ಉಪಚುನಾವಣೆ ಬಳಿಕ ರಾಜ್ಯ ರಾಜಕೀಯ ಬದಲಾವಣೆ, ಮತ್ತೆ ಚುನಾವಣೆ ಆಗಲಿದೆ: ಜಮೀರ್ ಅಹಮದ್
Team Udayavani, Oct 29, 2020, 11:43 AM IST
ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆ ಮುಗಿದ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಬಹುದು. ಮತ್ತೆ ಚುನಾವಣೆ ಬರಬಹುದು ಎಂದು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆ ನೋಡಿದರೆ ಉಪಚುನಾವಣೆಯ ನಂತರ ಮತ್ತೆ ಚುನಾವಣೆ ಬರುವ ಸಾಧ್ಯತೆ ಕಂಡು ಬರುತ್ತಿದೆ ಎಂದರು.
ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕು ಎನ್ನುವುದು ಜನರ ಅಭಿಪ್ರಾಯ. ನನ್ನ ವೈಯಕ್ತಿಕ ಅಭಿಪ್ರಾಯ ಕೂಡ ಹೌದು. ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಜನರ ಅಭಿಪ್ರಾಯವನ್ನ ನಾನು ಹೇಳಿದ್ದೇನೆ. ಆದರೆ ಕಾಂಗ್ರೆಸ್ ನಲ್ಲಿ ಹೈಕಮಾಂಡ್ ಸಿಎಂ ಯಾರಾಗಬೇಕು ಎಂಬುದನ್ನ ನಿರ್ಧರಿಸುತ್ತದೆ ಎಂದರು.
ಇದನ್ನೂ ಓದಿ:ಮಿನಿಸಮರ: ಶಿರಾ ಕ್ಷೇತ್ರದ ಪ್ರತಿ ಚುನಾವಣೆಯಲ್ಲಿ ಬಿಜೆಪಿ ಕಳೆದುಕೊಂಡಿದ್ದೇ ಹೆಚ್ಚು!
ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ನನ್ನ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆ ಆಗುವುದಿಲ್ಲ. ಒಂದು ವೇಳೆ ನನಗೆ ಶಿಸ್ತುಕ್ರಮದ ನೋಟಿಸ್ ಕೊಟ್ಟರೆ ಅದಕ್ಕೆ ಉತ್ತರಿಸ್ತೇನೆ ಎಂದು ಜಮೀರ್ ಅಹಮದ್ ಖಾನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.