಅವರು ವಿಧಾನಪರಿಷತ್‌ ಆಗ್ನೇಯ ಪದವೀಧರ ಕ್ಷೇತ್ರದ ಆಭ್ಯರ್ಥಿ ಚಿದಾನಂದ ಎಂ.ಗೌಡ ಪರ ಮತ ಯಾಚಿಸಿ ಅವರು ಮಾತನಾಡಿದರು. ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪರವಾಗಿದ್ದಾರೆ. ವಿದ್ಯಾವಂತರು ಬಿಜೆಪಿ ಪಕ್ಷವನ್ನು ಮೊದಲಿನಿಂದಲೂ ಬೆಂಬಲಿಸಿಕೊಂಡು ಬಂದಿದ್ದಾರೆ. ಅ. 28 ರಂದು ನಡೆಯಲಿರುವ ಚುನಾವಣೆಯಲ್ಲಿ ಪಕ್ಷಕ್ಕೆ ಮತ ನೀಡುವ ಮೂಲಕ ಗೆಲುವನ್ನು ಖಚಿತಗೊಳಿಸಬೇಕೆಂದರು. ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಉಪಚುನಾವಣೆಯ ಎರಡು ಕ್ಷೇತ್ರಗಳಲ್ಲು ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷ ಧೂಳಿಪಟವಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಮತದಾರರು ಕಾಂಗ್ರೆಸ್‌ ಭದ್ರಕೋಟೆಯನ್ನು ಛಿದ್ರ ಮಾಡಲು ಚುನಾವಣೆಗೆ ಕಾಯುತ್ತಿದ್ದಾರೆ ಎಂದರು.

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಜನರು ಯಾವತ್ತು ಬಿಎಸ್‌ವೈ ಪರವಾಗಿ ನಿಂತಿದ್ದಾರೆ. ಅದೇ ರೀತಿ ಶಾಸಕ ಎಂ. ಚಂದ್ರಪ್ಪ ಅವರು ಯಡಿಯೂರಪ್ಪನವರ ಬಲಗೈ ಬಂಟರಾಗಿದ್ದಾರೆ. ಕಷ್ಟ ಕಾಲದಲ್ಲಿ ಬಿಎಸ್‌ವೈ ಜತೆಗೆ ಇದ್ದವರು. ಹಾಗಾಗಿ ಚಂದ್ರಪ್ಪ ಅವರಿಗೆ ಮುಂದಿನ ದಿನಗಳಲ್ಲಿ ಮಂತ್ರಿಯಾಗುವ ಅವಕಾಶ ನೀಡಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕ ಎಂ. ಚಂದ್ರಪ್ಪ ಮಾತನಾಡಿ, ಈ ನಾಡಿನ ಭವಿಷ್ಯದ ಮುಖ್ಯಮಂತ್ರಿಗಳಾಗುವ ಎಲ್ಲಾ ಅರ್ಹತೆಯನ್ನು ಬಿ.ವೈ. ವಿಜಯೇಂದ್ರ ಹೊಂದಿದ್ದಾರೆ. ನಾಡು ಕಂಡ ಅಪರೂಪದ ನಾಯಕ ಬಿಎಸ್‌ವೈ ಹಾದಿಯಲ್ಲಿ ಪಕ್ಷವನ್ನು ಸಂಘಟಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿಯನ್ನು ಬಲಿಷ್ಠವಾಗಿ ಕಟ್ಟುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತಿದ್ದಾರೆ ಎಂದು ಬಣ್ಣಿಸಿದರು.

ಬಿಜೆಪಿ ಮುಖಂಡ ಸಿ. ರಘುಚಂದನ್‌, ಬಿಜೆಪಿ ಮಂಡಲ ಅಧ್ಯಕ್ಷ ಎಂ.ಬಿ. ಸಿದ್ದೇಶ್‌, ಜಿಪಂ ಸದಸ್ಯರಾದ ಸುಮಾ ಲಿಂಗರಾಜ್‌, ಮಹೇಶ್ವರಪ್ಪ, ತಿಪ್ಪೇಸ್ವಾಮಿ, ಜಿಪಂ ಮಾಜಿಅಧ್ಯಕ್ಷ ಎಲ್‌.ಬಿ. ರಾಜಶೇಖರ್‌, ಪಪಂ ಸದಸ್ಯರಾದ ಕೆ.ಸಿ. ರಮೇಶ್‌, ಪಿ.ಆರ್‌.ಮಲ್ಲಿಕಾರ್ಜುನ್‌, ಡಿ.ಎಸ್‌. ವಿಜಯ್‌,ಎಚ್‌.ಆರ್‌. ನಾಗರತ್ನ ವೇದಮೂರ್ತಿ, ಪಿ.ಎಚ್‌. ಮುರುಗೇಶ್‌, ಇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ರೂಪಾ ಸುರೇಶ್‌, ಜಗದೀಶ್‌, ಮಹಿಳಾ ಮೋರ್ಚಾ ಅಧ್ಯಕ್ಷೆ ಸರಸ್ವತಿ, ಡಿ.ಸಿ. ಮೋಹನ್‌, ಬಸವರಾಜ್‌ ಯಾದವ್‌ ಇದ್ದರು.

ಸೋಲಿನ ಭಿತಿಯಿಂದ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳ ಮುಖಂಡರು ಸ್ಥಿಮಿತ ಕಳೆದುಕೊಂಡವರಂತೆ ಮಾತನಾಡುತ್ತಿದ್ದಾರೆ. ಮತ ಎಣಿಕೆ ಪ್ರಾರಂಭವಾದ ಒಂದೆರಡು ಗಂಟೆಯಲ್ಲಿಬಿಜೆಪಿ ಲೀಡ್‌ ನೋಡಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದವರು ಜಾಗ ಖಾಲಿ ಮಾಡುವ ಸ್ಥಿತಿ ಇದೆ. ಬಿ.ವೈ.ವಿಜಯೇಂದ್ರ,ಬಿಜೆಪಿ ರಾಜ್ಯ ಉಪಾಧ್ಯಕ್ಷ

ಟಾಪ್ ನ್ಯೂಸ್

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

8-bng

Bengaluru: ಕದ್ದ ಮೊಬೈಲ್‌ ಕೊರಿಯರ್‌ ಮೂಲಕ ಕೇರಳಕ್ಕೆ ರವಾನೆ!

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.