![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Oct 29, 2020, 12:05 PM IST
ಬೆಂಗಳೂರು: ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ಕೂಡಲೇ ಪರಿಹಾರ ಒದಗಿಸುವುದರ ಜೊತೆಗೆ ಹಾನಿಗೊಳಗಾಗಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಮರು ನಿರ್ಮಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ, ಅಲ್ಲಿಯ ಪರಿಸ್ಥಿತಿ ಆಧರಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಈ ವರ್ಷದ ಹಿಂದೆಂದಿಗಿಂತಲೂ ದುಪ್ಪಟ್ಟು ಪ್ರಮಾಣದಲ್ಲಿ ಹಾನಿಯಾಗಿದೆ. ಶೇಂಗಾ, ಈರುಳ್ಳಿ, ಅಡಿಕೆ, ಭತ್ತ, ಕಾಫಿ, ಮೆಣಸು, ಜೋಳ, ಹಲವು ದ್ವಿದಳ ಧಾನ್ಯಗಳು, ಹತ್ತಿ, ಮೆಣಸು, ಮೆಣಸಿನಕಾಯಿ, ರಾಗಿ, ಸಜ್ಜೆ ಮುಂತಾದ ಬೆಳೆಗಳೆಲ್ಲ ಕೊಳೆತು ಹೋಗಿವೆ, ಕೊಚ್ಚಿ ಹೋಗಿವೆ ಇಲ್ಲ ಉದುರಿ ಹೋಗಿವೆ ಎಂದಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಜನ ಈ ಶತಮಾನ ಕಂಡರಿಯದಷ್ಟು ಭೀಕರ ಪ್ರಮಾಣದ ಅತಿವೃಷ್ಟಿಯಿಂದಾಗಿ ತಮ್ಮ ಸಂಪೂರ್ಣ ಬದುಕನ್ನು ಕಳೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳು ವೈಮಾನಿಕ ಸಮೀಕ್ಷೆ ನಡೆಸಿದ್ದಾರೆಯೇ ಹೊರತು ಜನರ, ಜನಪ್ರತಿನಿಧಿಗಳೊಂದಿಗೆ ಮಾತನಾಡಿ ಅವರ ಸಮಸ್ಯೆಗಳನ್ನು ಅರಿಯುವ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ.
ಇದನ್ನೂ ಓದಿ:ಮಿನಿಸಮರ: ಶಿರಾ ಕ್ಷೇತ್ರದ ಪ್ರತಿ ಚುನಾವಣೆಯಲ್ಲಿ ಬಿಜೆಪಿ ಕಳೆದುಕೊಂಡಿದ್ದೇ ಹೆಚ್ಚು!
ಜಿಲ್ಲಾ ಉಸ್ತುವಾರಿ ಸಚಿವರುಗಳು ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಚುನಾವಣಾ ಪ್ರಚಾರಕ್ಕೆ ಹೋದರೆ ಹೊರತು ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲಿಲ್ಲ. ಕಂದಾಯ ಸಚಿವರು ಕಾಟಾಚಾರಕ್ಕೆ ಹೋಗಿ ಭೇಟಿ ಕೊಟ್ಟಂತೆ ಮಾಡಿದರು. ಅವರ ವರ್ತನೆಯ ಕುರಿತು ಜನ ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೇಲಿಂದ ಮೇಲೆ ಬಂದೊದಗುತ್ತಿರುವ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲಾಗದೆ ಜನ ಅಸಹಾಯಕರಾಗಿ ಕಂಗೆಟ್ಟು ಕೂತಿದ್ದಾರೆ. ಇಂಥ ಹೊತ್ತಿನಲ್ಲಿ ಸರ್ಕಾರ ಜನರ ಜೊತೆ ನಿಲ್ಲಬೇಕಿತ್ತು. ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಸರ್ಕಾರದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಬರೆದಿದ್ದಾರೆ.
ಸರ್ಕಾರ ಜನರನ್ನು ಶತ್ರುಗಳು ಎಂದು ನೋಡದೆ ಅವರ ಸಂಕಷ್ಟಕ್ಕೆ ಸ್ಪಂದಿಸಿ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು. ಸಂಕಷ್ಟದಲ್ಲಿರುವ ಜನರಿಗೆ ಈ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು. ನಿಮಗೆ ಆ ಧೈರ್ಯವಿರದಿದ್ದರೆ ವಿರೋಧ ಪಕ್ಷದ ಮುಖಂಡರನ್ನು ಒಳಗೊಂಡ ನಿಯೋಗವನ್ನು ಕರೆದುಕೊಂಡು ಹೋಗಿ, ನಾವು ಕೇಳುತ್ತೇವೆ. ನಾವು ನಿಂತು ಹಣ ಬಿಡುಗಡೆ ಮಾಡುವಂತೆ ಒತ್ತಡ ಹಾಕುತ್ತೇವೆ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.