ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ
Team Udayavani, Oct 28, 2020, 1:28 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಕರಾವಳಿಯಲ್ಲಿ ವಿಶ್ವಮಟ್ಟದ ಅಕ್ವೇರಿಯಂ ನಿರ್ಮಾಣ ಮಾಡುವ ಪ್ರಸ್ತಾವ ಇದ್ದು, ಇದಕ್ಕೆ ಸೂಕ್ತ ಸ್ಥಳ ಗುರುತಿಸಿ ಕೊಡುವಂತೆ ಮೀನುಗಾರಿಕೆ ಮತ್ತು ದ.ಕ. ಜಿಲ್ಲಾ ಉಸ್ತವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮೀನುಗಾರಿಕಾ ಕಾಲೇಜಿಗೆ ಸೂಚಿಸಿದ್ದಾರೆ.
ಅವರು ಎಕ್ಕೂರಿನ ಮೀನುಗಾರಿಕಾ ಕಾಲೇಜಿನಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯ ತಿಳಿಸಿದರು. ಮೀನುಗಾರಿಕಾ ಕಾಲೇಜಿನ ಡೀನ್ ಪ್ರೊ| ಸೆಂಥಿಲ್ ವೇಲು ಅವರು ವಿಷಯ ಪ್ರಸ್ತಾಪಿಸಿ, ಕರ್ನಾಟಕದಲ್ಲಿ 120 ದ್ವೀಪಗಳು ಇವೆ. ಈ ಪೈಕಿ 25 ದ್ವೀಪಗಳು 200 ಕಿ.ಮಿ. ವ್ಯಾಪ್ತಿಯಲ್ಲಿ ಇವೆ ಇವುಗಳನ್ನು ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿ ಪಡಿಸಲು ಅವಕಾಶವಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ ನಿರ್ಮಾಣ ಮಾಡಬಹುದಾಗಿದೆ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೋಟ ಅವರು, ಜನರ ಅಥವಾ ಯಾರದೇ ಆಕ್ಷೇಪಣೆ ಇಲ್ಲದ, ಸೂಕ್ತ ಜಾಗವನ್ನು ಕರಾವಳಿಯ 3 ಜಿಲ್ಲೆಗಳ ವ್ಯಾಪ್ತಿಯ ಎಲ್ಲಾದರೂ ಹುಡುಕಿ ಕೊಡಿ. ಪಿಪಿಪಿ ಮಾದರಿಯಲ್ಲಿ ಅಕ್ವೇರಿಯಂ ನಿರ್ಮಾಣ ಮಾಡೋಣ ಎಂದರು.
ದ್ವೀಪದಲ್ಲಿ ಯಾವುದೇ ಯೋಜನೆ ಕೈಗೆತ್ತಿ ಕೊಳ್ಳುವಾಗ ಅದು ಮೀನುಗಾರಿಕೆಗೆ ಪ್ರಯೋಜನ ಆಗುವಂತಿರಬೇಕು ಎಂದು ಮೀನುಗಾರ ಮುಖಂಡರಾದ ಶಶಿ ಕುಮಾರ್, ನಿತಿನ್ ಕುಮಾರ್ ಮತ್ತು ಮೋಹನ್ ಬೆಂಗ್ರೆ ಅವರು ಹೇಳಿದರು. ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಪಾರ್ಶ್ವನಾಥ ಹಾಗೂ ಮೀನುಗಾರಿಕಾ ಕಾಲೇಜಿನ ಪ್ರಾಧ್ಯಾ ಪಕರು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.