ಪುರಸಭೆ ಗದ್ದುಗೆ ಗುದ್ದಾಟಕ್ಕೆ ತಿರುವು
ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿ ಮಾಡಿದ ಜೆಡಿಎಸ್-ಪಕ್ಷೇತರ ಸದಸ್ಯರು
Team Udayavani, Oct 28, 2020, 4:17 PM IST
ಮುದ್ದೇಬಿಹಾಳ: ತೀವ್ರ ಕುತೂಹಲ ಮೂಡಿಸಿದ್ದ ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯು ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಸದಸ್ಯರ ತಂಡ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರನ್ನು ಸೋಮವಾರ ಸಂಜೆ ಭೇಟಿ ಮಾಡಿದ ನಂತರ ತಿರುವು ಪಡೆದುಕೊಂಡಂತಾಗಿದೆ.
ಪುರಸಭೆಗೆ 23 ಸದಸ್ಯರಿದ್ದಾರೆ. ಬಿಜೆಪಿ, ಕಾಂಗ್ರೆಸ್ ತಲಾ 8, ಜೆಡಿಎಸ್ 2, ಪಕ್ಷೇತರರು 5 ಸ್ಥಾನ ಗಳಿಸಿದ್ದಾರೆ. ಐವರು ಪಕ್ಷೇತರ ಸದಸ್ಯರು ಪಟ್ಟಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಪರಿಗಣಿಸಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿಯವರನ್ನು ಬೆಂಬಲಿಸುತ್ತಾರೆ. ಹೀಗಾಗಿ ಪುರಸಭೆ ಆಡಳಿತಾ ಧಿಕಾರ ಬಿಜೆಪಿಗೆ ದೊರಕುತ್ತದೆ ಎನ್ನುವ ಮಾತು ಮೊದಲೆಲ್ಲ ಕೇಳಿ ಬರುತ್ತಿತ್ತು. ಆದರೆ ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಸದಸ್ಯರ ಒಗ್ಗಟ್ಟು ಪ್ರದರ್ಶನ ಬಿಜೆಪಿ ವಲಯದಲ್ಲಿ ನಿರಾಸೆ ಮೂಡಿಸಿದಂತಾಗಿದೆ.
ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ಹೊರ ಬಿದ್ದ ಮೂರು ದಿನಗಳ ನಂತರದಿಂದ ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಸದಸ್ಯರು ಒಟ್ಟಾಗಿಅಜ್ಞಾತ ಸ್ಥಳದಲ್ಲಿದ್ದರು. ಈಗ ಚುನಾವಣೆಗೆ ಎರಡುದಿನ ಇರುವಂತೆಯೇ ಸೋಮವಾರ ರಾತ್ರಿ ಎಲ್ಲರೂಡಿಕೆಶಿ ಭೇಟಿ ಮಾಡಿ ಒಗ್ಗಟ್ಟು ಪ್ರದರ್ಶಿಸಿದ ಫೋಟೊ ಬಹಿರಂಗಗೊಂಡು ಪುರಸಭೆ ಆಡಳಿತ ಗಾದಿಗೆ ಸ್ಪಷ್ಟತೆ ನೀಡಿದಂತಾಗಿದೆ.
ಏತನ್ಮಧ್ಯೆ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಜೆಡಿಎಸ್ ಸದಸ್ಯೆ ಪ್ರತಿಭಾ ಅಂಗಡಗೇರಿ ಅವರು ಡಿಕೆಶಿ ಸಮ್ಮುಖ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಕಾಂಗ್ರೆಸ್, ಪಕ್ಷೇತರ ಸದಸ್ಯರು ಇವರನ್ನೇಬೆಂಬಲಿಸಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದ್ದು ಇದಕ್ಕೆ ಸ್ಪಷ್ಟತೆ ಅ. 28ರ ಮಧ್ಯಾಹ್ನದ ನಂತರ ದೊರಕಲಿದೆ.
ಮೀಸಲಾತಿಯ ಲಾಭ: ಈ ಪುರಸಭೆಗೆ 31-8-2018ರಂದು ಚುನಾವಣೆ ನಡೆದು 3-9-2018ರಂದು ಮತ ಎಣಿಕೆ ನಂತರ ಫಲಿತಾಂಶ ಘೋಷಣೆ ಆಗಿತ್ತು. ಆಗ ಯಾವ ಪಕ್ಷಕ್ಕೂ ಬಹುಮತ ಲಭಿಸದೆ ಅತಂತ್ರ ಸ್ಥಿತಿ ನಿರ್ಮಾಣಗೊಂಡಿತ್ತು. ಬಿಜೆಪಿ, ಜೆಡಿಎಸ್, ಪಕ್ಷೇತರರ ಬಳಿ ಇರದ, ಕಾಂಗ್ರೆಸ್ ಬಳಿ ಮಾತ್ರ ಇದ್ದ ಮಹಿಳಾ ಎಸ್ಸಿ ಮೀಸಲಾತಿಗೆ ಅಧ್ಯಕ್ಷ ಸ್ಥಾನ ದೊರಕುವಂತೆ ಆಗಿನ ಸಮ್ಮಿಶ್ರ ಸರ್ಕಾರ ಆದೇಶ ಹೊರಡಿಸಿತ್ತು.
ಆಗ ಕಾಂಗ್ರೆಸ್ ಗೆಲುವಿನ ನಗೆ ಬೀರಿತ್ತು. ಇದೇ ಅ. 9ರಂದು ಬಿಜೆಪಿ ಸರ್ಕಾರ ಹೊಸ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿದಾಗ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಯಿತು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹಾಗೂ ಪಕ್ಷೇತರರಲ್ಲಿ ಈ ಮೀಸಲಾತಿಯಆಕಾಂಕ್ಷಿಗಳು ಇದ್ದರು. ಅಂತಿಮವಾಗಿ ಕಾಂಗ್ರೆಸ್, ಜೆಡಿಎಸ್, ಪಕ್ಷೇತರರು ಒಗ್ಗಟ್ಟು ಪ್ರದರ್ಶಿಸಿ ಮತ್ತೇ ಕಾಂಗ್ರೆಸ್‌ಗೆ ಅ ಧಿಕಾರ ಹಿಡಿಯುವ ಯೋಗ ಒಲಿದಂತಾಗಿದೆ.
-ಡಿ.ಬಿ. ವಡವಡಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.