ಕಾಂಗ್ರೆಸ್‌ನಿಂದ ಬಿಜೆಪಿ ವಿರುದ್ಧ ಧರಣಿ; ಕೇಸು

ಯಶವಂತಪುರ ಪೊಲೀಸ್‌ ಠಾಣೆ ಎದುರು ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ

Team Udayavani, Oct 28, 2020, 11:58 AM IST

bng-tdy-2

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರಕ್ಕೆ ಬಿಜೆಪಿ ಕಾರ್ಯಕರ್ತರು ಹಾಗೂ ಆರ್‌.ಆರ್‌.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಬೆಂಬಲಿಗರು ಅಡ್ಡಿಪಡಿಸಿದ್ದು, ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಮಂಗಳವಾರ ರಾತ್ರಿ ಯಶವಂತಪುರ ಠಾಣೆ ಎದರು ಪ್ರತಿಭಟಿಸಿದ್ದು, ಪ್ರಕರಣ ದಾಖಲಾಗಿದೆ.

ಸುಮಾರು 100ಕ್ಕೂ ಅಧಿಕ ಮಂದಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಾಂತಿಯುತವಾಗಿ ಪ್ರಚಾರ ನಡೆಸುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದರು. ಅದಕ್ಕೆ ಜೆ.ಕೆ.ವೆಂಕಟೇಶ್‌ ಅವರ ಕೈವಾಡವಿದೆ. ಕೂಡಲೇ ಅವರನ್ನು ಬಂಧಿಸ  ಬೇಕು ಎಂದು ಪ್ರತಿಭಟನಾಕಾ ರರು ಒತ್ತಾಯಿಸಿದರು. ಪೊಲೀಸರು ಮನವೊಲಿಸಲು ಯತ್ನಿಸಿದ್ದು, ಆರೋಪಿತರ ವಿರುದ್ಧ ಎಫ್ಐಆರ್‌ ದಾಖಲಿಸಿದ್ದಾರೆ..

ಬಿಜೆಪಿ ವಿರುದ್ಧ ಕೈ ದೂರು :  ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಒಂದೇ ವರ್ಷದಲ್ಲಿ 35 ಕೋಟಿ ಹೆಚ್ಚಳವಾಗಿದ್ದು, ಶಿರಾ ಕ್ಷೇತ್ರದಲ್ಲಿ ಬಿಜೆಪಿ ಸಾರ್ವಜನಿಕರಿಗೆ ಹಣ ಹಂಚಿಕೆ ಆಮಿಷ ಒಡ್ಡುತ್ತಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ನಾಯಕರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಆಯೋಗಕ್ಕೆ ದೂರು ನೀಡಿದ ನಂತರ ಮಾಧ್ಯಮ ಗಳೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌, ಬಿಜೆಪಿ ನಾಯಕರು ಶಿರಾದಲ್ಲಿ ಮತದಾರರಿಗೆ ಹಣ ಹಂಚುವಾಗ ಸಾರ್ವಜನಿಕರೇ ವಿಡಿಯೋ ಮಾಡಿದ್ದಾರೆ. ಹಣ ಹಂಚುವುದಷ್ಟೇ ಅಲ್ಲದೇ ಬಿಜೆಪಿ ಅಭ್ಯರ್ಥಿ ಆಯ್ಕೆಯಾದರೆ ಮಾತ್ರ ಅಭಿ ವೃದ್ಧಿ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊ ಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ ಎಂದು ಹೇಳಿದರು.

