ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು
Team Udayavani, Oct 28, 2020, 9:50 PM IST
ಮುಂಬೈ: ಶಿವಸೇನೆ ಸಂಸದ ಪರ್ಭಾನಿ ಸಂಜಯ್ ಜಾಧವ್ ತಮಗೆ ಜೀವ ಬೆದರಿಕೆಯಿದ್ದು, ತಮ್ಮ ಸಂಸದ ಸ್ಥಾನಕ್ಕೆ ಕುತ್ತು ತರಲು 2 ಕೋಟಿ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿ ಬುಧವಾರ ಪೊಲೀಸರಿಗೆ ದೂರು ನೀಡಿದ್ದಾರೆ.
ಸಂಸದರು ಹಲವು ಅಭಿಮಾನಿಗಳೊಂದಿಗೆ ನಾನಾಲ್ಪೇಟ್ನ ಪೊಲೀಸ್ ಠಾಣೆಗೆ ಧಾವಿಸಿ, ದೂರು ಸಲ್ಲಿಸಿದ್ದಾರೆ. “ನನ್ನ ಜೀವಕ್ಕೆ ಮತ್ತು ಸಂಸದ ಸ್ಥಾನಕ್ಕೆ ಕುತ್ತು ತರಲು ಪ್ರಭಾವಿ ವ್ಯಕ್ತಿಯೊಬ್ಬರು ನಾಂದೇಡ್ನ ಗ್ಯಾಂಗ್ ಒಂದಕ್ಕೆ 2 ಕೋಟಿ ರೂ. ಸುಪಾರಿ ನೀಡಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಪೊಲೀಸರು ತನಿಖೆ ಆರಂಭಿಸಿದ್ದು, ಇಲ್ಲಿಯವರೆಗೆ ಯಾವುದೇ ಆರೋಪಿ ಪತ್ತೆಯಾಗಿಲ್ಲ. ಕೆಲ ದಿನಗಳ ಹಿಂದೆ ಎಪಿಎಂಸಿ ಆಡಳಿತ ಮಂಡಳಿಯಲ್ಲಿ ಎನ್ಸಿಪಿಗೆ ಅನಧಿಕೃತವಾಗಿ ಪ್ರಾತಿನಿಧ್ಯ ನೀಡಿರುವುದನ್ನು ವಿರೋಧಿಸಿ ಜಾಧವ್ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಬಳಿಕ ಸಿಎಂ ಉದ್ಧವ್ ಠಾಕ್ರೆ ಮನವೊಲಿಸಿದ ನಂತರ ರಾಜೀನಾಮೆ ವಾಪಸು ಪಡೆದಿದ್ದರು. ಸುಪಾರಿ ನೀಡಿದ ಪ್ರಭಾವಿ ವ್ಯಕ್ತಿ ಯಾರು ಎಂಬುದು ದೂರಿನಲ್ಲಿ ಸ್ಪಷ್ಟವಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
EVM Issue: ಇವಿಎಂಗೂ ಮುನ್ನ ರಾಹುಲ್ರನ್ನು ಬದಲಿಸಿ ಕಾಂಗ್ರೆಸ್ಗೆ ಬಿಜೆಪಿ ಟಾಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.