ಚಾಮರಾಜನಗರ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
Team Udayavani, Oct 29, 2020, 7:46 PM IST
ಚಾಮರಾಜನಗರ: ಅಪ್ರಾಪ್ತ ವಯಸ್ಸಿನ ಪರಿಶಿಷ್ಟ ಜನಾಂಗಕ್ಕೆ ಸೇರಿದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಜೀವಾವಧಿ ಶಿಕ್ಷೆ ಹಾಗೂ 1ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಚಾಮರಾಜನಗರ ಪಟ್ಟಣದ ಗಾಳಿಪುರ ಬಡಾವಣೆಯ ಹಾಲಿ ಸರಗೂರಿನಲ್ಲಿ ವಾಸವಾಗಿರುವ ಶಮಿವುಲ್ಲಾ ಅಲಿಯಾಸ್ ಡಾಮ್ಟೆ, ಅಲಿಯಾಸ್ ಸಲ್ಮಾನ್ ಅಲಿಯಾಸ್ ಪ್ರೀತಮ್ ಶಿಕ್ಷೆಗೆ ಒಳಗಾಗಿರುವ ವ್ಯಕ್ತಿ. ಈತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಸಂಬಂಧ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ಆರೋಪಿ ವಿರುದ್ದ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಶಮಿವುಲ್ಲಾ ಸ್ವವ್ ಹಾಗೂ ಮಿಕ್ಸಿ ರಿಪೇರಿ ಕೆಲಸ ಮಾಡುವವನಾಗಿದ್ದು, ಚಾಮರಾಜನಗರ ತಾಲೂಕಿನ ಗ್ರಾಮವೊಂದರ ಪರಿಶಿಷ್ಟ ಜನಾಂಗದ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ಮಿಕ್ಸಿಯನ್ನು ರಿಪೇರಿಗೆ ಕೊಟ್ಟಿದ್ದಾಗ ಪರಿಚಯ ಬೆಳೆಸಿದ್ದ. ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ 2018 ಜೂ.6 ರಂದು ತಮಿಳುನಾಡಿನ ತಮಿಳ್‌ಪುರಕ್ಕೆ ಹಾಗೂ ಮಾರನೆಯ ದಿನ ಮೈಸೂರು ಜಿಲ್ಲೆಯ ಹುಣಸೂರಿನ ಲಾಡ್ಜ್ ವೊಂದಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದ.
ಇದನ್ನೂ ಓದಿ: ಚಕ್ರಬಡ್ಡಿ ಮನ್ನಾಕ್ಕಾಗಿ ಗ್ರಾಹಕರು ಅರ್ಜಿ ಹಾಕಬೇಕಾಗಿಲ್ಲ! ವಿತ್ತ ಸಚಿವಾಲಯ ಸ್ಪಷ್ಟನೆ
ಈ ಬಗ್ಗೆ ರಾಮಸಮುದ್ರ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಂದಿನ ಡಿವೈಎಸ್ಪಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಅಪ್ರಾಪ್ತ ಬಾಲಕಿ ಮೇಲೆ ಎಸಗಿರುವ ಕೃತ್ಯವು ರುಜುವತಾಗಿದೆ ಎಂದು ತೀರ್ಮಾನಿಸಿರುವ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸದಾಶಿವ ಸುಲ್ತಾನ್ ಪುರಿ ಅವರು ಆರೋಪಿಗೆ ಕಲಂ 366 ಐಪಿಸಿ ಅನ್ವಯ 5 ವರ್ಷ ಸಜೆ ಮತ್ತು 50 ಸಾವಿರ ರೂ ದಂಡ ಮತ್ತು ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಜೆ, ಕಲಂ 376 (ಎನ್) ಐಪಿಸಿ ಅನ್ವಯ 10 ವರ್ಷ ಕಠಿಣ ಸಜೆ ಹಾಗೂ 1 ಲಕ್ಷ ರೂ ದಂಡ ಹಾಗೂ ದಂಡ ತೆರಲು ತಪ್ಪಿದಲ್ಲಿ 1 ವರ್ಷ ಸಜೆ ವಿಧಿಸಿದ್ದಾರೆ. ಅಲ್ಲದೇ ಪೋಕ್ಸೊ ಕಾಯ್ದೆ ಕಲಂ 4ರ ಅನ್ವಯ 7 ವರ್ಷ ಕಠಿಣ ಸಜೆ ಮತ್ತು 1 ಲಕ್ಷ ರೂ ದಂಡ ಹಾಗೂ ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಜೆ, ಪೋಕ್ಸೊ ಕಾಯ್ದೆ ಕಲಂ 6ರ ಪ್ರಕಾರ 10 ವರ್ಷ ಕಠಿಣ ಸಜೆ ಮತ್ತು 1 ಲಕ್ಷ ರೂ ದಂಡ ಹಾಗೂ ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಜೆಯನ್ನು ವಿಧಿಸಿದ್ದಾರೆ. ಅಲ್ಲದೇ ಕಲಂ ಎಸ್‌ಸಿ, ಎಸ್‌ಟಿ ಕಾಯ್ದೆ ಅನುಸಾರ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂ ದಂಡ ಮತ್ತು ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು.
ಇದನ್ನೂ ಓದಿ: ಸಿದ್ದರಾಮಯ್ಯ CM ಆಗಲಿ ಎಂಬುದು ವೈಯಕ್ತಿಕ ಅಭಿಪ್ರಾಯ; ನೊಟೀಸ್ ಕೊಟ್ರೆ ಉತ್ತರಿಸುತ್ತೇನೆ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.