ಜಿಲ್ಲೆಯಲ್ಲಿ ಮಾರ್ಷಲ್ ಸೈನಿಕರ ನೇಮಕ
Team Udayavani, Oct 28, 2020, 1:44 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್ ವೈರಾಣು ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಲು ಜಿಲ್ಲೆಯ ಪ್ರತಿಯೊಬ್ಬರೂ ಶ್ರಮಿಸ ಬೇಕಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಭೌತಿಕ ಅಂತರ ಸೇರಿದಂತೆ ಜಿಲ್ಲೆಯಲ್ಲಿ ಸ್ವಚ್ಛತೆ ಕಾಪಾಡಲು ಜಿಲ್ಲಾ ಕೇಂದ್ರದಲ್ಲಿ ಇಂದಿನಿಂದ ಮಾರ್ಷಲ್ ಸೈನಿಕರನ್ನು ನೇಮಿಸಲಾ ಗಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದರು.
ಚಿಕ್ಕಬಳ್ಳಾಪುರ ನಗರದ ವಿಶ್ವೇಶ್ವರಯ್ಯ ವೃತ್ತದಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾದರೂ ಸಹ ದ್ವಿತೀಯ ಹಂತದಲ್ಲಿ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರನ್ನು ಜಾಗೃತಿಗೊಳಿಸುವ ಸಲುವಾಗಿ ಅರಿವು ಮತ್ತು ಜಾಗƒತಿ ಮೂಡಿಸುವ ಜೊತೆಗೆ ಸರ್ಕಾರದ ಮಾರ್ಗಸೂಚಿಗಳನ್ನು ನಿರ್ಲಕ್ಷ್ಯ ಮಾಡುವ ನಾಗರಿಕರಿಗೆ ದಂಡ ವಿಧಿಸಲು ವಾರ್ಡ್ ಮಟ್ಟದಲ್ಲಿ ಮಾರ್ಷಲ್ ಸೈನಿಕರನ್ನು ನೇಮಕ ಮಾಡಲಾಗಿದೆ ಎಂದರು.
ದಂಡ ವಿಧಿಸಲಿದ್ದಾರೆ: ಜಿಲ್ಲೆಯ ಸ್ವಚ್ಛತಾ ಕ್ಯಾಪ್ಟನ್‌ಗಳೇ ಮಾರ್ಷಲ್‌ಗಳಾಗಿ ಕಾರ್ಯನಿರ್ವಹಿಸಲಿದ್ದು, ಅವರು ಕೋವಿಡ್ ತಡೆಗಟ್ಟುವ ಮತ್ತು ಸ್ವಚ್ಛತೆ ಕಾಪಾಡುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದ್ದಾರೆ. ಮಾಸ್ಕ್ ಧರಿಸದೆ ಓಡಾಡುವರು ಮತ್ತು ಭೌತಿಕ ಅಂತರ ಪಾಲಿಸದೆ ಇರುವವರಿಗೆ ದಂಡ ವಿಧಿಸಲಿದ್ದಾರೆ ಎಂದು ತಿಳಿಸಿದರು.
ಡಿವೈಎಸ್ಪಿ ರವಿಶಂಕರ್, ನಗರಸಭೆ ಪೌರಾಯುಕ್ತ ಲೋಹಿತ್ ಕುಮಾರ್, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಯಶಶ್ವನಿ ಉಪಸ್ಥಿತರಿದ್ದರು.
ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಿ :
ಪಾತಪಾಳ್ಯ: ಗ್ರಾಮ ಸ್ವಚ್ಛತೆ, ವೈಯಕ್ತಿಕಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ಬಿಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿರೀಶ್ ಕಶ್ಯಪ್ ತಿಳಿಸಿದರು.
ರಾಶ್ಚೆರವು ಗ್ರಾಮ ಪಂಚಾಯತಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶೇಷ ಗ್ರಾಮಸಭೆ ಹಾಗೂ ಜನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಮನೆಗಳ ಮುಂದೆ ಹರಿಸುವ ಮಲೀನ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದ್ದು,ಜನರು ಸ್ವತ್ಛತೆಗೆ ಆದ್ಯತೆ ನೀಡಬೇಕು. ಖಾಲಿ ಇರುವ ಸ್ಥಳದಲ್ಲಿ ಗಿಡಮರಗಳನ್ನು ನೆಟ್ಟು ಉತ್ತಮ ಪರಿಸರ ನಿರ್ಮಿಸಿಕೊಳ್ಳಬೇಕು. ಜ್ವರ, ನೆಗಡಿ, ಕೆಮ್ಮು ಕಂಡ ಕೂಡಲೇ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೋವಿಡ್‌ನಿಂದ ದೂರವಿರಲು ಸಾಮಾಜಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಪಿಡಿಒ ನಾರಾಯಣಸ್ವಾಮಿ ಮಾತನಾಡಿ, ಜನರ ಸಹಭಾಗಿತ್ವವಿದ್ದಾಗ ಮಾತ್ರ ಕೋವಿಡ್ ದಿಂದ ಮುಕ್ತರಾಗಬಹುದು. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದವರಿಗೆ ಗ್ರಾಪಂನಿಂದ ದಂಡ ಹಾಕಲಾಗುವುದು ಎಂದರು. ಕರ ವಸೂಲಿಗಾರ ವಿ.ನಂಜುಂಡಪ್ಪ ಡಿಇಒ ಜಿ.ವಿ.ಮಂಜುನಾಥ, ಸಿಬ್ಬಂದಿ ಸೀನಪ್ಪ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.