ಬಿಹಾರ ಚುನಾವಣೆ: 71 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ, ಕಣದಲ್ಲಿ 1066 ಅಭ್ಯರ್ಥಿಗಳು
Team Udayavani, Oct 28, 2020, 7:55 AM IST
ಬಿಹಾರ: ಬಿಹಾರ ವಿಧಾನಸಭೆ ಚುನಾವಣೆಯ ಪ್ರಥಮ ಹಂತದ ಮತದಾನ ಇಂದು ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ 71 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಮೊದಲ ಹಂತದಲ್ಲಿ ಸುಮಾರು 1,066 ಅಭ್ಯರ್ಥಿಗಳು ಕಣದಲ್ಲಿದ್ದು, 2 ಕೋಟಿಗೂ ಅಧಿಕ ಮಂದಿ ಇಂದು ಮತ ಚಲಾಯಿಸಲಿದ್ದಾರೆ.
ಮೊದಲ ಹಂತದಲ್ಲಿ ಸುಮಾರು 1.01 ಕೋಟಿ ಮಹಿಳಾ ಮತದಾರರಿದ್ದು, 599 ತೃತೀಯ ಲಿಂಗಿಗಳಿದ್ದಾರೆಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. 71 ವಿಧಾನಸಭಾ ಕ್ಷೇತ್ರಗಳಲ್ಲಿ 952 ಮಂದಿ ಪುರುಷ ಮತ್ತು 114 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಗಯಾ ಕ್ಷೇತ್ರದಲ್ಲಿ ಅತೀ ಹೆಚ್ಚು ಎಂದರೆ, 27 ಅಭ್ಯರ್ಥಿಗಳು ಸ್ಪರ್ಧಿಸಿದ್ದರೆ ಕಾಟೋರಿಯಾ ಕ್ಷೇತ್ರದಲ್ಲಿ ಅತಿ ಕಡಿಮೆ ಎಂದರೆ ಐವರು ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆಂದು ತಿಳಿದುಬಂದಿದೆ.
ಚುನಾವಣೆಗೆ ಕೋವಿಡ್ ಭೀತಿಯೂ ಕಾಡುತ್ತಿದ್ದು, ಮತದಾನ ಮತ್ತು ಮತ ಎಣಿಕೆಯ ಸಮಯದಲ್ಲಿ ಕೋವಿಡ್ -19 ಮಾರ್ಗಸೂಚಿಗಳನ್ನು ಅನುಸರಿಸುವಂತೆ ಚುನಾವಣಾ ಆಯೋಗವು ಎಲ್ಲಾ ಮತಗಟ್ಟೆಗಳಿಗೆ ನಿರ್ದೇಶನ ನೀಡಿದೆ. ಒಂದು ಮತಗಟ್ಟೆಯಲ್ಲಿ ಗರಿಷ್ಠ ಸಂಖ್ಯೆಯ ಮತದಾರರ ಸಂಖ್ಯೆಯನ್ನು 1,600 ರಿಂದ 1,000ಕ್ಕೆ ಇಳಿಸಲಾಗಿದೆ, 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಪೋಸ್ಟರ್ ಕಾರ್ಡ್ ಮೂಲಕ ಮತದಾನ ಮಾಡುವುದಕ್ಕೆ ಅನುಮತಿ ನೀಡಲಾಗಿದೆ.
ಮಾತ್ರವಲ್ಲದೆ ಮತ ಯಂತ್ರವನ್ನು ಸ್ಯಾನಿಟೈಸ್ ಮಾಡುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಥರ್ಮಲ್ ಸ್ಕ್ರೀನಿಂಗ್ ಮತ್ತು ಮತಗಟ್ಟೆಯಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಲು ಸೂಚಿಸಿದೆ. ಪ್ರಮುಖವಾಗಿ ಮತದಾನ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕಡ್ಡಾಯವಾಗಿ ಸೂಚಿಸಿದೆ.
Voting for the first phase of #BiharElections to begin today; visuals from polling stations in Lakhisarai (pic 1 & 2) and Gaya (pic 3 & 4) pic.twitter.com/jpp8RNnhX5
— ANI (@ANI) October 28, 2020
ಈ ಚುನಾವಣೆಯಲ್ಲಿ ಆರ್‌ಜೆಡಿ, ಕಾಂಗ್ರೆಸ್, ಸಿಪಿಐ, ಸಿಪಿಐ (ಎಂ) ಮತ್ತು ಸಿಪಿಐ (ಎಂಎಲ್) ಗಳನ್ನು ಒಳಗೊಂಡ ಪ್ರತಿಪಕ್ಷದ ಮಹಾ ಮೈತ್ರಿಕೂಟವು ಜೆಡಿಯು, ಬಿಜೆಪಿ, ವಿಕಾಸ್ಸೀಲ್ ಇನ್ಸಾನ್ ಪಾರ್ಟಿ ಮತ್ತು ಹಿಂದೂಸ್ತಾನಿ ಅವಮ್ ಮೋರ್ಚಾ ಒಳಗೊಂಡ ಆಡಳಿತಾರೂಢ ಎನ್‌ಡಿಎಯನ್ನು ಎದುರಿಸಲಿದೆ. ಆರ್‌ಜೆಡಿಯ ತೇಜಶ್ವಿ ಯಾದವ್ ಪ್ರತಿಪಕ್ಷದ ಮಹಾಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದರೆ, ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ತಮ್ಮ ಹುದ್ದೆಯನ್ನು ಉಳಿಸಿಕೊಳ್ಳಲು ಆಡಳಿತ ಮೈತ್ರಿಕೂಟಕ್ಕಾಗಿ ಹೋರಾಡಲಿದ್ದಾರೆ.
ಮತದಾನಕ್ಕೆ ಮುಂಚಿತವಾಗಿ ರಂಗಾಬಾದ್‌ನ ಧಿಬ್ರಾ ಪ್ರದೇಶದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸುಧಾರಿತ ಎರಡು ಸ್ಫೋಟಕಗಳನ್ನು (ಐಇಡಿ) ವಶಪಡಿಸಿಕೊಂಡು ನಿಷ್ಕ್ರಿಯಗೊಳಿಸಿದೆ.
ಚುನಾವಣೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಸುತ್ತಿನ ಮತದಾನ ಆರಂಭವಾಗಿದ್ದು, ಕ್ಷೇತ್ರದ ಪ್ರತಿಯೊಬ್ಬರು ಕೂಡ ತಮ್ಮ ಹಕ್ಕು ಚಲಾಯಿಸಬೇಕು. ಎಲ್ಲಾ ಮತದಾರರು ಕೋವಿಡ್‌ಗೆ ಸಂಬಂಧಿಸಿದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಈ ಪ್ರಜಾಪ್ರಭುತ್ವದ ಉತ್ಸವದಲ್ಲಿ ಭಾಗಿಯಾಗಬೇಕು. ಮತದಾನದ ಸಂದರ್ಭದಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಕೋರಿಕೊಂಡಿದ್ದಾರೆ.
बिहार विधानसभा चुनावों में आज पहले दौर की वोटिंग है।
सभी मतदाताओं से मेरा आग्रह है कि वे कोविड संबंधी सावधानियों को बरतते हुए, लोकतंत्र के इस पर्व में अपनी हिस्सेदारी सुनिश्चित करें।
दो गज की दूरी का रखें ध्यान, मास्क जरूर पहनें।
याद रखें, पहले मतदान, फिर जलपान!
— Narendra Modi (@narendramodi) October 28, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ
ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್
ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?
ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ
ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.