ಭಾರತ-ಆಸೀಸ್ ಸರಣಿ: ದಿನಾಂಕ ನಿಗದಿಪಡಿಸಿದ ಕ್ರಿಕೆಟ್ ಆಸ್ಟ್ರೇಲಿಯಾ: ಇಲ್ಲಿದೆ ವೇಳಾಪಟ್ಟಿ !
Team Udayavani, Oct 28, 2020, 10:43 AM IST
ನವದೆಹಲಿ: ಮಹತ್ವದ ಭಾರತ- ಆಸಿಸ್ ಸರಣಿಗೆ ಕ್ರಿಕೆಟ್ ಆಸ್ಟ್ರೇಲಿಯಾ ದಿನಾಂಕವನ್ನು ನಿಗದಿಪಡಿಸಿದೆ. ಮುಂದಿನ ತಿಂಗಳು ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, 3 ಏಕದಿನ, 3 ಟಿ-ಟ್ವೆಂಟಿ, 4 ಟೆಸ್ಟ್ ಪಂದ್ಯಗಳನ್ನು ಆಡಲಿದೆ.
ನವೆಂಬರ್ 27, 2020 ರಿಂದ ಆರಂಭವಾಗುವ ಸುದೀರ್ಘ ಸರಣಿ ಜನವರಿ 19, 2021ರಲ್ಲಿ ಕೊನೆಗೊಳ್ಳಲಿದೆ. ಭಾರತ ತಂಡ ನವೆಂಬರ್ 12ರಂದು ಸಿಡ್ನಿ ಗೆ ತಲುಪಲಿದ್ದು, ಕೋವಿಡ್ ಹಿನ್ನಲೆಯಲ್ಲಿ ಕಡ್ಡಾಯ ಕ್ವಾರಂಟೈನ್ ಗೆ ಒಳಪಡಲಿದೆ.
ಸುಮಾರು 2 ತಿಂಗಳ ಪ್ರವಾಸದ ಮೊದಲೆರಡು ಏಕದಿನ ಪಂದ್ಯ ನವೆಂಬರ್ 27 ಮತ್ತು 29 ರಂದು ಸಿಡ್ನಿಯಲ್ಲಿ ನಡೆಯಲಿದೆ. ಅಂತಿಮ ಏಕದಿನ ಪಂದ್ಯವನ್ನು ಕ್ಯಾನ್ ಬೆರಾದ ಮನುಕ ಓವಲ್ ಕ್ರೀಡಾಂಗಣದಲ್ಲಿ ಡಿಸೆಂಬರ್ 2ರಂದು ನಿಗದಿಪಡಿಸಲಾಗಿದೆ.
ಟಿ-ಟ್ವೆಂಟಿ ಸರಣಿ ಕೂಡ ಕ್ಯಾನ್ ಬೆರಾದಲ್ಲೇ ಆರಂಭವಾಗಲಿದ್ದು, ಡಿಸೆಂಬರ್ 4ರಂದು ಮೊದಲ ಪಂದ್ಯ ನಡೆಯುತ್ತದೆ. ನಂತರದ ಮ್ಯಾಚ್ ಗಳನ್ನು ಮತ್ತೆ ಸಿಡ್ನಿ ಸ್ಟೇಡಿಯಂನಲ್ಲಿ ಗೊತ್ತುಪಡಿಸಲಾಗಿದ್ದು, ಅಂತಿಮ ಪಂದ್ಯಗಳು ಡಿಸೆಂಬರ್ 6 ಮತ್ತು 8ರಂದು ನಡೆಯಲಿದೆ.
ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿ ಅಡಿಲೇಡ್ ನ ಓವಲ್ ನಲ್ಲಿ ಡಿಸೆಂಬರ್ ನಲ್ಲಿ 17ರಂದು ಪ್ರಾರಂಭವಾಗಲಿದ್ದು, ಇದು ಪಿಂಕ್ ಕಲರಿನ ಚೆಂಡಿನಲ್ಲಿ ಆಡಲಿರುವ ಮೊದಲ ಹಗಲು ರಾತ್ರಿ ಪಂದ್ಯವಾಗಿದೆ. 2ನೇ ಟೆಸ್ಟ್ ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್ (ಎಂಸಿಜಿ) ನಲ್ಲಿ, ಡಿಸೆಂಬರ್ 26ರಂದು ನಡೆದರೇ, 3ನೇ ಪಂದ್ಯ ಎಸ್ ಸಿಜಿಯಲ್ಲಿ ಜನವರಿ 7 ರಂದು ಮತ್ತು ಅಂತಿಮ ಟೆಸ್ಟ್ ಪಂದ್ಯ ಬ್ರಿಸ್ಬೇನ್ ನ ಗಬ್ಬಾ ದಲ್ಲಿ ಜನವರಿ 15ರಂದು ನಡೆಯಲಿದೆ.
ಇದನ್ನೂ ಓದಿ: ಹಲವು ದಾಖಲೆಗಳಿಗೆ ಸಾಕ್ಷಿಯಾದ ಡೆಲ್ಲಿ-ಹೈದರಾಬಾದ್ ಪಂದ್ಯ: ರಬಾಡ ಅನನ್ಯ ಸಾಧನೆಯೇನು ಗೊತ್ತಾ?
ಭಾರತ ಟಿ20 ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಕೆ.ಎಲ್. ರಾಹುಲ್ (ಉಪನಾಯಕ), ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ದೀಪಕ್ ಚಹರ್, ವರುಣ್ ಚಕ್ರವರ್ತಿ.
ಏಕದಿನ ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಶುಭಮನ್ ಗಿಲ್, ಕೆ.ಎಲ್. ರಾಹುಲ್ (ಉಪನಾಯಕ), ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಾಯಾಂಕ್ ಅಗರ್ವಾಲ್, ರವೀಂದ್ರ ಜಡೇಜ, ಯಜುವೇಂದ್ರ ಚಹಲ್, ಕುಲದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಶಾದೂìಲ್ ಠಾಕೂರ್.
ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ನಾಯಕ), ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆ.ಎಲ್. ರಾಹುಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಹನುಮ ವಿಹಾರಿ, ಶುಭಮನ್ ಗಿಲ್, ವೃದ್ಧಿಮಾನ್ ಸಾಹಾ, ರಿಷಭ್ ಪಂತ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜ, ಆರ್. ಅಶ್ವಿನ್, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ ! ಪ್ರವಾಸಿಗರ ಸಂಖ್ಯೆ ವಿರಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್‌ಗೆ ಆಗಮಿಸಿದ ರೋಹಿತ್ ಶರ್ಮ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.