ಬೆಂಬಲ ಬೆಲೆಯ ಭತ್ತ ಖರೀದಿ ಕೇಂದ್ರ ಈಗ ಆರಂಭವಾದರಷ್ಟೇ ಪ್ರಯೋಜನ
Team Udayavani, Oct 28, 2020, 6:12 AM IST
ಸಾಂದರ್ಭಿಕ ಚಿತ್ರ
ಕೋಟ: ಮಳೆಯ ಕಣ್ಣಾ ಮುಚ್ಚಲೆಯ ನಡುವೆ ಭತ್ತದ ಕಟಾವು ಪ್ರಕ್ರಿಯೆ ಆರಂಭಗೊಂಡಿದ್ದು ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಕರಾವಳಿಯ ರೈತರಲ್ಲಿ ಭತ್ತವನ್ನು ಸಂಗ್ರಹಿಸಿಟ್ಟು ಬೆಲೆ ಏರಿಕೆಯಾದಾಗ ಮಾರಾಟ ಮಾಡುವ ಅಭ್ಯಾಸ ಕಡಿಮೆ. ಮಳೆ, ಗೋದಾಮುಗಳ ಕೊರತೆ ಮುಂತಾದ ಕಾರಣಗಳಿಂದಾಗಿ ಉತ್ಪನ್ನವನ್ನು ಬೇಗನೆ ಮಾರಾಟ ಮಾಡಬೇಕಾದ ಪರಿಸ್ಥಿತಿ ಇದೆ.
ರೈತರ ಈ ಅನಿವಾರ್ಯತೆಯನ್ನು ಬಳಸಿಕೊಂಡು ಕೆಲವು ಮಿಲ್‌ಗಳು ಕಡಿಮೆ ಹಣಕ್ಕೆ ಭತ್ತವನ್ನು ಖರೀದಿಸಿ ರೈತರಿಗೆ ನಷ್ಟ ಮಾಡುತ್ತಾರೆ. ಆದ್ದರಿಂದ ಕಟಾವಿನ ಆರಂಭದಲ್ಲೇ ಅಂದರೆ ಅಕ್ಟೋಬರ್ ಅಂತ್ಯದೊಳಗೆ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸುವ ಕೇಂದ್ರಗಳು° ತೆರೆದರೆ ಸಾಕಷ್ಟು ಅನುಕೂಲವಾಗಲಿದೆ. ಇದು ಉಡುಪಿ ಜಿಲ್ಲೆಯ ರೈತರ ಆಗ್ರಹವೂ ಹೌದು.
ಕಳೆದ ಬಾರಿ ನವೆಂಬರ್ ಆರಂಭದಲ್ಲಿ ಉಡುಪಿ ಜಿಲ್ಲಾಡಳಿತ ಖರೀದಿ ಕೇಂದ್ರಕ್ಕೆ ಬೇಡಿಕೆ ಸಲ್ಲಿಸಿತ್ತು. ಸರಕಾರದಿಂದ ವಿಳಂಬವಾಗಿ ಅನುಮೋದನೆಗೊಂಡು ಜನವರಿ ಮೊದಲ ವಾರ ಆರಂಭಗೊಂಡಿತ್ತು. ಅಷ್ಟರಲ್ಲಿ ಬಹುತೇಕ ರೈತರು ಭತ್ತವನ್ನು ಖಾಸಗಿ ಮಿಲ್‌ಗಳಿಗೆ ಮಾರಾಟ ಮಾಡಿ ಆಗಿದ್ದರಿಂದ ಖರೀದಿ ಕೇಂದ್ರದ ಕಡೆ ಯಾರೂ ಸುಳಿದಿರಲಿಲ್ಲ. ಈ ವರ್ಷವಾದರೂ ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಂಡು ಪ್ರಕ್ರಿಯೆಗಳನ್ನು ಚುರುಕುಗೊಳಿಸಿದ ರಷ್ಟೇ ಪ್ರಯೋಜನವಾದೀತು.
