ಕೋವಿಡ್ ಪರೀಕ್ಷೆ ಗುರಿ ಸಾಧಿಸಿ: ಡೀಸಿ


Team Udayavani, Oct 28, 2020, 2:12 PM IST

ಕೋವಿಡ್ ಪರೀಕ್ಷೆ ಗುರಿ ಸಾಧಿಸಿ: ಡೀಸಿ

ಹಾಸನ: ಕಳೆದ 3 ದಿನಗಳಿಂದ ಕೋವಿಡ್ ಪರೀಕ್ಷೆಯ ಪ್ರಮಾಣ ಕಡಿಮೆಯಾಗಿದ್ದು ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ಗುರಿ ಪೂರ್ಣಗೊಳಿಸುವುದರ ಜತೆಗೆ ಹೋಂ ಐಸೋಲೇಷನ್‌ನಲ್ಲಿರುವವರು ಸೇರಿ ಸೋಂಕಿತರ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರನ್ನು ಹೆಚ್ಚು ಪತ್ತೆಹಚ್ಚಿ ಅವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಲ್ಲಾ ತಾಲೂಕು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು. ಅಧಿಕಾರಿಗಳಿಗೆನಿರ್ದೇಶನ:ಹೋಂ ಐಸೋಲೇ ಷನ್‌ನಲ್ಲಿರುವ ಸೋಂಕಿತರ ಮನೆಗೆ ತಹಶೀಲ್ದಾರ್‌ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು , ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿದರು.

ಸ್ವಾಬ್‌ ಪರೀಕ್ಷೆ ಕಡ್ಡಾಯವಾಗಿ ಮಾಡಿ: ತಾಲೂಕುಗಳಿಗೆ ಈಗಾಗಲೇ 20 ಮಂದಿ ಸ್ವಾಬ್‌ ಕಲೆಕ್ಟರ್‌ ಗಳನ್ನು ನೇಮಕ ಮಾಡಿಕೊಳ್ಳಲು ಆದೇಶ ನೀಡಲಾಗಿದೆ. ಅವರ ಮೂಲಕ ಹೆಚ್ಚು ಸ್ವಾಬ್‌ ಟೆಸ್ಟ್‌ ಮಾಡಿಸಿ ಗುರಿ ಸಾಧಿಸಬೇಕು. ಪ್ರತಿ ತಾಲೂಕಿಗೂ ಅಗತ್ಯವಿರುವ  ಸ್ವಾಬ್‌ ಕಲೆಕ್ಟರ್‌ಗಳನ್ನು ಅರ್ಜಿ ಮೂಲಕ ಆಹ್ವಾನಿಸಿ ವಿಜ್ಞಾನ ಪದವೀಧರರು, ನರ್ಸಿಂಗ್‌ ತರಬೇತಿ ಪಡೆದವರನ್ನು ಹಾಗೂ ಸ್ಟಾಫ್ ನರ್ಸ್ ಗಳನ್ನು ನೇಮಕ ಮಾಡಿಕೊಳ್ಳಿ. ಅವರು ಕಾರ್ಯ ನಿರ್ವಹಿಸುವ ನರ್ಸಿಂಗ್‌ ಹೋಂ ಗಳಲ್ಲಿಯೇ ಸ್ವಾಬ್‌ ಪರೀಕ್ಷೆ ಮಾಡಲು ಸೂಚಿಸಿ ಎಂದರು.

ಪರೀಕ್ಷೆಗೆ ಪ್ರೇರೇಪಿಸಲು ಸಲಹೆ:ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೋವಿಡ್ ಹೆಲ್ತ್ ಕೇರ್‌ ಸೆಂಟರ್‌ಗಳ ವರದಿಯನ್ನು ಪ್ರತಿನಿತ್ಯ ಪಡೆದು ತಾಲೂಕು ಆರೋಗ್ಯ ಅಧಿಕಾರಿಗಳು ಸಂಬಂಧಿಸಿದ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಸಾರ್ವಜನಿಕರಿಗೆ ಕೋವಿಡ್ ನಿಯಂತ್ರಣದ ಜಾಗೃತಿ ಮೂಡಿಸಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಪ್ರೇರೇಪಿಸಬೇಕು ಎಂದು ಹೇಳಿದರು.

ಕ್ರಮ ಕೈಗೊಳ್ಳಿ: ಜಿಪಂ ಸಿಇಒ ಬಿ.ಎ.ಪರಮೇಶ್‌ ಮಾತನಾಡಿ, ಗ್ರಾಪಂ ಕಚೇರಿಗೆ ಬರುವ ಜನರನ್ನು ಪರೀಕ್ಷೆ ಮಾಡಿಸಿಕೊಳ್ಳಲು ಪ್ರೇರೇಪಿಸಬೇಕು. ಸ್ತ್ರೀ ಶಕ್ತಿ ಹಾಗೂ ಸ್ವ ಸಹಾಯ ಸಂಘಗಳ ಸಂಯೋಜಕರಿಗೆ ನಿರ್ದಿಷ್ಟ ಗುರಿ ನೀಡಿ ಸಂಘದ ಸದಸ್ಯರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ಆಯಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ಕುಮಾರ್‌, ಉಪ ವಿಭಾಗಾಧಿಕಾರಿಗಳಾದ ಬಿ.ಎ. ಜಗದೀಶ್‌, ಗಿರೀಶ್‌ ನಂದನ್‌,ತಹಶೀಲ್ದಾರರು, ತಾಪಂ ಇಒಗಳು, ತಾಲೂಕು ವೈದ್ಯಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.