ದೊಡ್ಡಬಳ್ಳಾಪುರ: ಮತದಾನದ ವೇಳೆ ಜೆಡಿಎಸ್‌-ಬಿಜೆಪಿ ಕಾರ್ಯಕರ್ತರ ಘರ್ಷಣೆ


Team Udayavani, Oct 29, 2020, 10:28 AM IST

ದೊಡ್ಡಬಳ್ಳಾಪುರ: ಮತದಾನದ ವೇಳೆ ಜೆಡಿಎಸ್‌-ಬಿಜೆಪಿ ಕಾರ್ಯಕರ್ತರ ಘರ್ಷಣೆ

ದೊಡ್ಡಬಳ್ಳಾಪುರ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ನಡೆಯುತ್ತಿದ್ದ ವೇಳೆ ತಾಲೂಕು ಕಚೇರಿಯಲ್ಲಿನ ಮತದಾನ ಕೇಂದ್ರದ ಸಮೀಪ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದ ಘಟನೆ ಜರುಗಿತು. ತಾಲೂಕು ಕಚೇರಿ ಮತದಾನ ಕೇಂದ್ರದ ಮತಗಟ್ಟೆ ಆವರಣದ ಒಳಗೆ ನಿಯಮ ಬಾಹೀರವಾಗಿ ಬಿಜೆಪಿ ಕಾರ್ಯಕರ್ತರು ಪ್ರಚಾರ ಮಾಡುತ್ತಿದ್ದಾರೆಂದು ಆರೋಪಿಸಿ ಜೆಡಿಎಸ್‌ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಇದೇ ವಿಚಾರಕ್ಕೆ ಎರಡು ಪಕ್ಷಗಳ ಮುಖಂಡರ ನಡುವೆ ಮಾತಿನ ಚಕಮಕಿ ವಿಕೋಪಕ್ಕೆ ತಿರುಗತೊಡಗಿತು. ತಕ್ಷಣವೇ ಆಗಮಿಸಿದ ಪೊಲೀಸರು ಎರಡೂ ಗುಂಪಿನ ಮುಖಂಡರನ್ನು ಮತಗಟ್ಟೆ ಕೇಂದ್ರದಿಂದ ದೂರ ಕಳುಹಿಸಿ ಪರಿಸ್ಥಿತಿ ಶಾಂತಗೊಳಿಸಿದರು.

ಉಳಿದಂತೆ ತಾಲೂಕಿನ ಐದು ಹೋಬಳಿ ಕೇಂದ್ರಗಳ ಮತಗಟ್ಟೆಗಳಲ್ಲಿ ಮತದಾನ ಶಾಂತಿಯುತವಾಗಿ ನಡೆದಿದೆ.

ಶೇ.93 ರಷ್ಟು ಮತದಾನ: ವಿಧಾನ ಪರಿಷತ್‌ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬುಧವಾರ ನಡೆದ ಮತದಾನದಲ್ಲಿ ತಾಲೂಕಿನಲ್ಲಿ ಶೇ.93.06 ರಷ್ಟು ಮತಚಲಾವಣೆಯಾಗಿದೆ ಎಂದು ತಹಶೀಲ್ದಾರ್‌ ಟಿ. ಎಸ್‌.ಶಿವರಾಜ್‌ ತಿಳಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.90ರಷ್ಟು ಮತದಾನ

ನಗರ ವ್ಯಾಪ್ತಿಯ ಕಸಬಾ ಮತಗಟ್ಟೆಯಲ್ಲಿ ಶೇ.92.08, ತಾಲೂಕಿನ ಮಧುರೆ ಮತಗಟ್ಟೆಯಲ್ಲಿ ಶೇ.100ರಷ್ಟು ಮತದಾನವಾಗಿದೆ. ಸಾಸಲು ಮತಗಟ್ಟೆಯಲ್ಲಿ ಶೇ.90.24, ದೊಡ್ಡಬೆಳವಂಗಲ ಶೇ.95 ರಷ್ಟು ಮತದಾನ ನಡೆದಿದೆ. ತೂಬಗೆರೆ ಮತಗಟ್ಟೆಯಲ್ಲಿ ಶೇ.92 ರಷ್ಟು ಮತ ಚಲಾವಣೆಯಾಗಿವೆ.

ಸಿಬ್ಬಂದಿಗೆ ಪಿಪಿಇ ಕಿಟ್: ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲಾ ಸಿಬ್ಬಂದಿ ಪಿಪಿಇ ಕಿಟ್‌ ಧರಿಸಿ ಕರ್ತವ್ಯ ನಿರ್ವಹಿಸಿದರು. ಮತ ಚಲಾಯಿಸಲು ಬರುವ ಪ್ರತಿಯೊಬ್ಬರ ಕೈಗೆ ಸ್ಯಾನಿಟೈಸರ್‌ ಹಾಕಲಾಯಿತು. ಕೋವಿಡ್‌ ಮಾರ್ಗ ಸೂಚಿಗಳನ್ನು ಪ್ರತಿ ಮತಗಟ್ಟೆಯಲ್ಲೂ ಕಡ್ಡಾಯವಾಗಿ ಪಾಲಿಸಲಾಗಿದೆ. ಮತಗಟ್ಟೆಯಲ್ಲಿ ಸೋಂಕು ಹರಡದಂತೆ ಅಗತ್ಯ ಇರುವ
ಎಲ್ಲಾ ಸುರಕ್ಷಿತ ನಿಯಮಗಳನ್ನು ಕೈಗೊಳ್ಳಲಾಗಿತ್ತು ಎಂದು ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

14-ragi-crop

Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.