ಪ್ರತಿ ತಾ|ನಲ್ಲಿ ಸ್ಥಾಪನೆಗೆ ಬೇಡಿಕೆ
ಕಳೆದ ಸಾಲಿನಲ್ಲಿ ಉಡುಪಿ, ಕುಂದಾಪುರ, ಕಾರ್ಕಳ ತಾಲೂಕು ಕೇಂದ್ರಗಳ ಎಪಿಎಂಸಿ ಪ್ರಾಂಗಣದಲ್ಲಿ ಖರೀದಿ ಕೇಂದ್ರ ತೆರೆಯಲಾಗಿತ್ತು. ಈ ರೀತಿ ಜಿಲ್ಲೆಯಲ್ಲಿ ಎರಡು- ಮೂರು ಕೇಂದ್ರಗಳನ್ನು ಸ್ಥಾಪಿಸಿದರೆ ಸಾಗಾಟ ಮುಂತಾದವುಗಳಿಗೆ ಸಮಸ್ಯೆ ಯಾಗಲಿದೆ. ಆದ್ದರಿಂದ ಪ್ರತಿ ತಾಲೂಕಿಗೊಂದರಂತೆ ಖರೀದಿ ಕೇಂದ್ರ ಆರಂಭಿಸಬೇಕು ಮತ್ತು ಪ್ರತಿ ಬಾರಿ ಸರಕಾರಕ್ಕೆ ಮನವಿ ಸಲ್ಲಿಸಿ ಖರೀದಿ ಕೇಂದ್ರ ತೆರೆಯುವ ವ್ಯವ
ಸ್ಥೆಯ ಬದಲು ರೈತರ ಎಲ್ಲ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ ಸುವಂತೆ ಕೇಂದ್ರಗಳು ಯಾವತ್ತೂ ತೆರೆದಿರಬೇಕು ಎನ್ನುವ ಬೇಡಿಕೆಯೂ ಇದೆ.
ರೈತರ ಜವಾಬ್ದಾರಿಯೂ ಇದೆ
ಹೆಚ್ಚಿನ ರೈತರು ಕಟಾವು ಮಾಡಿದ ಕೂಡಲೇ ಮಾರಾಟ ಮಾಡುವುದರಿಂದ ಮಳೆಯಲ್ಲಿ ನೆನೆದ ಭತ್ತವಾಗಿದ್ದಲ್ಲಿ ಗುಣಮಟ್ಟ ಕುಸಿಯುತ್ತದೆ ಹಾಗೂ ಉತ್ತಮ ಧಾರಣೆಯೂ ಸಿಗುವುದಿಲ್ಲ. ಬಿಸಿಲಲ್ಲಿ ಒಣಗಿಸಿ ಗುಣಮಟ್ಟ ಕಾಯ್ದು ಮಾರಾಟ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎನ್ನುವ ಅಭಿಪ್ರಾಯವಿದೆ.
ದ.ಕ.ದಲ್ಲಿ ಬೇಡಿಕೆ ಇಲ್ಲ
ಈ ಬಾರಿ ಉಡುಪಿ ಜಿಲ್ಲೆಯಲ್ಲಿ 35,754 ಹೆಕ್ಟೇರ್ ಹಾಗೂ ದ.ಕ. ಜಿಲ್ಲೆಯಲ್ಲಿ 11,260 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ಉಡುಪಿ ಜಿಲ್ಲೆಗೆ ಹೋಲಿಸಿದರೆ ದ.ಕ.ದಲ್ಲಿ ಭತ್ತದ ಬೆಳೆಯ ಪ್ರಮಾಣ ಕಡಿಮೆ ಹಾಗೂ ಅಲ್ಲಿ ಸ್ಥಳೀಯ ಮಾರುಟಕ್ಟೆಯಲ್ಲೇ ವಿಲೇವಾರಿ ನಡೆಯುವುದರಿಂದ ಹಲವು ವರ್ಷಗಳಿಂದ ಬೆಂಬಲ ಬೆಲೆಯ ಭತ್ತ ಖರೀದಿ ಕೇಂದ್ರ ಸ್ಥಾಪನೆಗೆ ರೈತರಿಂದ ಬೇಡಿಕೆ ಇಲ್ಲ ಎಂದು ದ.ಕ. ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಡಾ| ಸೀತಾ ತಿಳಿಸಿದ್ದಾರೆ.
ತತ್‌ಕ್ಷಣ ಕ್ರಮಕ್ಕೆ ಸೂಚನೆ
ಜಿಲ್ಲೆಯಲ್ಲಿ ಬೆಂಬಲ ಬೆಲೆಯ ಭತ್ತ ಖರೀದಿ ಕೇಂದ್ರ ತೆರೆಯುವ ಕುರಿತು ಸರಕಾರಕ್ಕೆ ಬೇಡಿಕೆ ಸಲ್ಲಿಸಬೇಕಿದ್ದು, ತತ್‌ಕ್ಷಣ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಈ ಕುರಿತು ಕ್ರಮ ಜರಗಿಸಲಾಗುವುದು.
– ಜಿ. ಜಗದೀಶ್, ಉಡುಪಿ ಜಿಲ್ಲಾಧಿಕಾರಿ
ರಾಜೇಶ್ ಗಾಣಿಗ ಅಚ್ಲಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.