ಮುಂಬೈ vs ಆರ್ ಸಿಬಿ ಬಲಾಢ್ಯರ ಕಾದಾಟ : ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

Team Udayavani, Oct 28, 2020, 7:00 PM IST

.0.0.

ಅಬುಧಾಬಿ : ಐಪಿಎಲ್ ನ 48 ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ದುಕೊಂಡಿದೆ.

ಆರ್ ಸಿಬಿ ಹಾಗೂ ಮುಂಬೈ ಎರಡು ತಂಡಗಳು ಈ ಬಾರಿಯ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದು. ಇಂದಿನ ಪಂದ್ಯ ಜಿದ್ದಾಜಿದ್ದಿಯ ಹೋರಾಟದೊಂದಿಗೆ ಸಾಗುವ ನಿರೀಕ್ಷೆಯಿದೆ. ಎರಡು ತಂಡಗಳಿಗೂ ಪ್ಲೇ ಆಫ್ ಬಾಗಿಲು ಸುಗಮವಾಗಿದ್ದು, ಅಧಿಕೃತವಾಗಿ ಒಂದು ಗೆಲುವಿನ ದೂರದಲ್ಲಿದೆ.

ಸೇಡು ತೀರಿಸೀತೇ ಮುಂಬೈ?
ಆರ್‌ಸಿಬಿ ಮತ್ತು ಮುಂಬೈ 7 ಜಯದೊಂದಿಗೆ 14 ಅಂಕ ಹೊಂದಿವೆ. ಈ ಋತುವಿನ ಮೊದಲ ಪಂದ್ಯದಲ್ಲಿ ಮುಂಬೈ ವಿರುದ್ಧ ಆರ್‌ಸಿಬಿ ಸೂಪರ್‌ ಓವರ್‌ನಲ್ಲಿ ಗೆಲುವು ದಾಖಲಿಸಿತ್ತು. ಮುಂಬೈ ಇದಕ್ಕೆ ಸೇಡು ತೀರಿಸಿಕೊಂಡೀತೇ ಎಂಬುದೊಂದು ಪ್ರಶ್ನೆ ಹಾಗೂ ನಿರೀಕ್ಷೆ.
ಸ್ನಾಯು ಸೆಳೆತದಿಂದ ಕಳೆದೆರಡು ಪಂದ್ಯದಲ್ಲಿ ಆಡದಿದ್ದ ಮುಂಬೈ ನಾಯಕ ರೋಹಿತ್‌ ಶರ್ಮ ಈ ಪಂದ್ಯದಲ್ಲೂ ಆಡುವುದು ಅನುಮಾನ. ಹೀಗಾಗಿ ಪೊಲಾರ್ಡ್‌ ಅವರೇ ಸತತ 3ನೇ ಪಂದ್ಯದಲ್ಲಿ ಮುಂಬೈಯನ್ನು ಮುನ್ನಡೆಸಬೇಕಾಗುತ್ತದೆ.

ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗದಲ್ಲಿ ಮುಂಬೈ ಮೇಲ್ನೋಟಕ್ಕೆ ಬಲಿಷ್ಠವಾಗಿ ಗೋಚರಿಸುತ್ತಿದೆ. ಎಲ್ಲ ಕ್ರಮಾಂಕದಲ್ಲಿಯೂ ತಂಡಕ್ಕೆ ಆಸರೆಯಾಗಬಲ್ಲ ಬ್ಯಾಟ್ಸ್‌ಮನ್‌ಗಳೇ ತುಂಬಿದ್ದಾರೆ. ಕ್ವಿಂಟನ್‌ ಡಿ ಕಾಕ್‌ (374 ರನ್‌), ಇಶಾನ್‌ ಕಿಶನ್‌ (298 ರನ್‌) ತಂಡಕ್ಕೆ ಉತ್ತಮ ಆರಂಭ ನೀಡಿದರೆ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್‌ ಯಾದವ್‌ (283 ರನ್‌), ಪಾಂಡ್ಯ ಬ್ರದರ್ಸ್‌ ಮತ್ತು ಕೈರನ್‌ ಪೊಲಾರ್ಡ್‌ (214 ನ್‌) ಸಿಡಿದು ನಿಂತು ತಂಡದ ಮೊತ್ತವನ್ನು 200ರ ಸನಿಹಕ್ಕೆ ತಲುಪಿಸುವಲ್ಲಿ ಸೈ ಎನಿಸಿಕೊಂಡಿದ್ದಾರೆ.

