ಕೋವಿಡ್: ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾವಹಿಸಿ
Team Udayavani, Oct 28, 2020, 2:55 PM IST
ಮೈಸೂರು: ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾವಹಿಸಲು ರಚಿಸಿರುವ ಅಧಿಕಾರಿಗಳ ತಂಡವು ಪ್ರತಿದಿನ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಎಎಸ್‌ಐ, ಸೆಸ್ಕ್ ಮತ್ತು ನೋಡೆಲ್ ಅಧಿಕಾರಿಗಳು ಸೇರಿದಂತೆ ರಚಿಸಿರುವ ಮೂವರು ಅಧಿಕಾರಿಗಳ ತಂಡವು ಕೋವಿಡ್ ಚಿಕಿತ್ಸೆ ಸಂಬಂಧ ಖಾಸಗಿ ಆಸ್ಪತ್ರೆಗಳ ಕಾರ್ಯವೈಖರಿ ಬಗ್ಗೆ ನಿಗಾವಹಿಸಬೇಕು ಎಂದು ಹೇಳಿದರು.
ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರ ಸೂಚಿಸುವ ಸೋಂಕಿತರಿಗೆ ಮೀಸಲಿಟ್ಟಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ಹಾಸಿಗೆಗಳ ಕೊರತೆ ಉಂಟಾಗದಂತೆ ಆಸ್ಪತ್ರೆಗೆ ಭೇಟಿ ನೀಡಿ ಹಾಸಿಗೆ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆಯ ಬೇಕು ಎಂದು ತಿಳಿಸಿದರು.
ಡೆತ್ ಆಡಿಟ್: ಪ್ರತಿ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಐಸಿಎಂಆರ್ ಸೂಚಿಸುವ ಚಿಕಿತ್ಸಾ ಕ್ರಮವನ್ನು ಅನುಸರಿಸುತ್ತಿರುವ ಬಗ್ಗೆ ಮಾಹಿತಿ ಪಡೆಯಬೇಕು. ಸೋಂಕಿತರು ಯಾವ ಕಾರಣಕ್ಕೆ ಮೃತಪಟ್ಟರು ಎಂಬುದರ ಬಗ್ಗೆ ಡೆತ್ ಆಡಿಟ್ ಮಾಡವುದನ್ನು ಪರಿಶೀಲಿಸಬೇಕು ಎಂದು ತಿಳಿಸಿದರು.
ಕೋವಿಡ್ ಸೋಂಕು ತಗುಲಿದ ವ್ಯಕ್ತಿಗಳಿಗೆ ಹಾಗೂ ಕುಟುಂಬದವರಿಗೆ ಸಮಸ್ಯೆ ಉಂಟಾಗ ಬಾರದು ಎಂಬ ಸದುದ್ದೇಶದಿಂದ ತಂಡ ರಚಿಸಲಾಗಿದೆ. ಆದ್ದರಿಂದ ತಂಡದ ಅಧಿಕಾರಿಗಳು ಆಸ್ಪತ್ರೆ ಸಿಬ್ಬಂದಿಯೊಡನೆ ಪರಸ್ಪರ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಮರನಾಥ್, ನೊಡೆಲ್ ಅಧಿಕಾರಿಗಳಾದ ಡಾ. ರವಿ, ಡಾ. ಸೀತಾಲಕ್ಷ್ಮೀ, ಡಾ. ಜಗದೀಶ್, ರೂಪಶ್ರೀ, ಸೆಸ್ಕ್ ಎಂಜಿ ನಿಯರುಗಳು ಹಾಗೂ ಪೊಲೀಸ್ ಸಹಾಯಕ ವೃತ್ತ ನೀರೀಕ್ಷಕರು ಇದ್ದರು.
ಹೆಚ್ಚು ಹಣ ಪಡೆದಿದ್ದರೆರೋಗಿಗಳಿಗೆ ವಾಪಸ್ ಕೊಡಿಸಿ: ಜಿಲ್ಲಾಧಿಕಾರಿ : ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿ ಪಡಿಸಿರುವ ದರವನ್ನು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಸೋಂಕಿತರ ಕುಟುಂಬಸ್ಥರಿಂದ ಮಾಹಿತಿ ಪಡೆಯಬೇಕು. ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚು ದರ ವಿಧಿಸಿದರೆ ಅದನ್ನು ವಾಪಸ್ ಕೊಡಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ವಿವಿಧ ಬಗೆಯ ಹಾಸಿಗೆ ಪಟ್ಟಿಯನ್ನು ಪ್ರತಿದಿನ ಆಸ್ಪತ್ರೆಯ ಮುಂಭಾಗ ಪ್ರಕಟಿಸಬೇಕು. ಕೋವಿಡ್- 19 ತಗುಲಿ ಆಸ್ಪತ್ರೆಗೆ ದಾಖಲಾಗುವ ಪ್ರತಿಯೊಬ್ಬ ವ್ಯಕ್ತಿಗಳ ಸಂಪೂರ್ಣ ಮಾಹಿತಿಯನ್ನು ಎಸ್ 3 ಪೋರ್ಟಲ್‌ನಲ್ಲಿ ದಾಖಲಿಸುವುದನ್ನು ಗಮನಿಸಬೇಕು ಎಂದು ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.