ಬೆದರಿಸಿ ಮತ ಪಡೆವ ಯತ್ನ: ದಿನೇಶ್‌ :

ಬೆಂಗಳೂರು: ಆರ್‌.ಆರ್‌.ನಗರದಲ್ಲಿ ಮುನಿರತ್ನ ದಬ್ಟಾಳಿಕೆ ಹಾಗೂ ಬೆದರಿಸಿ ಜನರಿಂದ ಮತ ಪಡೆಯಲು ಪ್ರಯತ್ನ ನಡೆಸು ತ್ತಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಆರ್‌.ಆರ್‌.ನಗರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಪರವಾಗಿ ಪ್ರಚಾರ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಆರ್‌.ಆರ್‌.ನಗರ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಅದರಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಈಗ ಅವರು ಯಾವ ರೀತಿ ಮೋಸ ಮಾಡಿ ದ್ರೋಹ ಮಾಡಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಠಾಣೆ ಮುಂದೆ ಹೈಡ್ರಾಮಾ: ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ತಡರಾತ್ರಿ ವರೆಗೂ ಹೈಡ್ರಾಮ ನಡೆಯಿತು. ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿ ಪಡಿಸಿದ ಮಾಜಿ ಕಾರ್ಪೊರೇಟರ್‌ ಜಿ.ಕೆ.ವೆಂಕಟೇಶ್‌ ಬಂಧನಕ್ಕೆ ಆಗ್ರಹಿಸಿ ಕೈ ಕಾರ್ಯಕರ್ತರು ಪ್ರತಿಭಟಣೆ ನಡೆಸಿದರು. ಅಲ್ಲದೆ ಬಿಜೆಪಿ ಕಾರ್ಯತರ ಬಂಧನ ಆಗುವವರೆಗೂ ಸ್ಥಳದಿಂದ ಬೇರೆಡೆ ಹೋಗಲು ನಿರಾಕರಿಸಿದರು. ಇದೇ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರು ಧರಣಿ ಕೂರಲು ಮುಂದಾದರು.

ಈ ವೇಳೆ ಸಂಸದ ಡಿ.ಕೆ.ಸುರೇಶ್‌ ಯಶವಂತಪುರ ಠಾಣೆಗೆ ಆಗಮಿಸಿ ಬಿಜೆಪಿ ಕಾರ್ಯಕರ್ತರ ಬಂಧನಕ್ಕೆ ಒತ್ತಾಯಿಸಿದರು. ಬಿಜೆಪಿ ಕಾರ್ಯಕರ್ತರು ಪದೇ ಪದೆ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು. ಇದೇ ವೇಳೆ ಎಸಿಪಿ ರೀನಾ ಸುವರ್ಣ ಅವರೊಂದಿಗೆ ಡಿ.ಕೆ.ಸುರೇಶ್‌ ಚರ್ಚೆ ನಡೆಸಿದರು.

ಕಾಂಗ್ರೆಸ್‌ ಮುನಿರತ್ನನ ಗೂಂಡಾಗಳಿಗೆ ಹೆದರುವುದಿಲ್ಲ. ಇದೇ ರೀತಿ ಮುಂದುವರೆದರೆ, ಬಿಜೆಪಿಯವರುಪ್ರಚಾರ ಕಾರ್ಯಕ್ರಮ ನಡೆಸಲು ಬಿಡುವುದಿಲ್ಲ. ಮುನಿರತ್ನ ರನ್ನು ಬಂಧಿಸದಿದ್ದರೆ ಠಾಣೆ ಎದುರು ಪ್ರತಿ ಭಟನೆ ನಡೆಸಬೇಕಾಗುತ್ತದೆ. ನ. 3 ರಂದು ತಕ್ಕ ಉತ್ತರ ನೀಡುತ್ತಾರೆ. ಸಿದ್ದರಾಮಯ್ಯ, ಮಾಜಿ ಸಿಎಂ

ಕಾಂಗ್ರೆಸ್‌ನಿಂದ ದೂರು ಸಲ್ಲಿಕೆಯಾಗಿದೆ. ನೀತಿ ಸಂಹಿತೆ ಪ್ರಕಾರ ದೂರನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಐಟಿ ಇಲಾಖೆಗೆ ವರ್ಗಾಯಿಸಲಾಗಿದೆ. ದೂರನ್ನು ತನಿಖೆಗೆ ಒಳಪಡಿಸಲಾಗಿದೆ. ಸಂಜೀವ ಕುಮಾರ್‌, ರಾಜ್ಯ ಮುಖ್ಯ ಚುನಾವಣಾಧಿಕಾರಿ

ಟಾಪ್ ನ್ಯೂಸ್

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.