ಬೌಲಿಂಗ್‌ ಕೂಡ ಹೆಚ್ಚು ಘಾತಕವಾಗಿದೆ. ಯಾರ್ಕರ್‌ ಸ್ಪೆಷಲಿಸ್ಟ್‌ ಬುಮ್ರಾ, ಕಿವೀಸ್‌ ವೇಗಿ ಟ್ರೆಂಟ್‌ ಬೌಲ್ಟ್ ಮತ್ತು ಪ್ಯಾಟಿನ್ಸನ್‌ ಎದುರಾಳಿ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕಬಲ್ಲರಾದರೂ ರಾಜಸ್ಥಾನ್‌ ಎದುರಿನ ಕಳೆದ ಪಂದ್ಯದಲ್ಲಿ ಏನಾಯಿತೆಂಬುದು ಎಲ್ಲರಿಗೂ ತಿಳಿದೇ ಇದೆ. 196 ರನ್ನುಗಳ ಗುರಿಯನ್ನು ರಾಜಸ್ಥಾನ್‌ ಎರಡೇ ವಿಕೆಟ್‌ ನಷ್ಟದಲ್ಲಿ ಯಶಸ್ವಿಯಾಗಿ ಬೆನ್ನಟ್ಟಿತ್ತು. ಸ್ಟೋಕ್ಸ್‌ ಸೆಂಚುರಿ ಸ್ಟ್ರೋಕ್‌ ಮೂಲಕ ಮುಂಬೈಗೆ ಆಘಾತವಿಕ್ಕಿದ್ದರು.

ಆರ್‌ಸಿಬಿ ಗೆ ಕೊಹ್ಲಿ, ಎಬಿಡಿ ಬೆನ್ನೆಲುಬು  : 
ಆರ್‌ಸಿಬಿ ತಂಡಕ್ಕೆ ನಾಯಕ ವಿರಾಟ್‌ ಕೊಹ್ಲಿ (415 ರನ್‌) ಮತ್ತು ಎಬಿ ಡಿ ವಿಲಿಯರ್ (324 ರನ್‌) ಅವರೇ ಬೆನ್ನೆಲುಬಾಗಿದ್ದಾರೆ. ಆಸೀಸ್‌ ಹಿಟ್ಟರ್‌ ಆರನ್‌ ಫಿಂಚ್‌ (236 ರನ್‌) ಮತ್ತು ದೇವದತ್‌ ಪಡಿಕ್ಕಲ್‌ (343 ರನ್‌) ಹೆಚ್ಚು ಕಾಲ ಕ್ರೀಸ್‌ ಆಕ್ರಮಿಸಿಕೊಳ್ಳುವ ಅನಿವಾರ್ಯತೆ ಎಂದಿಗಿಂತ ಹೆಚ್ಚೇ ಇದೆ. ತಂಡದ ಕೆಳ ಹಂತದ ಬ್ಯಾಟಿಂಗ್‌ ನಂಬಲರ್ಹವಲ್ಲ. ಆರ್‌ಸಿಬಿ ಬೌಲಿಂಗ್‌ ಈ ಬಾರಿ ಹೆಚ್ಚು ಘಾತಕವಾಗಿ ಮೂಡಿಬಂದಿದೆ. ಮಾರಿಸ್‌, ಸಿರಾಜ್‌, ಉದಾನ, ಚಹಲ್‌ ಉತ್ತಮ ಲಯದಲ್ಲಿದ್ದಾರೆ. ಆದರೆ ಕಳೆದ ಪಂದ್ಯದಲ್ಲಿ ಗಾಯಾಳಾ ಸೈನಿ ಆಡುವುದು ಅನುಮಾನ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ( ಪ್ಲೇಯಿಂಗ್ ಇಲೆವೆನ್): ದೇವದತ್ ಪಡಿಕ್ಕಲ್, ಜೋಶ್ ಫಿಲಿಪ್ (ಕೀಪರ್), ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ಗುರ್ಕೀರತ್ ಸಿಂಗ್ ಮನ್, ಶಿವಮ್ ದುಬೆ, ಕ್ರಿಸ್ ಮೋರಿಸ್, ವಾಷಿಂಗ್ಟನ್ ಸುಂದರ್, ಡೇಲ್ ಸ್ಟೇನ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್

ಮುಂಬೈ ಇಂಡಿಯನ್ಸ್ ( ಪ್ಲೇಯಿಂಗ್  ಇಲೆವೆನ್): ಇಶಾನ್ ಕಿಶನ್, ಕ್ವಿಂಟನ್ ಡಿ ಕಾಕ್ (ಕೀಪರ್), ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್ (ನಾಯಕ), ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ

ಟಾಪ್ ನ್ಯೂಸ್

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.